ಬೆಂಗಳೂರು: ರಾಜ್ಯದಲ್ಲಿ ಇನ್ಮುಂದೆ ಹಾಫ್ ಹೆಲ್ಮೆಟ್ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.
ದ್ವಿಚಕ್ರ ವಾಹನ ಸವಾರರು ಸುರಕ್ಷಿತವಲ್ಲದ ಹಾಫ್ ಹೆಲ್ಮೆಟ್‌ಗಳನ್ನು ಬಳಸಬಾರದು ಎಂದು ಸಾರಿಗೆ ಇಲಾಖೆ ಆದೇಶ ಹೊರಡಿಸಿದೆ.
ದ್ವಿಚಕ್ರ ವಾಹನ ಸವಾರರು ಬಿಐಎಸ್ ಅಥವಾ ಐಎಸ್‌ಐ ಗುಣಮಟ್ಟದ ಮಾನದಂಡಗಳನ್ನು ಪಾಲಿಸುವ ಹೆಲ್ಮೆಟ್‌ಗಳನ್ನು ಮಾತ್ರ ಬಳಸಬೇಕು ಎಂದು ಇಲಾಖೆ ಸೂಚಿಸಿದೆ.
ನಿಯಮ ಉಲ್ಲಂಘಿಸಿ ಹಾಫ್ ಹೆಲ್ಮೆಟ್ ಧರಿಸಿ ವಾಹನ ಚಲಾಯಿಸಿದರೆ ದಂಡ ವಿಧಿಸಲಾಗುವುದು ಎಂದು ಸಾರಿಗೆ ಇಲಾಖೆ ಎಚ್ಚರಿಕೆ ನೀಡಿದೆ.
ಇದೇ ವೇಳೆ ಹಾಫ್ ಹೆಲ್ಮೆಟ್‌ಗಳನ್ನು ತಯಾರಿಸುವ ಹಾಗೂ ಮಾರಾಟ ಮಾಡುವವರ ವಿರುದ್ಧವೂ ಕಾನೂನು ಕ್ರಮ ಕೈಗೊಳ್ಳುವುದಾಗಿ ಇಲಾಖೆ ಎಚ್ಚರಿಕೆ ನೀಡಿದೆ.
ಹೀಗಾಗಿ ದ್ವಿಚಕ್ರ ವಾಹನ ಸವಾರರು ಕಡ್ಡಾಯವಾಗಿ ಗುಣಮಟ್ಟದ ಸುರಕ್ಷಿತ ಹೆಲ್ಮೆಟ್‌ಗಳನ್ನು ಬಳಸುವಂತೆ ಸಾರಿಗೆ ಇಲಾಖೆ ಸೂಚಿಸಿದೆ.



