ಬೆಂಗಳೂರು: ಶಾಲಾ-ಕಾಲೇಜುಗಳಲ್ಲಿ ಕೃತಕ ಬುದ್ಧಿಮತ್ತೆ ಹಾಗೂ ಕಂಪ್ಯೂಟರ್ ಆಧಾರಿತ ಶಿಕ್ಷಣ ಜಾರಿಗೆ ತರಲು ಶಿಕ್ಷಣ ಇಲಾಖೆ ಮುಂದಾಗಿರುವುದಕ್ಕೆ ಖಾಸಗಿ ಶಾಲೆಗಳ ಒಕ್ಕೂಟ ವಿರೋಧ ವ್ಯಕ್ತಪಡಿಸಿದೆ.
ರಾಜ್ಯ ಸರ್ಕಾರ ವಿದ್ಯಾರ್ಥಿಗಳ ಹಿತವನ್ನು ಬದಿಗೊತ್ತಿ ಕಂಪ್ಯೂಟರ್ ಹಾಗೂ ಎಐ ಆಧಾರಿತ ಶಿಕ್ಷಣವನ್ನು ಜಾರಿಗೆ ತರಲು ಮುಂದಾಗಿರುವುದು ಅವೈಜ್ಞಾನಿಕ ಪದ್ಧತಿಯಾಗಿದೆ ಎಂದು ಕ್ಯಾಮ್ಸ್ ಅಧ್ಯಕ್ಷ ಶಶಿಕುಮಾರ್ ಹೇಳಿದ್ದಾರೆ.
ಮಕ್ಕಳ ಶಿಕ್ಷಣದಲ್ಲಿ ಈಗಾಗಲೇ ಬಹುಭಾಷಾ ಕಲಿಕೆಗೆ ಅವಕಾಶವಿದ್ದು, ಭಾಷೆಗಳ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಬೇಕಾಗಿದೆ. ಈ ವ್ಯವಸ್ಥೆಯನ್ನು ಬದಿಗೊತ್ತಿ ಕಂಪ್ಯೂಟರ್ ಅಥವಾ ಎಐ ಶಿಕ್ಷಣವನ್ನು ತರುವ ಅಗತ್ಯವಿಲ್ಲ ಎಂದು ಅವರು ತಿಳಿಸಿದ್ದಾರೆ.
ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ರಾಜ್ಯದಲ್ಲಿ ಬಹುಭಾಷಾ ಶಿಕ್ಷಣ ವ್ಯವಸ್ಥೆಯನ್ನು ಮತ್ತಷ್ಟು ಮುಂದುವರಿಸಬೇಕು ಎಂದು ಶಶಿಕುಮಾರ್ ಒತ್ತಾಯಿಸಿದ್ದಾರೆ.



