HomeGadag News“ಜ್ಞಾನೇಶ್ ಕುಮಾರ್ ಅವರನ್ನು ಬಂಧಿಸಿ ಮನೆಗೆ ಕಳುಹಿಸುವ ಕಾಲ ಬಂದಿದೆ”: ಎಚ್.ಕೆ. ಪಾಟೀಲ ಆಕ್ರೋಶ

“ಜ್ಞಾನೇಶ್ ಕುಮಾರ್ ಅವರನ್ನು ಬಂಧಿಸಿ ಮನೆಗೆ ಕಳುಹಿಸುವ ಕಾಲ ಬಂದಿದೆ”: ಎಚ್.ಕೆ. ಪಾಟೀಲ ಆಕ್ರೋಶ

For Dai;y Updates Join Our whatsapp Group

ಗದಗ: ದೇಶದ ಬಡವರು, ನಿರ್ಗತಿಕರು ಹಾಗೂ ಸಾಮಾನ್ಯ ಜನರ ಮತದಾನದ ಹಕ್ಕನ್ನು ಕಸಿದುಕೊಳ್ಳುವ ಪ್ರಯತ್ನ ನಡೆದಿದೆ. ಇಂತಹ ಪ್ರಯತ್ನವನ್ನು ಕಾಂಗ್ರೆಸ್ ಪಕ್ಷ ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ. ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಬಂಧಿಸಿ ಮನೆಗೆ ಕಳುಹಿಸುವ ಕಾಲ ಬಂದಿದೆ ಎಂದು ಶಾಸಕ ಎಚ್.ಕೆ. ಪಾಟೀಲ ಆಕ್ರೋಶ ವ್ಯಕ್ತಪಡಿಸಿದರು.

ಶನಿವಾರ ನಗರದ ಮಹಾತ್ಮ ಗಾಂಧಿ ವೃತ್ತದಲ್ಲಿ ಗದಗ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಕೇಂದ್ರ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆ ಹಾಗೂ ಬಂಧನಕ್ಕೆ ಒತ್ತಾಯಿಸಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಮತದಾನದ ಹಕ್ಕು ಸಂವಿಧಾನ ಪ್ರತಿಯೊಬ್ಬ ನಾಗರಿಕನಿಗೂ ನೀಡಿರುವ ಹಕ್ಕು. ಅದನ್ನು ಕಿತ್ತುಕೊಳ್ಳುವ ಯಾವುದೇ ಪ್ರಯತ್ನ ನಡೆದರೂ ಕಾಂಗ್ರೆಸ್ ಸಹಿಸಿಕೊಳ್ಳುವುದಿಲ್ಲ. ಮತದಾರರ ಪಟ್ಟಿಯಿಂದ ಅರ್ಹರ ಹೆಸರುಗಳನ್ನು ತೆಗೆದುಹಾಕದಂತೆ ನೋಡಿಕೊಳ್ಳುವುದು ಕಾಂಗ್ರೆಸ್ ಕಾರ್ಯಕರ್ತರ ಜವಾಬ್ದಾರಿಯಾಗಿದೆ ಎಂದರು.

ಪಶ್ಚಿಮ ಬಂಗಾಳ, ಬಿಹಾರ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಹೆಸರಿನಲ್ಲಿ ದೊಡ್ಡ ಪ್ರಮಾಣದ ಬದಲಾವಣೆಗಳಾಗಿವೆ. ಪಶ್ಚಿಮ ಬಂಗಾಳದಲ್ಲಿ 27 ಲಕ್ಷ ಮತದಾರರ ಪೈಕಿ ಸುಮಾರು 10 ಲಕ್ಷ ಜನರಿಗೆ ಮಾತ್ರ ಮೇಲ್ಮನವಿ ಸಲ್ಲಿಸಲು ಸಾಧ್ಯವಾಗಿದೆ ಎಂಬ ಮಾಹಿತಿ ಇದೆ. ಈ ಪ್ರಕ್ರಿಯೆಯಿಂದ ಬಿಜೆಪಿಗೆ ಅನುಕೂಲ ಮಾಡಿಕೊಟ್ಟ ತೃಪ್ತಿ ಜ್ಞಾನೇಶ್ ಕುಮಾರ್ ಅವರಿಗೆ ಸಿಕ್ಕಿದೆ ಎಂದು ಆರೋಪಿಸಿದರು.

ಕೇಂದ್ರ ಚುನಾವಣಾ ಆಯೋಗ ಜನರ ವಿಶ್ವಾಸ ಕಳೆದುಕೊಂಡಿದೆ. ಜೆನ್‌-ಜಿ ಸೇರಿದಂತೆ ದೇಶದ ಯುವಜನತೆ ಎಚ್ಚೆತ್ತುಕೊಂಡಿದ್ದಾರೆ. ಯುವಜನರ ಜಾಗೃತಿಯಿಂದ ಕೇಂದ್ರ ಸರ್ಕಾರಕ್ಕೂ ನಡುಕ ಉಂಟಾಗಿದೆ. ಜ್ಞಾನೇಶ್ ಕುಮಾರ್ ಅವರನ್ನು ಹುದ್ದೆಯಿಂದ ತೆಗೆದುಹಾಕುವ ಕಾಲ ಸನ್ನಿಹಿತವಾಗಿದೆ ಎಂದು ಎಚ್.ಕೆ. ಪಾಟೀಲ ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆಯಲ್ಲಿ ರಾಜ್ಯ ವಿಕೇಂದ್ರೀಕರಣ ಮತ್ತು ಯೋಜನಾ ಸಮಿತಿ ಉಪಾಧ್ಯಕ್ಷ ಡಿ.ಆರ್. ಪಾಟೀಲ, ರಾಮಕೃಷ್ಣ ದೊಡ್ಡಮನಿ, ರಾಮಣ್ಣ ಲಮಾಣಿ, ವಾಸಣ್ಣ ಕುರುಡಗಿ, ಐ.ಎಸ್. ಪಾಟೀಲ, ಗುರಣ್ಣ ಬಳಗಾನೂರ, ವಿ.ಎಲ್. ನಾಡಗೌಡ, ಅಕ್ಬರಸಾಬ ಬಬರ್ಚಿ, ಪ್ರಭು ಬುರಬುರೆ, ಹೇಮಂತಗೌಡ ಪಾಟೀಲ, ಡಿ.ಡಿ. ಮೋರನಾಳ, ಬಸವರಾಜ ಕಡೇಮನಿ, ಬಿ.ಬಿ. ಅಸೂಟಿ, ಅಶೋಕ ಮಂದಾಲಿ, ಕೃಷ್ಣಗೌಡ ಪಾಟೀಲ, ಪರಶುರಾಮ ಅಳಗವಾಡಿ, ವಿದ್ಯಾಧರ ದೊಡ್ಡಮನಿ, ಪ್ರವೀಣ ಯಾವಗಲ್, ಎಲ್.ಡಿ. ಚಂದಾವರಿ, ಬರಕತ್ ಅಲಿ ಮುಲ್ಲಾ, ಎಂ.ಸಿ. ಶೇಕ್, ಸೂರಜ್ ಕಟ್ಟಿಮನಿ, ಚಂದ್ರು ಕರಿಸೋಮನಗೌಡ್ರ, ಎಸ್.ಡಿ. ಮಕಾನದಾರ, ಸುರೇಶ ಕಟ್ಟಿಮನಿ, ಹುಮಾಯೂನ್ ಮಾಗಡಿ, ಬಸವರಾಜ ಸುಂಕಾಪುರ, ನೀಲಮ್ಮ ಬೋಳನವರ, ಶಕುಂತಲಾ ಅಕ್ಕಿ, ಹನುಮಂತ ವೀರಾಪುರ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಜ್ಞಾನೇಶ್ ಕುಮಾರ್ ಭಾವಚಿತ್ರಕ್ಕೆ ಬೆಂಕಿ:

ಪ್ರತಿಭಟನೆ ವೇಳೆ ಕಾಂಗ್ರೆಸ್ ಕಾರ್ಯಕರ್ತರು ಜ್ಞಾನೇಶ್ ಕುಮಾರ್ ಅವರ ಭಾವಚಿತ್ರಕ್ಕೆ ಬೆಂಕಿ ಹಚ್ಚಿ, ಬಾಯಿ ಬಡಿದುಕೊಂಡು ಆಕ್ರೋಶ ವ್ಯಕ್ತಪಡಿಸಿದರು. ಚುನಾವಣಾ ಆಯೋಗವನ್ನು ದುರುಪಯೋಗ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಧಿಕ್ಕಾರ ಕೂಗಿದರು. ಪ್ರತಿಭಟನೆಯಿಂದಾಗಿ ಎರಡು ಗಂಟೆಗೂ ಹೆಚ್ಚು ಕಾಲ ಸಂಚಾರ ಅಸ್ತವ್ಯಸ್ತವಾಗಿತ್ತು.

ಗದಗದಲ್ಲಿ 12,500 ಮತಗಳ ಆತಂಕ:

ಗದಗ ಜಿಲ್ಲೆಯಲ್ಲೂ ಸುಮಾರು 12,500 ಮತಗಳನ್ನು ತೆಗೆದುಹಾಕಲು ಸಿದ್ಧತೆ ನಡೆಸಲಾಗಿದೆ. ಆದರೆ ಕಾಂಗ್ರೆಸ್ ಕಾರ್ಯಕರ್ತರ ಜಾಗೃತಿಯಿಂದ ಅಧಿಕಾರಿಗಳಿಗೆ ನೋಟಿಸ್ ನೀಡುವ ಧೈರ್ಯವಾಗಿಲ್ಲ ಎಂದು ಎಚ್.ಕೆ. ಪಾಟೀಲ ಹೇಳಿದರು. ಯಾರದ್ದೇ ಮತದಾನದ ಹಕ್ಕು ಕಸಿದುಕೊಳ್ಳುವ ಪ್ರಯತ್ನ ನಡೆದಿರುವುದು ಗಮನಕ್ಕೆ ಬಂದರೆ ಕಾಂಗ್ರೆಸ್ ಪಕ್ಷ ಸುಮ್ಮನೆ ಕುಳಿತುಕೊಳ್ಳುವುದಿಲ್ಲ ಎಂದು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img