ರಾಮನಗರ: ಜಿಲ್ಲೆಯ ಕನಕಪುರ ತಾಲೂಕಿನ ಗುಣಗನಹಳ್ಳಿ ಗ್ರಾಮದಲ್ಲಿ ಹಳ್ಳದ ನೀರಿನಲ್ಲಿ ಮುಳುಗಿ ಇಬ್ಬರು ಮಕ್ಕಳು ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ.
ಗ್ರಾಮದ ಶ್ರೀನಿವಾಸ್ ಹಾಗೂ ಪದ್ಮಾವತಿ ದಂಪತಿಯ ಪುತ್ರ ಮಧು[14] ಮತ್ತು ನಾರಾಯಣ್ ಹಾಗೂ ಮಾಧುರಿ ದಂಪತಿಯ ಪುತ್ರ ಶ್ರೀಹರಿ[8] ಮೃತ ಮಕ್ಕಳು.
ಕೆಲ ದಿನಗಳಿಂದ ಸುರಿದ ಮಳೆಯಿಂದ ಗ್ರಾಮದ ಹೊರವಲಯದಲ್ಲಿದ್ದ ಹಳ್ಳ ತುಂಬಿಕೊಂಡಿತ್ತು. ನಿನ್ನೆ ಮಕ್ಕಳು ತೋಟಕ್ಕೆ ಆಟವಾಡಲು ತೆರಳಿದ್ದರು. ಈ ವೇಳೆ ಹಳ್ಳದಲ್ಲಿ ಈಜಾಡಲು ಹೋಗಿ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.
ಘಟನೆ ತಿಳಿಯುತ್ತಿದ್ದಂತೆ ಕೋಡಿಹಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇಬ್ಬರು ಮಕ್ಕಳನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.



