HomeIndia News‘ನೀರು ಇದ್ರೆ ತಾನೇ ಹರಿಸೋಕೆ ಸಾಧ್ಯ?’ ಕಾವೇರಿ ನೀರು ಕೇಳಿದ ತಮಿಳುನಾಡಿಗೆ ಸುಪ್ರೀಂ ಛೀಮಾರಿ

‘ನೀರು ಇದ್ರೆ ತಾನೇ ಹರಿಸೋಕೆ ಸಾಧ್ಯ?’ ಕಾವೇರಿ ನೀರು ಕೇಳಿದ ತಮಿಳುನಾಡಿಗೆ ಸುಪ್ರೀಂ ಛೀಮಾರಿ

For Dai;y Updates Join Our whatsapp Group

ನವದೆಹಲಿ: ಕಾವೇರಿ ನೀರು ಬಿಡುಗಡೆ ಮಾಡುವಂತೆ ತಮಿಳುನಾಡು ಸರ್ಕಾರ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ನೀರಿನ ಲಭ್ಯತೆ ಕುರಿತು ಪ್ರಶ್ನೆ ಎತ್ತಿದೆ.

ಉಭಯ ರಾಜ್ಯಗಳ ವಾದ ಆಲಿಸಿದ ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಮತ್ತು ಸಂದೀಪ್ ಮೆಹ್ತಾ ಅವರ ಪೀಠವು ತೀರ್ಪನ್ನು ಕಾಯ್ದಿರಿಸಿದೆ.

ವಿಚಾರಣೆ ವೇಳೆ ತಮಿಳುನಾಡು ಪರ ವಕೀಲರು, ರಾಜ್ಯದಲ್ಲಿ ನೀರಿನ ಕೊರತೆಯಿಂದ ಕುರುವೈ ಮತ್ತು ಸಾಂಬಾ ಬೆಳೆಗಳಿಗೆ ಹಾನಿಯಾಗುವ ಆತಂಕವಿದೆ ಎಂದು ವಾದಿಸಿದರು. ಪ್ರಸ್ತುತ 3,000 ಕ್ಯೂಸೆಕ್ ನೀರು ಸಾಕಾಗುವುದಿಲ್ಲ. ಕರ್ನಾಟಕದಿಂದ 11 ಟಿಎಂಸಿ ನೀರು ಬಾಕಿ ಉಳಿದಿದ್ದು, ಅದನ್ನು ಬಿಡುಗಡೆ ಮಾಡಲು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಮನವಿ ಮಾಡಿದರು.

ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ಜಲಾಶಯಗಳಲ್ಲಿ ನೀರಿನ ಲಭ್ಯತೆ ಇಲ್ಲದಿದ್ದರೆ ಬಾಕಿ ನೀರನ್ನು ಹೇಗೆ ಬಿಡುಗಡೆ ಮಾಡಲು ಸಾಧ್ಯ ಎಂದು ಪ್ರಶ್ನಿಸಿತು.

ಕರ್ನಾಟಕದ ವಾದವೇನು?

ಕರ್ನಾಟಕದ ಪರ ವಕೀಲರು, ರಾಜ್ಯದ ಹಲವು ತಾಲೂಕುಗಳಲ್ಲಿ ಬರ ಘೋಷಿಸಲಾಗಿದೆ. ಹಿಂಗಾರು ಮಳೆಯ ಪ್ರಯೋಜನ ತಮಿಳುನಾಡಿಗೆ ದೊರೆಯುತ್ತದೆಯಾದರೂ ಕರ್ನಾಟಕಕ್ಕೆ ಅದೇ ರೀತಿಯ ಅನುಕೂಲವಿಲ್ಲ ಎಂದು ವಾದಿಸಿದರು.

ರಾಜ್ಯದ ಜಲಾಶಯಗಳಲ್ಲಿ 57 ಟಿಎಂಸಿ ನೀರಿನ ಸಂಗ್ರಹವಿದ್ದು, ಬೆಂಗಳೂರು ನಗರದ ಕುಡಿಯುವ ನೀರಿನ ಅಗತ್ಯಕ್ಕೇ ಸುಮಾರು 40 ಟಿಎಂಸಿ ನೀರು ಬೇಕಾಗುತ್ತದೆ. ಇಂತಹ ಪರಿಸ್ಥಿತಿಯಲ್ಲಿ ತಮಿಳುನಾಡಿಗೆ ಹೆಚ್ಚುವರಿ ನೀರು ಹರಿಸುವುದು ಕಷ್ಟ ಎಂದು ಕರ್ನಾಟಕದ ಪರ ವಕೀಲರು ನ್ಯಾಯಾಲಯಕ್ಕೆ ತಿಳಿಸಿದರು.

ಉಭಯ ರಾಜ್ಯಗಳ ವಾದಗಳನ್ನು ಆಲಿಸಿದ ಸುಪ್ರೀಂ ಕೋರ್ಟ್, ಅರ್ಜಿಯ ಮೇಲಿನ ಆದೇಶವನ್ನು ಕಾಯ್ದಿರಿಸಿದೆ.

 

 

 

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img