HomeKarnataka Newsಚಿಕ್ಕಮಗಳೂರು ಜನರೇ ಗಮನಿಸಿ: ನಾಳೆ ಬೆಳಗ್ಗೆ 9ರಿಂದ ಸಂಜೆ 5ರವರೆಗೆ ವಿದ್ಯುತ್ ವ್ಯತ್ಯಯ

ಚಿಕ್ಕಮಗಳೂರು ಜನರೇ ಗಮನಿಸಿ: ನಾಳೆ ಬೆಳಗ್ಗೆ 9ರಿಂದ ಸಂಜೆ 5ರವರೆಗೆ ವಿದ್ಯುತ್ ವ್ಯತ್ಯಯ

For Dai;y Updates Join Our whatsapp Group

ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರಿನ ಹಲವು ಪ್ರದೇಶಗಳಲ್ಲಿ ನಾಳೆ (ಅಕ್ಟೋಬರ್ 12) ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.

ಹೊಸ 11 ಕೆ.ವಿ. ಲಿಂಕ್ ಲೈನ್ ನಿರ್ಮಾಣ ಕಾಮಗಾರಿ ಕೈಗೆತ್ತಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಘಟಕ-4 ಶಾಖಾ ವ್ಯಾಪ್ತಿಯ ವಿವಿಧ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜು ಸ್ಥಗಿತಗೊಳ್ಳಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ಬೆಳಗ್ಗೆ 9ರಿಂದ ಸಂಜೆ 5ರವರೆಗೆ ವಿದ್ಯುತ್ ಕಡಿತ:

ಚಿಕ್ಕಮಗಳೂರಿನ 66/11 ಕೆ.ವಿ. ವಿದ್ಯುತ್ ವಿತರಣಾ ಕೇಂದ್ರದ 11 ಕೆ.ವಿ. ಪೀಠ, ಕೆಂಪನಹಳ್ಳಿ, ಹಿರೇಕೊಳಲೆ ಹಾಗೂ ತ್ರಿವಿಕ್ ಫೀಡರ್‌ಗಳ ವ್ಯಾಪ್ತಿಯಲ್ಲಿ ಬೆಳಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.

ಯಾವೆಲ್ಲ ಪ್ರದೇಶಗಳಲ್ಲಿ ವಿದ್ಯುತ್ ಇರಲ್ಲ?

ತ್ರಿವಿಕ್ ರೆಸಾರ್ಟ್ ಹಾಗೂ ಗಾಲ್ಫ್ ರೋಡ್ ಸುತ್ತಮುತ್ತಲಿನ ಪ್ರದೇಶಗಳು, ಅಲ್ಲಂಪುರ ವ್ಯಾಪ್ತಿ, ಇಂದಿರಾ ನಗರ, ಚನ್ನಗೊಂಡನಹಳ್ಳಿ, ಜಾಗರ ವ್ಯಾಪ್ತಿಯ ಕೈಮರ, ಅತ್ತಿಗುಂಡಿ ಹಾಗೂ ಪ್ರಸಿದ್ಧ ದತ್ತಪೀಠ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ಇದರ ಜೊತೆಗೆ ಮಹಲ್, ಹುಳಿಯಾರಳ್ಳಿ, ಹುಲುವತ್ತಿ, ಹಿರೇಕೊಳಲೆ, ಚಿಕ್ಕಕೊಳಲೆ, ಧರಗುಣಿ, ಉಲುವಾಗಿಲು, ನರಗನಹಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲೂ ವಿದ್ಯುತ್ ಪೂರೈಕೆ ಸ್ಥಗಿತಗೊಳ್ಳಲಿದೆ.

ಸಾರ್ವಜನಿಕರಿಗೆ ಮೆಸ್ಕಾಂ ಮನವಿ:

ಹೊಸ ವಿದ್ಯುತ್ ಲಿಂಕ್ ಲೈನ್ ನಿರ್ಮಾಣ ಕಾಮಗಾರಿಯ ಹಿನ್ನೆಲೆಯಲ್ಲಿ ವಿದ್ಯುತ್ ವ್ಯತ್ಯಯ ಅನಿವಾರ್ಯವಾಗಿದೆ. ಹೀಗಾಗಿ ಸಾರ್ವಜನಿಕರು ಹಾಗೂ ವಿದ್ಯುತ್ ಗ್ರಾಹಕರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಮೆಸ್ಕಾಂ ಕಾರ್ಯ ಮತ್ತು ಪಾಲನ ಗ್ರಾಮೀಣ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಮನವಿ ಮಾಡಿದ್ದಾರೆ.

ನಾಳೆ ಈ ಪ್ರದೇಶಗಳಲ್ಲಿ ಕೆಲಸ ಕಾರ್ಯಗಳನ್ನು ಯೋಜಿಸಿರುವವರು ವಿದ್ಯುತ್ ವ್ಯತ್ಯಯದ ಬಗ್ಗೆ ಮುಂಚಿತವಾಗಿ ಗಮನಹರಿಸಿ ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಸೂಚಿಸಲಾಗಿದೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img