HomeKarnataka Newsಮಂತ್ರಾಲಯಕ್ಕೆ ತೆರಳುತ್ತಿದ್ದ ಟಿಟಿ ವಾಹನ ಪಲ್ಟಿ; 10ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ!

ಮಂತ್ರಾಲಯಕ್ಕೆ ತೆರಳುತ್ತಿದ್ದ ಟಿಟಿ ವಾಹನ ಪಲ್ಟಿ; 10ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ!

For Dai;y Updates Join Our whatsapp Group

ಚಿತ್ರದುರ್ಗ: ಮಂತ್ರಾಲಯಕ್ಕೆ ತೆರಳುತ್ತಿದ್ದ ಟಿಟಿ ವಾಹನ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ 10ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಕೋಡಿಹಳ್ಳಿ ಗೇಟ್ ಬಳಿ ನಡೆದಿದೆ.

ಚಳ್ಳಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ. ಮಂತ್ರಾಲಯಕ್ಕೆ ತೆರಳುತ್ತಿದ್ದ ಟಿಟಿ ವಾಹನದಲ್ಲಿ ಹಲವು ಮಂದಿ ಪ್ರಯಾಣಿಸುತ್ತಿದ್ದರು. ಕೋಡಿಹಳ್ಳಿ ಗೇಟ್ ಬಳಿ ತೆರಳುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಟಿಟಿ ವಾಹನ ಡಿವೈಡರ್‌ಗೆ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ವಾಹನ ಪಲ್ಟಿಯಾಗಿದ್ದು, ವಾಹನದಲ್ಲಿದ್ದ 10ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯಗಳಾಗಿವೆ.

ಘಟನೆ ಸಂಭವಿಸುತ್ತಿದ್ದಂತೆ ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಸ್ಥಳೀಯರು ಕೂಡಲೇ ಗಾಯಾಳುಗಳ ನೆರವಿಗೆ ಧಾವಿಸಿದ್ದಾರೆ. ಬಳಿಕ ಗಾಯಗೊಂಡವರನ್ನು ಚಳ್ಳಕೆರೆ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಅಪಘಾತದ ಮಾಹಿತಿ ತಿಳಿದು ಚಳ್ಳಕೆರೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಚಾಲಕನ ನಿಯಂತ್ರಣ ತಪ್ಪಿದ್ದೇ ಅಪಘಾತಕ್ಕೆ ಕಾರಣ ಎನ್ನಲಾಗುತ್ತಿದ್ದು, ಘಟನೆ ಕುರಿತು ಪೊಲೀಸರು ಹೆಚ್ಚಿನ ಮಾಹಿತಿ ಕಲೆಹಾಕುತ್ತಿದ್ದಾರೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img