HomeEntertainmentಸಿನಿಮಾ ಹೆಸರಲ್ಲಿ ವಿದೇಶಕ್ಕೆ ಹಣ: ನಟಿ ರಕುಲ್ ಪ್ರೀತ್ ಸಿಂಗ್ ಮನೆಗೆ ಎಂಟ್ರಿ ಕೊಟ್ಟ ಐಟಿ...

ಸಿನಿಮಾ ಹೆಸರಲ್ಲಿ ವಿದೇಶಕ್ಕೆ ಹಣ: ನಟಿ ರಕುಲ್ ಪ್ರೀತ್ ಸಿಂಗ್ ಮನೆಗೆ ಎಂಟ್ರಿ ಕೊಟ್ಟ ಐಟಿ ಅಧಿಕಾರಿಗಳು..!

For Dai;y Updates Join Our whatsapp Group

ಬಾಲಿವುಡ್‌ನಲ್ಲಿ ಮತ್ತೊಮ್ಮೆ ಐಟಿ ದಾಳಿಯ ಸದ್ದು ಕೇಳಿಬಂದಿದೆ. ಸಿನಿಮಾ ಯೋಜನೆಗಳ ಹೆಸರಿನಲ್ಲಿ ವಿದೇಶಕ್ಕೆ ಅಕ್ರಮವಾಗಿ ಹಣ ರವಾನಿಸಲಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಹಲವು ಸ್ಥಳಗಳಲ್ಲಿ ಶೋಧ ನಡೆಸುತ್ತಿದ್ದಾರೆ.

ನಟಿ ರಕುಲ್ ಪ್ರೀತ್ ಸಿಂಗ್, ನಿರ್ಮಾಪಕ ವಾಶು ಭಗ್ನಾನಿ ಹಾಗೂ ಪನೋರಮಾ ಸ್ಟುಡಿಯೋಸ್ಗೆ ಸಂಬಂಧಿಸಿದ ಸ್ಥಳಗಳೂ ಶೋಧದ ವ್ಯಾಪ್ತಿಗೆ ಬಂದಿವೆ. ಒಂದಲ್ಲ… ಎರಡಲ್ಲ… ಸುಮಾರು 12 ಸ್ಥಳಗಳಲ್ಲಿ ಏಕಕಾಲಕ್ಕೆ ಶೋಧ ನಡೆಯುತ್ತಿದೆ ಎನ್ನಲಾಗಿದೆ.

ಬಾಲಿವುಡ್ ಮತ್ತು ದಕ್ಷಿಣ ಭಾರತದ ಸಿನಿಮಾಗಳ ಮೂಲಕ ಹೆಸರು ಮಾಡಿರುವ ರಕುಲ್ ಪ್ರೀತ್ ಸಿಂಗ್ ಅವರ ನಿವಾಸದಲ್ಲೂ ಐಟಿ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಚಿತ್ರ ನಿರ್ಮಾಣ ಯೋಜನೆಗಳು ಹಾಗೂ ಅವುಗಳಿಗೆ ಸಂಬಂಧಿಸಿದ ಹಣಕಾಸು ವ್ಯವಹಾರಗಳೇ ಈ ಶೋಧದ ಪ್ರಮುಖ ಕೇಂದ್ರಬಿಂದು ಎನ್ನಲಾಗುತ್ತಿದೆ.

ಆದರೆ ಗಮನಿಸಬೇಕಾದ ಸಂಗತಿ ಏನೆಂದರೆ, ಅಕ್ರಮ ಹಣ ವರ್ಗಾವಣೆ ನಡೆದಿದೆ ಎಂಬ ಆರೋಪ ಇನ್ನೂ ತನಿಖೆಯ ಹಂತದಲ್ಲಿದೆ. ಶೋಧದ ವೇಳೆ ಏನು ಪತ್ತೆಯಾಗಿದೆ ಎಂಬ ಬಗ್ಗೆ ಆದಾಯ ತೆರಿಗೆ ಇಲಾಖೆಯಿಂದ ಸಂಪೂರ್ಣ ಅಧಿಕೃತ ಮಾಹಿತಿ ಹೊರಬರಬೇಕಿದೆ.

ಬಾಲಿವುಡ್‌ನ ಖ್ಯಾತ ನಿರ್ಮಾಪಕ ವಾಶು ಭಗ್ನಾನಿ ಅವರಿಗೆ ಸಂಬಂಧಿಸಿದ ಸ್ಥಳಗಳಲ್ಲೂ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.

ಅವರ ಪೂಜಾ ಎಂಟರ್‌ಟೈನ್‌ಮೆಂಟ್ ಬ್ಯಾನರ್‌ನಲ್ಲಿ ರಕುಲ್ ಪ್ರೀತ್ ಸಿಂಗ್ ಅಭಿನಯಿಸಿದ್ದ ‘ಮೇರೆ ಹಸ್ಬೆಂಡ್ ಕಿ ಬಿವಿ’ ಸಿನಿಮಾ 2025ರ ಫೆಬ್ರವರಿ 21ರಂದು ಬಿಡುಗಡೆಯಾಗಿತ್ತು.

ಇದೀಗ ಸಿನಿಮಾ ನಿರ್ಮಾಣಕ್ಕೆ ಸಂಬಂಧಿಸಿದ ಹಣಕಾಸು ವ್ಯವಹಾರಗಳ ಕುರಿತು ತನಿಖೆ ನಡೆಯುತ್ತಿರುವುದು ಬಾಲಿವುಡ್ ವಲಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ. ಮತ್ತೊಂದೆಡೆ ಪನೋರಮಾ ಸ್ಟುಡಿಯೋಸ್‌ಗೆ ಸಂಬಂಧಿಸಿದ ಸ್ಥಳಗಳಲ್ಲೂ ಶೋಧ ನಡೆಯುತ್ತಿದೆ ಎನ್ನಲಾಗಿದೆ.

ಹಲವು ದೊಡ್ಡ ಸಿನಿಮಾಗಳನ್ನು ನಿರ್ಮಿಸಿರುವ ಈ ಸಂಸ್ಥೆಯ ಹಣಕಾಸು ವ್ಯವಹಾರಗಳ ಬಗ್ಗೆಯೂ ಅಧಿಕಾರಿಗಳು ಮಾಹಿತಿ ಸಂಗ್ರಹಿಸುತ್ತಿದ್ದಾರೆ ಎನ್ನಲಾಗಿದೆ. ಒಟ್ಟಿನಲ್ಲಿ… ಬೆಳ್ಳಿತೆರೆಯಲ್ಲಿ ಕೋಟಿ ಕೋಟಿ ಬಜೆಟ್‌ನಲ್ಲಿ ಸಿನಿಮಾ ಮಾಡುವ ಬಾಲಿವುಡ್ ಮಂದಿಯ ಹಣಕಾಸು ವ್ಯವಹಾರಗಳತ್ತ ಈಗ ಐಟಿ ಕಣ್ಣು ನೆಟ್ಟಿದೆ.

ಸಿನಿಮಾ ಪ್ರಾಜೆಕ್ಟ್‌ಗಳ ಹೆಸರಿನಲ್ಲಿ ನಿಜಕ್ಕೂ ವಿದೇಶಕ್ಕೆ ಅಕ್ರಮವಾಗಿ ಹಣ ಹೋಗಿದೆಯಾ..? ಐಟಿ ಅಧಿಕಾರಿಗಳ ಶೋಧದಲ್ಲಿ ಮಹತ್ವದ ದಾಖಲೆಗಳು ಸಿಕ್ಕಿವೆಯಾ..? ಇನ್ನೂ ಯಾವೆಲ್ಲಾ ಸಿನಿಮಾ ಸೆಲೆಬ್ರಿಟಿಗಳು ತನಿಖೆಯ ರಾಡಾರ್‌ಗೆ ಬರಲಿದ್ದಾರೆ..? ಈ ಎಲ್ಲ ಪ್ರಶ್ನೆಗಳಿಗೆ ಆದಾಯ ತೆರಿಗೆ ಇಲಾಖೆಯ ತನಿಖೆ ಪೂರ್ಣಗೊಂಡ ಬಳಿಕವೇ ಸ್ಪಷ್ಟ ಉತ್ತರ ಸಿಗಬೇಕಿದೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img