HomeIndia Newsಸಿಕ್ಕಿಂನಲ್ಲಿ ಭಾರಿ ಭೂಕುಸಿತ; ನಾಲ್ವರು ಸಾವು, 128ಕ್ಕೂ ಹೆಚ್ಚು ಜನರ ಸ್ಥಳಾಂತರ

ಸಿಕ್ಕಿಂನಲ್ಲಿ ಭಾರಿ ಭೂಕುಸಿತ; ನಾಲ್ವರು ಸಾವು, 128ಕ್ಕೂ ಹೆಚ್ಚು ಜನರ ಸ್ಥಳಾಂತರ

For Dai;y Updates Join Our whatsapp Group

ಗ್ಯಾಂಗ್ಟಾಕ್: ಸಿಕ್ಕಿಂನ ತಡಾಂಗ್‌ನಲ್ಲಿ ಗುರುವಾರ ತಡರಾತ್ರಿ ಸುರಿದ ಭಾರಿ ಮಳೆಯಿಂದ ರಿಂಬಿ ನದಿ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭೂಕುಸಿತ ಸಂಭವಿಸಿದೆ.

ಗುಡ್ಡದಿಂದ ಭಾರಿ ಪ್ರಮಾಣದಲ್ಲಿ ಮಣ್ಣು ಹಾಗೂ ಬಂಡೆಗಳು ಕುಸಿದು ಜನವಸತಿ ಪ್ರದೇಶಗಳಿಗೆ ಹಾನಿಯಾಗಿದೆ.

ಘಟನೆಯಲ್ಲಿ ಈವರೆಗೆ ನಾಲ್ವರು ಮೃತಪಟ್ಟಿದ್ದಾರೆ. ಅಪಾಯದ ವಲಯದಲ್ಲಿದ್ದ 128ಕ್ಕೂ ಹೆಚ್ಚು ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ. ಸಂತ್ರಸ್ತರಿಗಾಗಿ ಸಿಂಗ್ಲಿತಾಮ್‌ನಲ್ಲಿ ತುರ್ತು ಪರಿಹಾರ ಕೇಂದ್ರವನ್ನು ತೆರೆಯಲಾಗಿದೆ.

ಭೂಕುಸಿತದಿಂದ ಕುಸಿದ ಮಣ್ಣು ಮತ್ತು ಬಂಡೆಗಳು ರಸ್ತೆಯ ಮೇಲೆ ಬಿದ್ದಿರುವುದರಿಂದ ರಿಂಬಿ–ಯುಕ್ಸೋಮ್ ಮುಖ್ಯ ರಸ್ತೆ ಸಂಪೂರ್ಣ ಬಂದ್ ಆಗಿದೆ.

ಇನ್ನು ರಿಂಬಿ ನದಿಗೆ ಅಡ್ಡಲಾಗಿ ಮಣ್ಣು ಕುಸಿದಿರುವ ಪರಿಣಾಮ ನೀರಿನ ಹರಿವಿನ ದಿಕ್ಕು ಬದಲಾಗಿದೆ. ಇದರಿಂದ ರಸ್ತೆ ಹಾಗೂ ಸುತ್ತಮುತ್ತಲಿನ ಭೂ ಪ್ರದೇಶ ಸವೆತಕ್ಕೊಳಗಾಗುತ್ತಿದೆ.

ನದಿಯ ನೀರು ಸಂಗ್ರಹವಾಗಿ ಕೃತಕ ಸರೋವರ ನಿರ್ಮಾಣವಾಗುವ ಆತಂಕವೂ ಎದುರಾಗಿದೆ. ಹೀಗಾಗಿ ತಗ್ಗು ಪ್ರದೇಶಗಳಲ್ಲಿ ವಾಸಿಸುವ ಜನರಿಗೆ ಎಚ್ಚರಿಕೆ ನೀಡಲಾಗಿದೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img