ಬೆಂಗಳೂರು: ನಗರದ ಪೀಣ್ಯ ಕೈಗಾರಿಕಾ ಪ್ರದೇಶದಲ್ಲಿರುವ ಕರ್ಲಾನ್ (Kurlon) ಹಾಸಿಗೆ ತಯಾರಿಕಾ ಘಟಕದಲ್ಲಿ ಅಗ್ನಿ ಅವಘಡ ಸಂಭವಿಸಿದೆ.
ಘಟಕದಲ್ಲಿ ಹಾಸಿಗೆ ತಯಾರಿಸಲು ಸಂಗ್ರಹಿಸಿಟ್ಟಿದ್ದ ಕಚ್ಚಾ ವಸ್ತುಗಳ ಶೆಡ್ಗೆ ಬೆಂಕಿ ತಗುಲಿದ್ದು, ಸುತ್ತಮುತ್ತಲಿನ ಪ್ರದೇಶದಲ್ಲಿ ದಟ್ಟ ಹೊಗೆ ಆವರಿಸಿತ್ತು.
ಮಧ್ಯಾಹ್ನ ಸುಮಾರು 3 ಗಂಟೆ ವೇಳೆಗೆ ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಕಾಣಿಸಿಕೊಂಡಿದೆ ಎಂದು ತಿಳಿದುಬಂದಿದೆ. ಬೆಂಕಿ ವೇಗವಾಗಿ ಹರಡಿದ್ದರಿಂದ ಸ್ಥಳೀಯರಲ್ಲಿ ಆತಂಕ ಉಂಟಾಗಿತ್ತು.
ಮಾಹಿತಿ ತಿಳಿದು ಸ್ಥಳಕ್ಕೆ ಧಾವಿಸಿದ ಎರಡು ಅಗ್ನಿಶಾಮಕ ವಾಹನಗಳು ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿವೆ.
ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ. ಅಗ್ನಿ ಅವಘಡದಿಂದ ಉಂಟಾದ ಹಾನಿಯ ಕುರಿತು ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.









