ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಕೂಗೇನಹಳ್ಳಿ ಗೇಟ್ ಬಳಿ ದ್ವಿಚಕ್ರ ವಾಹನಕ್ಕೆ ಕಾರು ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ದಂಪತಿ ಮೃತಪಟ್ಟಿದ್ದಾರೆ.
ಮೃತರನ್ನು ಕತ್ತಿಹೊಸಗಳ್ಳಿ ಮೂಲದ ಲಕ್ಷ್ಮಯ್ಯ (55) ಹಾಗೂ ಅನಿತಾ (45) ಎಂದು ಗುರುತಿಸಲಾಗಿದೆ. ರಾತ್ರಿ ಮನೆಯಲ್ಲಿ ಪಿತೃಪಕ್ಷದ ಹಬ್ಬ ಮುಗಿಸಿ ಸಂಬಂಧಿಕರ ಮನೆಗೆ ತೆರಳಿದ್ದ ದಂಪತಿ, ಬಳಿಕ ಅಲ್ಲಿಂದ ಹರಿಕಥೆ ಕಾರ್ಯಕ್ರಮಕ್ಕೆ ತೆರಳಿ ವಾಪಸ್ ಮನೆಗೆ ಬರುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ.
ಈ ವೇಳೆ ಹಿಂಬದಿಯಿಂದ ಬಂದ ಕಾರು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ದಂಪತಿ ಮೃತಪಟ್ಟಿದ್ದಾರೆ. ದೊಡ್ಡಬೆಳವಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.



