ದೇಶದಲ್ಲಿ ಚಿನ್ನದ ಬೆಲೆ ಇಳಿಕೆ ಮುಂದುವರಿದಿದೆ. ಸೋಮವಾರ 230ರೂಗಳಷ್ಟು ಕುಸಿದಿದ್ದ ಚಿನ್ನದ ಬೆಲೆ, ಮಂಗಳವಾರವೂ 125ರೂಗಳಷ್ಟು ಇಳಿಕೆಯಾಗಿದೆ. ಇದರೊಂದಿಗೆ ಶುದ್ಧ ಚಿನ್ನದ ಬೆಲೆ ₹1.50 ಲಕ್ಷಕ್ಕಿಂತ ಕೆಳಗೆ ಬಂದಿದೆ.
ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲೂ ಚಿನ್ನ ಮತ್ತು ಬೆಳ್ಳಿ ಬೆಲೆಗಳಲ್ಲಿ ಇಳಿಕೆ ಕಂಡುಬಂದಿದೆ. ಸ್ಪಾಟ್ ಚಿನ್ನ ಹಾಗೂ ಬೆಳ್ಳಿ ದರಗಳು ಕೂಡ ಕಡಿಮೆಯಾಗಿವೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 1,36,400 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 1,48,800 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 24,000 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 1,36,400 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 24,000 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದೆಡೆಯೂ ಈ ಲೋಹದ ಬೆಲೆ 24,500 ರೂ ಇದೆ.
ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ:
- 24 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 14,880
- 22 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 13,640
- 18 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 11,160
- ಬೆಳ್ಳಿ ಬೆಲೆ 1 ಗ್ರಾಂಗೆ: 240 ರೂ.
ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್ಗೆ)
- ಬೆಂಗಳೂರು: 13,640 ರೂ
- ಚೆನ್ನೈ: 13,640 ರೂ
- ಮುಂಬೈ: 13,640 ರೂ
- ದೆಹಲಿ: 13,655
- ಕೋಲ್ಕತಾ: 13,640 ರೂ
- ಕೇರಳ: 13,640 ರೂ
- ಅಹ್ಮದಾಬಾದ್: 13,645 ರೂ
- ಜೈಪುರ್: 13,655
- ಲಕ್ನೋ: 13,655
- ಭುವನೇಶ್ವರ್: 13,640 ರೂ



