ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (KSRTC) ಬಸ್‌ಗಳಲ್ಲಿ ಟಿಕೆಟ್ ಪಡೆಯದೆ ಪ್ರಯಾಣಿಸಿದವರ ವಿರುದ್ಧ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದಾರೆ.
ಸೆಪ್ಟೆಂಬರ್ ತಿಂಗಳಲ್ಲಿ ಟಿಕೆಟ್ ರಹಿತವಾಗಿ ಸಂಚರಿಸಿದ 4,382 ಪ್ರಯಾಣಿಕರಿಂದ ಒಟ್ಟು ₹8,45,034 ದಂಡ ವಸೂಲಿ ಮಾಡಲಾಗಿದೆ.
ಸೆಪ್ಟೆಂಬರ್ ತಿಂಗಳಿನಲ್ಲಿ ತನಿಖಾಧಿಕಾರಿಗಳು ಒಟ್ಟು 42,784 ವಾಹನಗಳನ್ನು ತಪಾಸಣೆ ಮಾಡಿದ್ದಾರೆ. ಈ ವೇಳೆ 4,310 ಪ್ರಕರಣಗಳನ್ನು ಪತ್ತೆಹಚ್ಚಲಾಗಿದೆ. ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ 4,382 ಪ್ರಯಾಣಿಕರಿಂದ ದಂಡ ಸಂಗ್ರಹಿಸಲಾಗಿದೆ ಎಂದು ತಿಳಿದುಬಂದಿದೆ.
ಇದೇ ವೇಳೆ, ನಿಗಮದ ಆದಾಯದಲ್ಲಿ ಸೋರಿಕೆಯಾಗುತ್ತಿದ್ದ ₹1,12,019 ಮೊತ್ತವನ್ನೂ ತನಿಖಾಧಿಕಾರಿಗಳು ಪತ್ತೆಹಚ್ಚಿದ್ದಾರೆ. ನಿಯಮ ಉಲ್ಲಂಘಿಸಿದವರ ವಿರುದ್ಧ ಅಧಿಕಾರಿಗಳು ಕ್ರಮ ಕೈಗೊಂಡಿದ್ದಾರೆ.



