HomeKarnataka Newsಮಧ್ಯರಾತ್ರಿ ಅಬಕಾರಿ ಇಲಾಖೆ ಕಾರ್ಯಾಚರಣೆ: ಮದ್ಯ ತುಂಬಿದ್ದ ಬೃಹತ್ ಟ್ಯಾಂಕರ್ ವಶಕ್ಕೆ

ಮಧ್ಯರಾತ್ರಿ ಅಬಕಾರಿ ಇಲಾಖೆ ಕಾರ್ಯಾಚರಣೆ: ಮದ್ಯ ತುಂಬಿದ್ದ ಬೃಹತ್ ಟ್ಯಾಂಕರ್ ವಶಕ್ಕೆ

For Dai;y Updates Join Our whatsapp Group

ಬೆಳಗಾವಿ: ಅಕ್ರಮವಾಗಿ 24 ಸಾವಿರ ಲೀಟರ್ ಮದ್ಯ ಸಾಗಿಸುತ್ತಿದ್ದ ಬೃಹತ್ ಟ್ಯಾಂಕರ್‌ ಅನ್ನು ಅಬಕಾರಿ ಇಲಾಖೆ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.

ಬೆಳಗಾವಿ ಜಿಲ್ಲೆಯ ಎಂ.ಕೆ. ಹುಬ್ಬಳ್ಳಿ ಪಟ್ಟಣದ ಸಮೀಪ ಶನಿವಾರ ಮಧ್ಯರಾತ್ರಿ ಈ ಕಾರ್ಯಾಚರಣೆ ನಡೆದಿದ್ದು, ಜಪ್ತಿ ಮಾಡಲಾದ ಟ್ಯಾಂಕರ್‌ ಮತ್ತು ಮದ್ಯದ ಒಟ್ಟು ಮೌಲ್ಯ ₹32.40 ಲಕ್ಷ ಎಂದು ಅಂದಾಜಿಸಲಾಗಿದೆ.

ವಾಹನ ತಪಾಸಣೆ ವೇಳೆ ಅಕ್ರಮ ಮದ್ಯ ಪತ್ತೆ:

ಹೊಳಿಹೊಸೂರು ಗ್ರಾಮದಿಂದ ಎಂ.ಕೆ. ಹುಬ್ಬಳ್ಳಿ ಪಟ್ಟಣಕ್ಕೆ ಸಂಪರ್ಕ ಕಲ್ಪಿಸುವ ರಾಜ್ಯ ಹೆದ್ದಾರಿಯಲ್ಲಿ ಅಬಕಾರಿ ಅಧಿಕಾರಿಗಳು ಗಸ್ತು ತಿರುಗುತ್ತಿದ್ದರು. ಈ ವೇಳೆ ರಾತ್ರಿ ಸುಮಾರು 12.25ರ ವೇಳೆಗೆ ಅನುಮಾನಾಸ್ಪದವಾಗಿ ಸಂಚರಿಸುತ್ತಿದ್ದ KA-25-AA-3750 ನೋಂದಣಿ ಸಂಖ್ಯೆಯ ಭಾರತ್‌ಬೆನ್ಜ್ ಟ್ಯಾಂಕರ್‌ ಅನ್ನು ತಡೆದು ಪರಿಶೀಲಿಸಿದ್ದಾರೆ. ತಪಾಸಣೆ ನಡೆಸಿದಾಗ ಟ್ಯಾಂಕರ್‌ನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 24 ಸಾವಿರ ಲೀಟರ್ ಮದ್ಯ ಪತ್ತೆಯಾಗಿದೆ.

ಚಾಲಕನಿಗೆ ನೋಟಿಸ್, ಮಾಲೀಕನ ವಿರುದ್ಧವೂ ಪ್ರಕರಣ:

ವಿಜಯಪುರ ಜಿಲ್ಲೆಯ ಬೋಳಚಿಕ್ಕಲಕಿ ಗ್ರಾಮದ ನಿವಾಸಿ ಬಂಡೆನವಾಜ್ ನಬಿ ಸಾಬ್ ತಿಗಣಿಬಿದರಿ ಟ್ಯಾಂಕರ್ ಚಾಲಕನಾಗಿದ್ದಾನೆ. ವಿಚಾರಣೆಗೆ ಹಾಜರಾಗುವಂತೆ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (BNSS), 2023ರ ಸೆಕ್ಷನ್ 35(3)ರ ಅಡಿಯಲ್ಲಿ ಚಾಲಕನಿಗೆ ನೋಟಿಸ್ ನೀಡಲಾಗಿದೆ ಎಂದು ಅಬಕಾರಿ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ವಾಹನದ ಮಾಲೀಕನ ವಿರುದ್ಧವೂ ಪ್ರಕರಣ ದಾಖಲಿಸಲಾಗಿದೆ. ಪ್ರಕರಣದ ಪ್ರಥಮ ಮಾಹಿತಿ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ ಎಂದು ಇಲಾಖೆ ತಿಳಿಸಿದೆ.

ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ:

ಬೆಳಗಾವಿ ವಿಭಾಗದ ಅಬಕಾರಿ ಜಂಟಿ ಆಯುಕ್ತರು, ಬೆಳಗಾವಿ ದಕ್ಷಿಣ ಜಿಲ್ಲೆಯ ಅಬಕಾರಿ ಉಪ ಆಯುಕ್ತರು ಹಾಗೂ ರಾಮದುರ್ಗ ಉಪವಿಭಾಗದ ಅಬಕಾರಿ ಉಪ ಅಧೀಕ್ಷಕರ ಮಾರ್ಗದರ್ಶನದಲ್ಲಿ ಈ ಕಾರ್ಯಾಚರಣೆ ನಡೆದಿದೆ. ಬೈಲಹೊಂಗಲ ಅಬಕಾರಿ ವಲಯದ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img