HomeIndia Newsಯೋಗೇಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್ ತರಾಟೆ, ಕಂಟಕವಾಗುತ್ತಾ ಜಾಮೀನು?

ಯೋಗೇಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್ ತರಾಟೆ, ಕಂಟಕವಾಗುತ್ತಾ ಜಾಮೀನು?

For Dai;y Updates Join Our whatsapp Group

ನವದೆಹಲಿ: ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಧಾರವಾಡ ಶಾಸಕ ವಿನಯ್ ಕುಲಕರ್ಣಿ ಅವರಿಗೆ ಮತ್ತೆ ಕಾನೂನು ಸಂಕಷ್ಟ ಎದುರಾಗುವ ಸಾಧ್ಯತೆ ದಟ್ಟವಾಗಿದೆ. ಹೈಕೋರ್ಟ್ ವಿನಯ್ ಕುಲಕರ್ಣಿಗೆ ನೀಡಿದ್ದ ಜಾಮೀನನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಮೇಲ್ಮನವಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, “ಗಂಭೀರ ಕೊಲೆ ಆರೋಪ ಎದುರಿಸುತ್ತಿರುವವರು ವಿಧಾನಸಭೆಯಲ್ಲಿ ಇರಬೇಕೇ?” ಎಂದು ಖಾರವಾಗಿ ಪ್ರಶ್ನಿಸಿದೆ.

ಶಾಸಕ ವಿನಯ್ ಕುಲಕರ್ಣಿ ಅವರಿಗೆ ನೀಡಲಾದ ಜಾಮೀನು ರದ್ದುಪಡಿಸುವಂತೆ ಕೋರಿ ರಾಜ್ಯ ಸರ್ಕಾರ ಹಾಗೂ ಕೊಲೆಯಾದ ಯೋಗೇಶ್ ಗೌಡ ಅವರ ಸಹೋದರ ಗುರುನಾಥ್ ಗೌಡ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಪ್ರಶಾಂತ್ ಕುಮಾರ್ ಮಿಶ್ರಾ ನೇತೃತ್ವದ ದ್ವಿಸದಸ್ಯ ಪೀಠ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ವಿನಯ್ ಕುಲಕರ್ಣಿ ಪರ ವಾದ ಮಂಡಿಸಿದ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ, ಮೇಲ್ಮನವಿ ಅರ್ಜಿಗಳನ್ನು ವಜಾಗೊಳಿಸುವಂತೆ ಕೋರಿದರು. ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಪೀಠವು, “ಈ ರೀತಿಯ ಕೊಲೆ ಪ್ರಕರಣಗಳಲ್ಲಿ ಭಾಗಿಯಾಗಿರುವವರು ವಿಧಾನಸಭೆಯಲ್ಲಿ ಇರಬೇಕೇ? ಇಂದು ಕೊಲೆಯಲ್ಲಿ ಭಾಗಿಯಾದವರು ನಾಳೆ ದರೋಡೆ ಮಾಡಿದರೂ ವಿಧಾನಸಭೆಗೆ ಪ್ರವೇಶಿಸುತ್ತಾರೆ. ಗಂಭೀರ ಸ್ವರೂಪದ ಆರೋಪಗಳನ್ನು ಎದುರಿಸುತ್ತಿರುವ ವ್ಯಕ್ತಿಗಳು ಶಾಸಕರಾಗಿ ಮುಂದುವರಿಯಲು ಅರ್ಹರೇ?” ಎಂದು ನೇರವಾಗಿ ಪ್ರಶ್ನಿಸಿತು.

ಇದೇ ವೇಳೆ ರಾಜ್ಯ ಸರ್ಕಾರ ಹಾಗೂ ಗುರುನಾಥ್ ಗೌಡ ಪರ ವಕೀಲರು ಮಧ್ಯಪ್ರವೇಶಿಸಿ, ಅರ್ಜಿಯನ್ನು ವಜಾಗೊಳಿಸಬಾರದು ಮತ್ತು ತಮ್ಮ ವಾದವನ್ನು ಆಲಿಸಬೇಕು ಎಂದು ಮನವಿ ಮಾಡಿದರು. ಎರಡೂ ಕಡೆಯ ಮನವಿಗೆ ಸ್ಪಂದಿಸಿದ ಉನ್ನತ ನ್ಯಾಯಾಲಯವು, ಈ ಕುರಿತು ಕೌಂಟರ್ ಅಫಿಡವಿಟ್ (Counter Affidavit) ಸಲ್ಲಿಸುವಂತೆ ವಿನಯ್ ಕುಲಕರ್ಣಿ ಪರ ವಕೀಲರಿಗೆ ಸೂಚನೆ ನೀಡಿತು. ಬಳಿಕ ಮುಂದಿನ ವಿಚಾರಣೆಯನ್ನು ಅಕ್ಟೋಬರ್ 9ಕ್ಕೆ ಮುಂದೂಡಿತು.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img