HomePolitics Newsರಾಜ್ಯ ಸಚಿವರಿಗೆ ಸ್ಟಿಂಗ್ ಆಪರೇಷನ್ ಭೀತಿ: 'ಹುಷಾರಾಗಿರಿ' ಎಂದು ಸಂಪುಟ ಸಭೆಯಲ್ಲಿ ಡಿಕೆ ಶಿವಕುಮಾರ್ ಎಚ್ಚರಿಕೆ

ರಾಜ್ಯ ಸಚಿವರಿಗೆ ಸ್ಟಿಂಗ್ ಆಪರೇಷನ್ ಭೀತಿ: ‘ಹುಷಾರಾಗಿರಿ’ ಎಂದು ಸಂಪುಟ ಸಭೆಯಲ್ಲಿ ಡಿಕೆ ಶಿವಕುಮಾರ್ ಎಚ್ಚರಿಕೆ

For Dai;y Updates Join Our whatsapp Group

ಬೆಂಗಳೂರು: ರಾಜ್ಯ ಸರ್ಕಾರಿ ಸಚಿವರನ್ನು ಗುರಿಯಾಗಿಸಿಕೊಂಡು ‘ಸ್ಟಿಂಗ್ ಆಪರೇಷನ್’ ಹಾಗೂ ಟ್ರ್ಯಾಪ್ ಮಾಡಲು ಯತ್ನಗಳು ನಡೆಯುತ್ತಿದ್ದು, ಸಚಿವರು ಅತ್ಯಂತ ಜಾಗರೂಕರಾಗಿರಬೇಕು ಎಂದು ಡಿಕೆ ಶಿವಕುಮಾರ್ (DK Shivakumar) ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ.

ಮಂಗಳವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ (Cabinet Meeting) ಸಚಿವರಿಗೆ ಈ ಕುರಿತು ಕಿವಿಮಾತು ಹೇಳಿರುವ ಅವರು, ಸಚಿವರ ಚಲನವಲನಗಳ ಮೇಲೆ ನಿರಂತರ ನಿಗಾ ಇಡಲಾಗುತ್ತಿದ್ದು, ಖಾಸಗಿ ತಂಡಗಳಿಂದ ಸ್ಟಿಂಗ್ ಆಪರೇಷನ್‌ಗಳು ನಡೆಯುತ್ತಿವೆ ಎಂದು ತಿಳಿಸಿದ್ದಾರೆ.

 ಗುಪ್ತಚರ ಇಲಾಖೆಯಿಂದ ದೊರೆತ ಮಾಹಿತಿಯನ್ನಾಧರಿಸಿ ಡಿಕೆ ಶಿವಕುಮಾರ್ ಈ ಸುಳಿವು ನೀಡಿದ್ದಾರೆ ಎನ್ನಲಾಗಿದೆ. ಎರಡು ಪ್ರತ್ಯೇಕ ತಂಡಗಳು ಸಚಿವರ ಚಟುವಟಿಕೆಗಳ ಮೇಲೆ ಕಣ್ಣಿಟ್ಟಿದ್ದು, ಸಚಿವರು ಯಾವುದೇ ರೀತಿಯ ಬಲೆಗೆ ಬೀಳದಂತೆ ಹೆಜ್ಜೆ ಇಡಬೇಕು ಎಂದು ಸಂಪುಟ ಸಭೆಯಲ್ಲಿ ತಿಳಿಸಿದ್ದಾರೆ.

 ಕ್ಯಾಬಿನೆಟ್ ಸಭೆಯಲ್ಲಿ ಎಲ್ಲರಿಗೂ ಒಟ್ಟಾರೆಯಾಗಿ ಎಚ್ಚರಿಕೆ ನೀಡಿದ ಬಳಿಕ, ಈ ಸ್ಟಿಂಗ್‌ಗೆ ಮುಖ್ಯವಾಗಿ ಟಾರ್ಗೆಟ್ ಆಗಿರುವ ಐವರು ಸಚಿವರ ಜೊತೆ ಡಿಕೆಶಿ ಪ್ರತ್ಯೇಕವಾಗಿ ಮಾತುಕತೆ ನಡೆಸಿದ್ದಾರೆ. ಅವರ ಜೊತೆ ಪ್ರತ್ಯೇಕವಾಗಿ ಮಾತನಾಡಿ ಬುದ್ಧಿಮಾತು ಹೇಳಿ, ಅಲರ್ಟ್ ಮೆಸೇಜ್ ರವಾನಿಸಿದ್ದಾರೆ. ಆದರೆ, ಡಿಕೆ ಶಿವಕುಮಾರ್ ಅವರು ಪ್ರತ್ಯೇಕವಾಗಿ ಮಾತುಕತೆ ನಡೆಸಿ ಎಚ್ಚರಿಸಿರುವ ಆ ಐವರು ಸಚಿವರು ಯಾರು ಎಂಬ ಮಾಹಿತಿ ಇನ್ನೂ ಬಹಿರಂಗಗೊಂಡಿಲ್ಲ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img