HomeDharwadರಾಹುಲ್–ಪ್ರಿಯಾಂಕಾ ಬಂಧನಕ್ಕೆ ಕಿಡಿ: ಹುಬ್ಬಳ್ಳಿಯಲ್ಲಿ ಯುವ ಕಾಂಗ್ರೆಸ್ ಆಕ್ರೋಶ

ರಾಹುಲ್–ಪ್ರಿಯಾಂಕಾ ಬಂಧನಕ್ಕೆ ಕಿಡಿ: ಹುಬ್ಬಳ್ಳಿಯಲ್ಲಿ ಯುವ ಕಾಂಗ್ರೆಸ್ ಆಕ್ರೋಶ

ಹುಬ್ಬಳ್ಳಿ: ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಕಾಂಗ್ರೆಸ್‌ ನಾಯಕರಾದ ರಾಹುಲ್‌ ಗಾಂಧಿ ಹಾಗೂ ಪ್ರಿಯಾಂಕಾ ವಾದ್ರಾ ಅವರ ಬಂಧನ ಖಂಡಿಸಿ ಹು-ಧಾ ಮಹಾನಗರ ಯುವ ಕಾಂಗ್ರೆಸ್‌ ಸಮಿತಿ ವತಿಯಿಂದ ಮಂಗಳವಾರ ರಾತ್ರಿ ನಗರದ ವಿದ್ಯಾನಗರದ ಎಸ್‌.ಕೆ. ಕೊತಂಬರಿ ಕಾಲೇಜು ಎದುರು ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಲಾಯಿತು.

ಪ್ರತಿಭಟನಾಕಾರರು ರಸ್ತೆಯಲ್ಲಿ ಟೈರ್‌ಗೆ ಬೆಂಕಿ ಹಚ್ಚಿ ಕೇಂದ್ರ ಸರ್ಕಾರ ಹಾಗೂ ಬಿಜೆಪಿ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ದಿಢೀರ್‌ ರಸ್ತೆ ತಡೆ ನಡೆಸಿದ್ದರಿಂದ ಕೆಲಕಾಲ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿ ಸ್ಥಳದಲ್ಲಿ ಗೊಂದಲದ ವಾತಾವರಣ ನಿರ್ಮಾಣವಾಯಿತು.
ಸ್ಥಳಕ್ಕೆ ಆಗಮಿಸಿದ ಪೊಲೀಸರು ರಸ್ತೆ ತಡೆ ತೆರವುಗೊಳಿಸುವಂತೆ ಪ್ರತಿಭಟನಾಕಾರರಿಗೆ ಸೂಚಿಸಿದರು. ಆದರೆ, ಇದಕ್ಕೆ ಒಪ್ಪದ ಕಾರ್ಯಕರ್ತರು ರಸ್ತೆಯಲ್ಲೇ ಕುಳಿತು ಪ್ರತಿಭಟನೆ ಮುಂದುವರಿಸಿದರು. ಪರಿಸ್ಥಿತಿ ನಿಯಂತ್ರಣಕ್ಕೆ ಮುಂದಾದ ಪೊಲೀಸರು ಪ್ರತಿಭಟನಾಕಾರರನ್ನು ತೆರವುಗೊಳಿಸಿದರು.

ಪ್ರತಿಭಟನೆ ಮುಂದುವರಿಸಿದ ಹಿನ್ನೆಲೆಯಲ್ಲಿ 10ಕ್ಕೂ ಹೆಚ್ಚು ಯುವ ಕಾಂಗ್ರೆಸ್‌ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದು ಬಳಿಕ ಹಳೆ ಸಿಎಆರ್‌ ಮೈದಾನಕ್ಕೆ ಕರೆದೊಯ್ದು ಬಿಡುಗಡೆ ಮಾಡಿದರು.

ಶಾಂತಿಯುತ ಪ್ರತಿಭಟನೆ ನಡೆಸುವ ಹಕ್ಕನ್ನು ಮೊಟಕುಗೊಳಿಸಲಾಗುತ್ತಿದೆ ಎಂದು ಆರೋಪಿಸಿದ ಪ್ರತಿಭಟನಾಕಾರರು, ರಾಹುಲ್‌ ಗಾಂಧಿ ಹಾಗೂ ಪ್ರಿಯಾಂಕಾ ವಾದ್ರಾ ಅವರ ಬಂಧನವನ್ನು ಖಂಡಿಸಿದರು.
ಯುವ ಕಾಂಗ್ರೆಸ್‌ ಅಧ್ಯಕ್ಷ ಅರ್ಜುನ ಪಾಟೀಲ, ಮಹಾನಗರ ಜಿಲ್ಲಾಧ್ಯಕ್ಷ ಸದಾನಂದ ಡಂಗನವರ, ಧಾರವಾಡ ಜಿಲ್ಲಾ ಗ್ಯಾರಂಟಿ ಸಮಿತಿ ಉಪಾಧ್ಯಕ್ಷ ರೆಹಾನ್‌ ಐನಾಪುರಿ, ಪ್ರೇಮನಾಥ ಚಿಕ್ಕತುಂಬಳ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img