HomeKarnataka Newsಮನ್ಮುಲ್ ನಂದಿನಿ ಹಾಲಿನ ಪುಡಿ ಕಲಬೆರಕೆ ಪ್ರಕರಣ; ಮಾಜಿ ಅಧ್ಯಕ್ಷ ಉಮ್ಮಡಹಳ್ಳಿ ಶಿವಪ್ಪ ಅರೆಸ್ಟ್

ಮನ್ಮುಲ್ ನಂದಿನಿ ಹಾಲಿನ ಪುಡಿ ಕಲಬೆರಕೆ ಪ್ರಕರಣ; ಮಾಜಿ ಅಧ್ಯಕ್ಷ ಉಮ್ಮಡಹಳ್ಳಿ ಶಿವಪ್ಪ ಅರೆಸ್ಟ್

For Dai;y Updates Join Our whatsapp Group

ಮಂಡ್ಯ: ರಾಜ್ಯಾದ್ಯಂತ ತೀವ್ರ ಸಂಚಲನ ಮೂಡಿಸಿರುವ ಮಂಡ್ಯದ ಮನ್ಮುಲ್ (Manmul) ನಂದಿನಿ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆ ನಡೆದಿದ್ದು, ಒಕ್ಕೂಟದ ಮಾಜಿ ಅಧ್ಯಕ್ಷ ಉಮ್ಮಡಹಳ್ಳಿ ಶಿವಪ್ಪ ಅವರನ್ನು ಮದ್ದೂರು ಪೊಲೀಸರು ನಿನ್ನೆ ತಡರಾತ್ರಿ ಬಂಧಿಸಿದ್ದಾರೆ.

ಪ್ರಕರಣದಲ್ಲಿ ಮಾಜಿ ಅಧ್ಯಕ್ಷ ಶಿವಪ್ಪ ಅವರ ಪಾತ್ರವಿರುವುದು ಮೇಲ್ನೋಟಕ್ಕೆ ದೃಢಪಟ್ಟ ಹಿನ್ನೆಲೆಯಲ್ಲಿ ಪೊಲೀಸರು ಈ ಕಠಿಣ ಕ್ರಮ ಕೈಗೊಂಡಿದ್ದು, ಇಂದು ಆರೋಪಿಯನ್ನು ಮದ್ದೂರು ನ್ಯಾಯಾಲಯಕ್ಕೆ ಹಾಜರುಪಡಿಸುವ ಸಾಧ್ಯತೆಯಿದೆ.

 ಪ್ರಕರಣದ ಪ್ರಮುಖ ಆರೋಪಿ (A1) ಪ್ರದೀಪ್ ಕುಮಾರ್ ಜಾದವ್, ನಿರ್ದೇಶಕರೊಬ್ಬರ ಜೊತೆ ಮಾತನಾಡಿದ್ದಾನೆ ಎನ್ನಲಾದ ಆಡಿಯೋ ಸಂಭಾಷಣೆಯಲ್ಲಿ ಈ ಅಕ್ರಮ ದಂಧೆಯಲ್ಲಿ ಶಿವಪ್ಪ ಶಾಮೀಲಾಗಿರುವ ಬಗ್ಗೆ ಪ್ರಸ್ತಾಪಿಸಿದ್ದ. ಈ ಪ್ರಮುಖ ಸಾಕ್ಷ್ಯದ ಆಧಾರದ ಮೇಲೆ ಪೊಲೀಸರು ನ್ಯಾಯಾಂಗ ಬಂಧನದಲ್ಲಿದ್ದ ಜಾದವ್‌ನನ್ನು ಮತ್ತೆ ಪೊಲೀಸ್ ಕಸ್ಟಡಿಗೆ ಪಡೆದು ತೀವ್ರ ವಿಚಾರಣೆಗೊಳಪಡಿಸಿದ್ದರು.

ಬಳಿಕ ಜಾದವ್ ಮತ್ತು ಮಾಜಿ ಅಧ್ಯಕ್ಷ ಶಿವಪ್ಪ ಇಬ್ಬರನ್ನೂ ಮುಖಾಮುಖಿ ಕೂರಿಸಿ ವಿಚಾರಣೆ ನಡೆಸಲಾಯಿತು. ಈ ವೇಳೆ ಜಾದವ್ ನೇರವಾಗಿ ಶಿವಪ್ಪ ಅವರ ವಿರುದ್ಧವೇ ಅಕ್ರಮದ ಆರೋಪಗಳನ್ನು ಹೊರಿಸಿದ್ದು, ಇಬ್ಬರ ನಡುವೆ ತೀವ್ರ ಮಾತಿನ ಚಕಮಕಿಯೂ ನಡೆದಿದೆ. ವಿಚಾರಣೆ ವೇಳೆ ಶಿವಪ್ಪ ಅವರ ಪಾತ್ರದ ಬಗ್ಗೆ ಸ್ಪಷ್ಟ ಸುಳಿವು ದೊರೆತ ಬೆನ್ನಲ್ಲೇ ಪೊಲೀಸರು ಅವರನ್ನು ವಶಕ್ಕೆ ಪಡೆದು ಬಂಧಿಸಿದ್ದಾರೆ.

ಈ ಪ್ರಕರಣದಲ್ಲಿ ಈಗಾಗಲೇ ಪ್ರದೀಪ್ ಕುಮಾರ್ ಜಾದವ್ ಸೇರಿದಂತೆ ಐದು ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು. ಇದೀಗ ಮಾಜಿ ಅಧ್ಯಕ್ಷ ಶಿವಪ್ಪ ಅವರ ಬಂಧನದೊಂದಿಗೆ ಈ ಅಕ್ರಮ ಜಾಲದಲ್ಲಿ ಸೆರೆಯಾದವರ ಸಂಖ್ಯೆ 6ಕ್ಕೆ ಏರಿಕೆಯಾಗಿದೆ. ಪ್ರಕರಣದ ತನಿಖೆ ತೀವ್ರಗತಿಯಲ್ಲಿ ಮುಂದುವರಿದಿದ್ದು, ಮುಂಬರುವ ದಿನಗಳಲ್ಲಿ ಮತ್ತಷ್ಟು ಮಂದಿಯ ವಿಚಾರಣೆ ನಡೆಯುವ ಸಾಧ್ಯತೆಯಿದೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img