HomeBengaluru NewsKarnataka Rain Alert: ರಾಜ್ಯದಲ್ಲಿ 5 ದಿನ ಭಾರೀ ಮಳೆ; 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್...

Karnataka Rain Alert: ರಾಜ್ಯದಲ್ಲಿ 5 ದಿನ ಭಾರೀ ಮಳೆ; 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ!

For Dai;y Updates Join Our whatsapp Group

ಬೆಂಗಳೂರು: ರಾಜ್ಯದ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ಐದು ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕೆಲವು ಜಿಲ್ಲೆಗಳಲ್ಲಿ ಭಾರೀ ಮಳೆಯ ನಿರೀಕ್ಷೆಯಿದ್ದು, ಮಂಗಳವಾರ ಹಲವು ಜಿಲ್ಲೆಗಳಿಗೆ ಎಚ್ಚರಿಕೆ ನೀಡಲಾಗಿದೆ.

ಮಂಗಳವಾರ ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಮಂಡ್ಯ, ಮೈಸೂರು ಹಾಗೂ ತುಮಕೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಈ ವೇಳೆ ಗಂಟೆಗೆ 30ರಿಂದ 40 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯೂ ಇದೆ.

ಇನ್ನು ಬುಧವಾರ ಬಳ್ಳಾರಿ, ಚಾಮರಾಜನಗರ, ಮಂಡ್ಯ, ಮೈಸೂರು ಹಾಗೂ ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಈ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.

ಅಕ್ಟೋಬರ್ 4ರಂದು ಬೆಂಗಳೂರು ನಗರ ಮತ್ತು ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮೈಸೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಲಾಗಿದೆ.

ಅಕ್ಟೋಬರ್ 5ರಂದು ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಹೀಗಾಗಿ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ಐದು ದಿನ ಮಳೆಯ ವಾತಾವರಣ ಮುಂದುವರಿಯುವ ನಿರೀಕ್ಷೆಯಿದೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img