HomeKarnataka Newsಮೈಸೂರಿನ 416ನೇ ದಸರಾ ಮಹೋತ್ಸವಕ್ಕೆ ಚಾಲನೆ: ಚಾಮುಂಡೇಶ್ವರಿಗೆ ಪುಷ್ಪಾರ್ಚನೆ

ಮೈಸೂರಿನ 416ನೇ ದಸರಾ ಮಹೋತ್ಸವಕ್ಕೆ ಚಾಲನೆ: ಚಾಮುಂಡೇಶ್ವರಿಗೆ ಪುಷ್ಪಾರ್ಚನೆ

For Dai;y Updates Join Our whatsapp Group

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ವಿಶ್ವವಿಖ್ಯಾತ 416ನೇ ನಾಡಹಬ್ಬ ದಸರಾ ಮಹೋತ್ಸವಕ್ಕೆ ಅಧಿಕೃತ ಚಾಲನೆ ದೊರೆತಿದೆ.

ಚಾಮುಂಡಿ ಬೆಟ್ಟದಲ್ಲಿ ಶುಭ ಧನುರ್ ಲಗ್ನದಲ್ಲಿ ಕೊಪ್ಪಳದ ಗವಿಮಠದ ಶ್ರೀ ಅಭಿನವ ಗವಿಸಿದ್ದೇಶ್ವರ ಮಹಾಸ್ವಾಮಿಗಳು ನಾಡದೇವತೆ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಮಾಡುವ ಮೂಲಕ ದಸರಾ ಉತ್ಸವವನ್ನು ಉದ್ಘಾಟಿಸಿದರು. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಬೆಳಗ್ಗೆ ಪತ್ನಿ ಉಷಾ ಶಿವಕುಮಾರ್ ಅವರೊಂದಿಗೆ ಚಾಮುಂಡಿ ಬೆಟ್ಟಕ್ಕೆ ಆಗಮಿಸಿದ ಮುಖ್ಯಮಂತ್ರಿ ಅವರಿಗೆ ಪೂರ್ಣಕುಂಭ ಸ್ವಾಗತ ನೀಡಲಾಯಿತು. ಬಳಿಕ ಅವರು ಸಾಂಪ್ರದಾಯಿಕ ನಂದಿಧ್ವಜ ಕಂಬಕ್ಕೆ ವಿಶೇಷ ಪೂಜೆ ಸಲ್ಲಿಸಿದರು. ನಂತರ ಜಾನಪದ ಕಲಾತಂಡಗಳ ವಾದ್ಯಮೇಳಗಳೊಂದಿಗೆ ಮೆರವಣಿಗೆಯಲ್ಲಿ ಚಾಮುಂಡೇಶ್ವರಿ ದೇವಾಲಯದತ್ತ ಸಾಗಿದರು.

ದೇವಾಲಯದ ಮುಂಭಾಗದಲ್ಲಿ ಮುಖ್ಯಮಂತ್ರಿ ನಾಲ್ಕು ಈಡುಗಾಯಿಗಳನ್ನು ಒಡೆದು ಭಕ್ತಿ ಸಮರ್ಪಿಸಿದರು. ಬಳಿಕ ಪತ್ನಿಯೊಂದಿಗೆ ದೇವಾಲಯ ಪ್ರವೇಶಿಸಿ, ಶ್ರೀ ಅಭಿನವ ಗವಿಸಿದ್ದೇಶ್ವರ ಮಹಾಸ್ವಾಮಿಗಳ ಸಮ್ಮುಖದಲ್ಲಿ ನಾಡದೇವತೆ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಉಪಸ್ಥಿತರಿದ್ದರು.

ಶುಭ ಲಗ್ನದಲ್ಲಿ ಪುಷ್ಪಾರ್ಚನೆ

ಪೂಜಾ ವಿಧಿವಿಧಾನಗಳ ಬಳಿಕ ಗಣ್ಯರು ಮುಖ್ಯ ವೇದಿಕೆಗೆ ಆಗಮಿಸಿದರು. ಬೆಳಗ್ಗೆ 11.50ರಿಂದ ಮಧ್ಯಾಹ್ನ 12.13ರ ಶುಭ ಧನುರ್ ಲಗ್ನದಲ್ಲಿ ಬೆಳ್ಳಿ ರಥದಲ್ಲಿ ವಿರಾಜಮಾನವಾಗಿದ್ದ ತಾಯಿ ಚಾಮುಂಡೇಶ್ವರಿಯ ಉತ್ಸವ ಮೂರ್ತಿಗೆ ಶ್ರೀ ಅಭಿನವ ಗವಿಸಿದ್ದೇಶ್ವರ ಮಹಾಸ್ವಾಮಿಗಳು ಹಾಗೂ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪುಷ್ಪಾರ್ಚನೆ ಸಲ್ಲಿಸಿದರು. ಈ ಮೂಲಕ ಮೈಸೂರು ದಸರಾ ಮಹೋತ್ಸವಕ್ಕೆ ವಿಧ್ಯುಕ್ತ ಚಾಲನೆ ದೊರೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ. ದೇವೇಗೌಡ ವಹಿಸಿದ್ದರು. ವೇದಿಕೆಯಲ್ಲಿ ಸಚಿವರಾದ ರಿಜ್ವಾನ್ ಅರ್ಷದ್, ಈಶ್ವರ್ ಖಂಡ್ರೆ, ಡಾ. ಅಜಯ್ ಸಿಂಗ್, ಸಿ. ಪುಟ್ಟರಂಗಶೆಟ್ಟಿ ಸೇರಿದಂತೆ ಹಲವು ಗಣ್ಯರು ಹಾಗೂ ಮುಖ್ಯಮಂತ್ರಿ ಅವರ ಪತ್ನಿ ಉಷಾ ಶಿವಕುಮಾರ್ ಉಪಸ್ಥಿತರಿದ್ದರು.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img