HomeCrime Newsರಸ್ತೆ ಬದಿ ಪೊದೆಯಲ್ಲಿ ಯುವಕನ ಶವ ಪತ್ತೆ: ಕ್ಷುಲ್ಲಕ ಕಾರಣಕ್ಕೆ ಗಲಾಟೆ, ದೊಣ್ಣೆ-ಮಾರಕಾಸ್ತ್ರಗಳಿಂದ ಹೊಡೆದು ಕೊಲೆ

ರಸ್ತೆ ಬದಿ ಪೊದೆಯಲ್ಲಿ ಯುವಕನ ಶವ ಪತ್ತೆ: ಕ್ಷುಲ್ಲಕ ಕಾರಣಕ್ಕೆ ಗಲಾಟೆ, ದೊಣ್ಣೆ-ಮಾರಕಾಸ್ತ್ರಗಳಿಂದ ಹೊಡೆದು ಕೊಲೆ

ಆನೇಕಲ್: ರಸ್ತೆ ಬದಿಯ ಪೊದೆಯಲ್ಲಿ ಯುವಕನ ಶವ ಪತ್ತೆಯಾಗಿದ್ದ ಪ್ರಕರಣಕ್ಕೆ ಇದೀಗ ಟ್ವಿಸ್ಟ್‌ ಸಿಕ್ಕಿದೆ. ಕೊಲೆಯಾದ ಯುವಕನ ಗುರುತನ್ನು ಪೊಲೀಸರು ಪತ್ತೆಹಚ್ಚಿದ್ದು, ಕ್ಷುಲ್ಲಕ ಕಾರಣಕ್ಕೆ ನಡೆದ ಗಲಾಟೆಯೇ ಕೊಲೆಗೆ ಕಾರಣವಾಗಿದೆ ಎನ್ನಲಾಗಿದೆ.

ಆನೇಕಲ್ ತಾಲ್ಲೂಕಿನ ರಾಮಕೃಷ್ಣಪುರ ರಸ್ತೆಯಲ್ಲಿ ಈ ಘಟನೆ ನಡೆದಿದ್ದು, ಕೊಲೆಯಾದ ಯುವಕನನ್ನು ಸುಭಾಷ್ ಎಂದು ಗುರುತಿಸಲಾಗಿದೆ. ಮೃತ ಸುಭಾಷ್ ಆನೇಕಲ್ ತಾಲ್ಲೂಕಿನ ಕರ್ಪೂರು ಗ್ರಾಮದ ನಿವಾಸಿ ಎಂದು ತಿಳಿದುಬಂದಿದೆ.

ಸುಭಾಷ್ ಈ ಹಿಂದೆ ಡಕಾಯಿತಿ ಹಾಗೂ ಕಳ್ಳತನ ಸೇರಿದಂತೆ ಹಲವು ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಗ್ಯಾಂಗ್ ಕಟ್ಟಿಕೊಂಡು ಆಟೋದಲ್ಲಿ ಓಡಾಡುತ್ತಿದ್ದ ಸುಭಾಷ್, ಇದೇ ರೀತಿಯಾಗಿ 23ನೇ ತಾರೀಖಿನ ರಾತ್ರಿ ತನ್ನ ಸಹಚರರೊಂದಿಗೆ ಆಟೋದಲ್ಲಿ ರಾಮಕೃಷ್ಣಪುರ ರಸ್ತೆಗೆ ಬಂದಿದ್ದ ಎನ್ನಲಾಗಿದೆ.

ಅಲ್ಲಿಯೇ ಎಲ್ಲರೂ ಸೇರಿ ಎಣ್ಣೆ ಪಾರ್ಟಿ ಮಾಡಿದ್ದಾರೆ. ಬಳಿಕ ಕ್ಷುಲ್ಲಕ ಕಾರಣಕ್ಕೆ ಗಲಾಟೆ ಆರಂಭವಾಗಿದ್ದು, ಮಾತಿಗೆ ಮಾತು ಬೆಳೆದು ಮಾರಾಮಾರಿಯಾಗಿದೆ ಎನ್ನಲಾಗಿದೆ.

ಈ ವೇಳೆ ದೊಣ್ಣೆ ಹಾಗೂ ಮಾರಕಾಸ್ತ್ರಗಳಿಂದ ಸುಭಾಷ್ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಲಾಗಿದೆ ಎಂದು ತಿಳಿದುಬಂದಿದೆ. ಕೊಲೆ ಬಳಿಕ ಆರೋಪಿಗಳು ಆಟೋದಲ್ಲೇ ಸ್ಥಳದಿಂದ ಪರಾರಿಯಾಗಿದ್ದಾರೆ ಎನ್ನಲಾಗಿದೆ.

ಘಟನೆಗೆ ಸಂಬಂಧಿಸಿದಂತೆ ಸೂರ್ಯನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ. ಪರಾರಿಯಾಗಿರುವ ಆರೋಪಿಗಳಿಗಾಗಿ ಪೊಲೀಸರು ತಲಾಶ್ ಮುಂದುವರಿಸಿದ್ದಾರೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img