ಬೆಂಗಳೂರು: ಜೆಡಿಎಸ್ ಮುಖಂಡ ಅಂದಾನಪ್ಪ ಅವರ ಲಗ್ಗೆರೆಯಲ್ಲಿರುವ ಮನೆಯಲ್ಲಿ ಕೆಲಸ ಮಾಡುತ್ತಿದ್ದ 65 ವರ್ಷದ ನಾಗರಾಜ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ನಾಗರಾಜ್ ಅವರು ಕಳೆದ ನಾಲ್ಕೈದು ವರ್ಷಗಳಿಂದ ಅಂದಾನಪ್ಪ ಅವರ ಮನೆಯಲ್ಲಿ ವಾಚ್‌ಮನ್ ಆಗಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಇಂದು ಬೆಳಗ್ಗೆ ಇದ್ದಕ್ಕಿದ್ದಂತೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಅಂದಾನಪ್ಪ ಅವರ ಮನೆಯವರು ನಾಗರಾಜ್ ಅವರಿಗೆ ಕಿರುಕುಳ ನೀಡುತ್ತಿದ್ದರು ಎಂಬ ಆರೋಪ ಕೇಳಿಬಂದಿದ್ದು, ಇದರಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.
ಮಾಹಿತಿ ತಿಳಿದು ರಾಜಗೋಪಾಲನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಾಗರಾಜ್ ಅವರ ಆತ್ಮಹತ್ಯೆಗೆ ನಿಖರ ಕಾರಣವೇನು ಎಂಬುದರ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.



