HomeIndia Newsಎಎಸ್‌ಐ ಮೇಲೆ ಫೈರಿಂಗ್ ಕೇಸ್: ಪೊಲೀಸ್ ಕಸ್ಟಡಿಯಿಂದ ಆರೋಪಿ ಪರಾರಿ!

ಎಎಸ್‌ಐ ಮೇಲೆ ಫೈರಿಂಗ್ ಕೇಸ್: ಪೊಲೀಸ್ ಕಸ್ಟಡಿಯಿಂದ ಆರೋಪಿ ಪರಾರಿ!

For Dai;y Updates Join Our whatsapp Group

ಅಮೃತಸರ: ಪೊಲೀಸ್ ಅಧಿಕಾರಿಯೊಬ್ಬರ ಮೇಲೆ ಗುಂಡಿನ ದಾಳಿ ನಡೆಸಿದ ಪ್ರಕರಣದಲ್ಲಿ ಬಂಧಿಸಲಾಗಿದ್ದ ಆರೋಪಿ ಪೊಲೀಸ್ ಕಸ್ಟಡಿಯಿಂದ ಪರಾರಿಯಾಗಿರುವ ಘಟನೆ ಅಮೃತಸರದಲ್ಲಿ ನಡೆದಿದೆ.

ಘಟನೆ ಬಳಿಕ ಕರ್ತವ್ಯಲೋಪದ ಆರೋಪದ ಮೇಲೆ ರಾಜಾಸನ್ಸಿ ಪೊಲೀಸ್ ಠಾಣೆಯ ಠಾಣಾಧಿಕಾರಿ ಇನ್ಸ್‌ಪೆಕ್ಟರ್ ಗುರುಪ್ರೀತ್ ಸಿಂಗ್ ಅವರನ್ನು ಅಮಾನತುಗೊಳಿಸಲಾಗಿದೆ. ಸೆಪ್ಟೆಂಬರ್ 11ರಂದು ಅಜ್ನಾಲಾದ ಭಾಲಾ ಪ್ರದೇಶದಲ್ಲಿ ಎಎಸ್‌ಐ ಜಸ್ವಂತ್ ಸಿಂಗ್ ಅವರು ಬೈಕ್‌ನಲ್ಲಿ ತೆರಳುತ್ತಿದ್ದರು. ಈ ವೇಳೆ ಇಬ್ಬರು ದುಷ್ಕರ್ಮಿಗಳು ಬೈಕ್‌ನಲ್ಲಿ ಅವರನ್ನು ಹಿಂಬಾಲಿಸಿ ಗುಂಡಿನ ದಾಳಿ ನಡೆಸಿದ್ದರು. ದುಷ್ಕರ್ಮಿಗಳು ಹಾರಿಸಿದ ಗುಂಡು ಜಸ್ವಂತ್ ಸಿಂಗ್ ಅವರು ಧರಿಸಿದ್ದ ಪೇಟವನ್ನು ಹೊಕ್ಕು ತಲೆಗೆ ಸಣ್ಣ ಗಾಯವಾಗಿತ್ತು. ಗಾಯಗೊಂಡಿದ್ದರೂ ಅವರು ತಾವೇ ಬೈಕ್ ಚಲಾಯಿಸಿಕೊಂಡು ಪೊಲೀಸ್ ಠಾಣೆಗೆ ತೆರಳಿದ್ದರು.

ಪ್ರಕರಣದ ತನಿಖೆ ಆರಂಭಿಸಿದ ಪೊಲೀಸರು ಸುತ್ತಮುತ್ತಲಿನ ಸಿಸಿಟಿವಿ ಕ್ಯಾಮೆರಾಗಳ ದೃಶ್ಯಾವಳಿಗಳನ್ನು ಪರಿಶೀಲಿಸಿದ್ದರು. ಈ ವೇಳೆ ದೊರೆತ ಸುಳಿವಿನ ಆಧಾರದ ಮೇಲೆ ಕರಣ್ ಎಂಬಾತನನ್ನು ಬಂಧಿಸಲಾಗಿತ್ತು. ಬಳಿಕ ನ್ಯಾಯಾಲಯದ ಮುಂದೆ ಹಾಜರುಪಡಿಸಿದಾಗ, ಐದು ದಿನಗಳ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿತ್ತು.

ತನಿಖೆಯ ವೇಳೆ ಆರೋಪಿ ಅಡಗಿಸಿಟ್ಟಿದ್ದ ಶಸ್ತ್ರಾಸ್ತ್ರವನ್ನು ಪತ್ತೆಹಚ್ಚುವ ಸಲುವಾಗಿ ಸೆಪ್ಟೆಂಬರ್ 23ರ ರಾತ್ರಿ ಪೊಲೀಸರು ಆತನನ್ನು ಮಜಿಥಾ ಪ್ರದೇಶಕ್ಕೆ ಕರೆದೊಯ್ದಿದ್ದರು. ಆದರೆ ಈ ವೇಳೆ ಕರಣ್ ಪೊಲೀಸರ ವಶದಿಂದ ತಪ್ಪಿಸಿಕೊಂಡು ಪರಾರಿಯಾಗಿದ್ದಾನೆ. ಆರೋಪಿ ಪರಾರಿಯಾದ ಹಿನ್ನೆಲೆಯಲ್ಲಿ ಪೊಲೀಸರು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಶೋಧ ಕಾರ್ಯ ಚುರುಕುಗೊಳಿಸಿದ್ದಾರೆ.

ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಅಮೃತಸರ ಗ್ರಾಮಾಂತರ ಎಸ್‌ಎಸ್‌ಪಿ ಕನ್ವಲ್‌ಪ್ರೀತ್ ಸಿಂಗ್ ಚಾಹಲ್ ಅವರು ರಾಜಾಸನ್ಸಿ ಪೊಲೀಸ್ ಠಾಣೆಯ ಎಸ್‌ಎಚ್‌ಒ ಇನ್ಸ್‌ಪೆಕ್ಟರ್ ಗುರುಪ್ರೀತ್ ಸಿಂಗ್ ಅವರನ್ನು ಕರ್ತವ್ಯಲೋಪದ ಆರೋಪದಡಿ ಅಮಾನತುಗೊಳಿಸಿದ್ದಾರೆ.

ಆರೋಪಿ ಪರಾರಿಯಾಗಲು ನಿಖರವಾಗಿ ಏನು ಕಾರಣ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಪೊಲೀಸ್ ಕಸ್ಟಡಿಯಿಂದ ತಪ್ಪಿಸಿಕೊಳ್ಳಲು ಆತ ಹೇಗೆ ಯಶಸ್ವಿಯಾದ ಎಂಬ ಬಗ್ಗೆಯೂ ತನಿಖೆ ನಡೆಯುತ್ತಿದೆ. ಇದೇ ವೇಳೆ ಎಎಸ್‌ಐ ಜಸ್ವಂತ್ ಸಿಂಗ್ ಅವರ ಮೇಲಿನ ಗುಂಡಿನ ದಾಳಿಗೆ ಸಂಬಂಧಿಸಿದಂತೆ ಪ್ರಕರಣದಲ್ಲಿ ಭಾಗಿಯಾಗಿರುವ ಇತರ ವ್ಯಕ್ತಿಗಳ ಪತ್ತೆಗಾಗಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img