HomeKarnataka Newsಮಂಗಳೂರಿನ MRPL ಘಟಕದಲ್ಲಿ ಭಾರಿ ಸ್ಫೋಟ; ಮುಗಿಲೆತ್ತರಕ್ಕೆ ದಟ್ಟ ಹೊಗೆ, ಒಬ್ಬರಿಗೆ ಗಂಭೀರ ಗಾಯ

ಮಂಗಳೂರಿನ MRPL ಘಟಕದಲ್ಲಿ ಭಾರಿ ಸ್ಫೋಟ; ಮುಗಿಲೆತ್ತರಕ್ಕೆ ದಟ್ಟ ಹೊಗೆ, ಒಬ್ಬರಿಗೆ ಗಂಭೀರ ಗಾಯ

For Dai;y Updates Join Our whatsapp Group

ಮಂಗಳೂರು: ಜೋಕಟ್ಟೆ ಸಮೀಪದ ಮಂಗಳೂರು ರಿಫೈನರಿ ಅಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL) ಘಟಕದಲ್ಲಿ ಬುಧವಾರ ಭಾರಿ ಸ್ಫೋಟ ಸಂಭವಿಸಿದ್ದು, ಬಳಿಕ ಬೆಂಕಿ ಕಾಣಿಸಿಕೊಂಡಿದೆ. ಸ್ಫೋಟದ ಬೆನ್ನಲ್ಲೇ ಘಟಕದಿಂದ ದಟ್ಟ ಹೊಗೆ ಆಕಾಶಕ್ಕೆ ಆವರಿಸಿದ್ದು, ಸುತ್ತಮುತ್ತಲ ಪ್ರದೇಶಗಳಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.

ಸ್ಫೋಟದ ತೀವ್ರ ಶಬ್ದ ಮಂಗಳೂರು ನಗರದ ವಿವಿಧ ಭಾಗಗಳಲ್ಲೂ ಕೇಳಿಸಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಜೋಕಟ್ಟೆ ಸುತ್ತಮುತ್ತಲ ಪ್ರದೇಶಗಳಲ್ಲಿ ಸ್ಫೋಟದ ಕಂಪನದ ಅನುಭವವಾಗಿದ್ದು, ಕೆಲವು ಕಟ್ಟಡಗಳ ಕಿಟಕಿ ಗಾಜುಗಳಿಗೆ ಹಾನಿಯಾಗಿರುವ ವರದಿಗಳಿವೆ.

ಜೋಕಟ್ಟೆಯ ಪಂಚಾಯತ್ ಕಟ್ಟಡ, ಅಂಗನವಾಡಿ ಕೇಂದ್ರ ಹಾಗೂ ಗ್ರಂಥಾಲಯದ ಕಟ್ಟಡಗಳು ಕಂಪಿಸಿದ್ದು, ಕಿಟಕಿ ಗಾಜುಗಳು ಪುಡಿಯಾಗಿವೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಈ ನಿರ್ದಿಷ್ಟ ಹಾನಿಯ ಪ್ರಮಾಣದ ಬಗ್ಗೆ ಅಧಿಕೃತ ಪರಿಶೀಲನೆಯಿಂದ ಇನ್ನಷ್ಟು ಸ್ಪಷ್ಟತೆ ಸಿಗಬೇಕಿದೆ.

ಘಟನೆಯಲ್ಲಿ ಒಬ್ಬರಿಗೆ ಗಂಭೀರ ಸುಟ್ಟ ಗಾಯಗಳಾಗಿದ್ದು, ಆರು ಮಂದಿ ಸಣ್ಣಪುಟ್ಟ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ತುರ್ತು ಕಾರ್ಯಾಚರಣೆ ನಡೆಸಲಾಗಿದ್ದು, ಪರಿಸ್ಥಿತಿ ನಿಯಂತ್ರಣದಲ್ಲಿದೆ ಮತ್ತು ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದು ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ.

ಪ್ರಾಥಮಿಕ ವರದಿಗಳ ಪ್ರಕಾರ MRPLನ ಹೈಡ್ರೋ ಸಲ್ಫರ್ ಟ್ರೀಟ್‌ಮೆಂಟ್ ಘಟಕದಲ್ಲಿ ಸ್ಫೋಟ ಸಂಭವಿಸಿದೆ. ಸ್ಫೋಟಕ್ಕೆ ನಿಖರ ಕಾರಣವೇನು ಎಂಬುದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿ ನಿರೀಕ್ಷಿಸಲಾಗಿದೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img