HomeKarnataka NewsSIR ವಿರುದ್ಧ ಸಿಜೆಪಿ ಸಮರ: ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ, ದೀಪ್ಕೆ ಭಾಗಿ

SIR ವಿರುದ್ಧ ಸಿಜೆಪಿ ಸಮರ: ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ, ದೀಪ್ಕೆ ಭಾಗಿ

For Dai;y Updates Join Our whatsapp Group

ಬೆಂಗಳೂರು: ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ, ಅಂದರೆ SIR ವಿಚಾರ ರಾಜ್ಯದಲ್ಲಿ ರಾಜಕೀಯ ಚರ್ಚೆಗೆ ಗ್ರಾಸವಾಗಿರುವ ಬೆನ್ನಲ್ಲೇ, ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಗಳು ಕೇಳಿಬರುತ್ತಿವೆ.

ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡಬೇಕು ಎಂದು ಕಾಂಗ್ರೆಸ್ ಪಕ್ಷವೂ ಒತ್ತಾಯಿಸಿದ್ದು, ರಾಜೀನಾಮೆ ನೀಡುವವರೆಗೂ ಪ್ರತಿಭಟನೆ ನಡೆಸುವುದಾಗಿ ಹೇಳಿದೆ. ಇದರ ನಡುವೆ ಕಾಕ್ರೋಚ್ ಜನತಾ ಪಾರ್ಟಿ ಕೂಡ ಜ್ಞಾನೇಶ್ ಕುಮಾರ್ ವಿರುದ್ಧ ಪ್ರತಿಭಟನೆ ನಡೆಸಿದೆ.

ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡಬೇಕು ಎಂದು ಕಾಕ್ರೋಚ್ ಜನತಾ ಪಾರ್ಟಿ ಈಗಾಗಲೇ ಗಡುವು ನೀಡಿತ್ತು. ಆದರೆ ಗಡುವಿನ ಬಳಿಕವೂ ರಾಜೀನಾಮೆ ನೀಡದ ಹಿನ್ನೆಲೆಯಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸಲಾಗಿದೆ. ಪ್ರತಿಭಟನೆಯಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಸಂಸ್ಥಾಪಕ ಅಭಿಜಿತ್ ದೀಪ್ಕೆ, ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ಗೋಪಾಲ್ ಗೌಡ, ಯೂಟ್ಯೂಬರ್ ಧ್ರುವ್ ರಾಠಿ, ಬಹುಭಾಷಾ ನಟ ಪ್ರಕಾಶ್ ರಾಜ್, ನಟ ಕಿಶೋರ್ ಸೇರಿದಂತೆ ಹಲವರು ಭಾಗವಹಿಸಿದ್ದರು.

SIR ಪ್ರಕ್ರಿಯೆ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದ ವಿಚಾರಗಳು ದೇಶಾದ್ಯಂತ ಚರ್ಚೆಯಾಗುತ್ತಿರುವ ಸಂದರ್ಭದಲ್ಲೇ, ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಬೆಂಗಳೂರಿನಲ್ಲಿ ನಡೆದಿರುವ ಈ ಪ್ರತಿಭಟನೆ ಇದೀಗ ಗಮನ ಸೆಳೆದಿದೆ. ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡುವಂತೆ ಪ್ರತಿಭಟನಾಕಾರರು ಒತ್ತಾಯಿಸಿದ್ದು, ಈ ವಿಚಾರದಲ್ಲಿ ಮುಂದಿನ ದಿನಗಳಲ್ಲಿ ರಾಜಕೀಯ ಹಾಗೂ ಸಾರ್ವಜನಿಕ ಚರ್ಚೆ ಮತ್ತಷ್ಟು ತೀವ್ರಗೊಳ್ಳುವ ಸಾಧ್ಯತೆ ಇದೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img