ಹಾಸನ: ಬೈಕ್ ಸ್ಕಿಡ್ ಆಗಿ ಹೇಮಾವತಿ ನಾಲೆಗೆ ಬಿದ್ದು ಯುವಕನೊಬ್ಬ ಮೃತಪಟ್ಟಿರುವ ಘಟನೆ ಚನ್ನರಾಯಪಟ್ಟಣದಲ್ಲಿ ನಡೆದಿದೆ.
ಮೃತನನ್ನು ಹೇಮಂತ್ (24) ಎಂದು ಗುರುತಿಸಲಾಗಿದೆ.
ಕೆಇಬಿಯಲ್ಲಿ ನೌಕರನಾಗಿದ್ದ ಹೇಮಂತ್ ನಿನ್ನೆ ಸಂಜೆ ಕಚೇರಿ ಸಮೀಪದ ಹೇಮಾವತಿ ನಾಲೆ ಬಳಿ ಬೈಕ್‌ನಲ್ಲಿ ತೆರಳುತ್ತಿದ್ದರು. ಈ ವೇಳೆ ಬೈಕ್ ಸ್ಕಿಡ್ ಆಗಿದ್ದು, ನಿಯಂತ್ರಣ ತಪ್ಪಿ ನಾಲೆಗೆ ಬಿದ್ದಿದ್ದಾರೆ.
ನಾಲೆಯಲ್ಲಿ ಭಾರಿ ಪ್ರಮಾಣದಲ್ಲಿ ನೀರು ಹರಿಯುತ್ತಿದ್ದ ಹಿನ್ನೆಲೆಯಲ್ಲಿ ಹೇಮಂತ್ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇಂದು ಅಗ್ನಿಶಾಮಕ ದಳದ ಸಿಬ್ಬಂದಿ ನಾಲೆಯಲ್ಲಿ ಶೋಧ ಕಾರ್ಯ ನಡೆಸಿ ಹೇಮಂತ್ ಅವರ ಮೃತದೇಹ ಪತ್ತೆಗೆ ಕಾರ್ಯಾಚರಣೆ ಕೈಗೊಳ್ಳಲಿದ್ದಾರೆ.



