HomeKarnataka Newsಕರ್ನಾಟಕದಲ್ಲಿ 1.50 ಕೋಟಿ ಹೆಸರು ಕೈಬಿಟ್ಟು, 65 ಲಕ್ಷ ಮತ ಶಿಫ್ಟ್ ಮಾಡಲಾಗಿದೆ: BJP ವಿರುದ್ಧ...

ಕರ್ನಾಟಕದಲ್ಲಿ 1.50 ಕೋಟಿ ಹೆಸರು ಕೈಬಿಟ್ಟು, 65 ಲಕ್ಷ ಮತ ಶಿಫ್ಟ್ ಮಾಡಲಾಗಿದೆ: BJP ವಿರುದ್ಧ ಬಿ.ಕೆ. ಹರಿಪ್ರಸಾದ್ ವಾಗ್ದಾಳಿ

For Dai;y Updates Join Our whatsapp Group

ಬೆಂಗಳೂರು: ದೇಶದಲ್ಲಿ ಯುವ ಹಾಗೂ ‘ಝೆನ್-ಜಿ’ (Gen-Z) ಮತದಾರರ ಹಕ್ಕುಗಳನ್ನು ಕಸಿಯುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ ಎಂದು ಬಿ.ಕೆ. ಹರಿಪ್ರಸಾದ್ ಗಂಭೀರ ಆರೋಪ ಮಾಡಿದ್ದಾರೆ. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಚುನಾವಣಾ ಆಯೋಗದ ವಿರುದ್ಧ ಕಾಂಗ್ರೆಸ್ ಹಮ್ಮಿಕೊಂಡಿದ್ದ ಬೃಹತ್ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.

2015ರಿಂದ ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಚುನಾವಣಾ ಆಯೋಗದಲ್ಲಿ ಅಕ್ರಮ ನಡೆಯುತ್ತಿದೆ ಎಂದ ಹರಿಪ್ರಸಾದ್, “ಕರ್ನಾಟಕದಲ್ಲಿ ಸುಮಾರು 1.50 ಕೋಟಿ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ ಹಾಗೂ 65 ಲಕ್ಷ ಮತಗಳನ್ನು ಶಿಫ್ಟ್ ಮಾಡಲಾಗಿದೆ. ದೇಶಾದ್ಯಂತ ಒಟ್ಟು 13 ಕೋಟಿ ಮತಗಳನ್ನು ಡಿಲೀಟ್ ಮಾಡಲಾಗಿದೆ” ಎಂದು ಕಿಡಿಕಾರಿದರು. ಬಿಹಾರದಲ್ಲಿ 64 ಲಕ್ಷ ಹಾಗೂ ಪಶ್ಚಿಮ ಬಂಗಾಳದಲ್ಲಿ 38 ಲಕ್ಷ ಮತದಾರರಿಗೆ ನೋಟಿಸ್ ನೀಡಿ ಹಕ್ಕುಗಳನ್ನು ಮೊಟಕುಗೊಳಿಸಲಾಗಿದೆ ಎಂದು ದೂರಿದರು.

ಚುನಾವಣಾ ಆಯೋಗದ ಒಳಗಡೆಯೇ ಆಯುಕ್ತರ ನಡುವೆ ಭಿನ್ನಮತವಿದೆ ಎಂದು ಪ್ರತಿಪಾದಿಸಿದ ಅವರು, 14 ಪ್ರಮುಖ ವಿಚಾರಗಳಿಗೆ ಇಬ್ಬರು ಚುನಾವಣಾ ಆಯುಕ್ತರು ವಿರೋಧ ವ್ಯಕ್ತಪಡಿಸಿದ್ದರೂ ಅದನ್ನು ಪರಿಗಣಿಸಿಲ್ಲ. ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಅವರು ಗೌಪ್ಯವಾಗಿ ಆಯೋಗಕ್ಕೆ ಸೂಚನೆಗಳನ್ನು ನೀಡುತ್ತಿದ್ದಾರೆ ಎಂದು ಆರೋಪಿಸಿದರು.

 ರಾಜೀವ್ ಗಾಂಧಿ ಅವರು ಯುವಕರಿಗೆ ಹೆಚ್ಚಿನ ಅಧಿಕಾರ ನೀಡಲು 18ನೇ ವಯಸ್ಸಿಗೆ ಮತದಾನದ ಹಕ್ಕು ತಂದಿದ್ದರು. ಆದರೆ ರಾಹುಲ್ ಗಾಂಧಿ ಅವರು ಮಹದೇವಪುರ ಸೇರಿದಂತೆ ಹಲವು ಕ್ಷೇತ್ರಗಳ ಅಕ್ರಮಗಳನ್ನು ಬಹಿರಂಗಪಡಿಸಿದರೂ ಸೂಕ್ತ ಕ್ರಮ ಕೈಗೊಂಡಿಲ್ಲ. ಪ್ರಜಾಪ್ರಭುತ್ವದ ಬುನಾದಿಯನ್ನೇ ಅಲ್ಲಾಡಿಸುತ್ತಿರುವ ಈ ವ್ಯವಸ್ಥೆಯ ವಿರುದ್ಧ ಜನ ಈಗಲಾದರೂ ಎಚ್ಚೆತ್ತುಕೊಳ್ಳಬೇಕು ಎಂದು ಅವರು ಕರೆ ನೀಡಿದರು.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img