HomeKarnataka Newsನಂದಿನಿ ಹಾಲಿನ ಪುಡಿ ಕಲಬೆರಕೆ ಪ್ರಕರಣ: ಮತ್ತೆ ಮೂವರ ಬಂಧನ, ಆರೋಪಿಗಳ ಸಂಖ್ಯೆ 11ಕ್ಕೆ ಏರಿಕೆ

ನಂದಿನಿ ಹಾಲಿನ ಪುಡಿ ಕಲಬೆರಕೆ ಪ್ರಕರಣ: ಮತ್ತೆ ಮೂವರ ಬಂಧನ, ಆರೋಪಿಗಳ ಸಂಖ್ಯೆ 11ಕ್ಕೆ ಏರಿಕೆ

For Dai;y Updates Join Our whatsapp Group

ಮಂಡ್ಯ: ಮಂಡ್ಯ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘದ (ಮನ್‌ಮುಲ್) ನಂದಿನಿ ಹಾಲಿನ ಪುಡಿ ಕಲಬೆರಕೆ ಪ್ರಕರಣದ ತನಿಖೆ ತೀವ್ರಗೊಂಡಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮತ್ತೆ ಮೂವರನ್ನು ಬಂಧಿಸಿದ್ದು, ಬಂಧಿತರ ಒಟ್ಟು ಸಂಖ್ಯೆ 11ಕ್ಕೆ ಏರಿಕೆಯಾಗಿದೆ.

ಈ ಹಿಂದೆ ಪ್ರಕರಣದ ಪ್ರಮುಖ ಆರೋಪಿ ಜಾದವ್ ಹಾಗೂ ಮನ್‌ಮುಲ್ ಮಾಜಿ ಅಧ್ಯಕ್ಷ ಉಮ್ಮಡಹಳ್ಳಿ ಶಿವಪ್ಪ ಸೇರಿದಂತೆ ಎಂಟು ಮಂದಿಯನ್ನು ಬಂಧಿಸಲಾಗಿತ್ತು. ಇದೀಗ ಕೇರಳ ಮೂಲದ ಅನಸ್, ತೂಬಿನಕೆರೆಯ ವಿಜೇಶ್ ಹಾಗೂ ಮದ್ದೂರಿನ ಅರ್ಪಿತ್‌ನನ್ನು ಪೊಲೀಸರು ಬಂಧಿಸಿದ್ದಾರೆ.

ಕಡಿಮೆ ಬೆಲೆಗೆ ಹಾಲಿನ ಪುಡಿ ಪೂರೈಕೆ:

ತನಿಖೆಯ ಪ್ರಕಾರ, ಪ್ರಕರಣದ ಪ್ರಮುಖ ಆರೋಪಿ ಜಾದವ್ ಬಂಧಿತರಿಗೆ ಮಾರುಕಟ್ಟೆ ದರಕ್ಕಿಂತ ಕಡಿಮೆ ಬೆಲೆಗೆ ನಂದಿನಿ ಹಾಲಿನ ಪುಡಿಯನ್ನು ಪೂರೈಸುತ್ತಿದ್ದ ಎನ್ನಲಾಗಿದೆ. ಕಳೆದ ಎರಡು ವರ್ಷಗಳಿಂದ ಟನ್‌ಗಟ್ಟಲೆ ಹಾಲಿನ ಪುಡಿಯ ವಹಿವಾಟು ನಡೆದಿರುವುದು ತನಿಖೆಯಿಂದ ಬೆಳಕಿಗೆ ಬಂದಿದೆ.

ಬೇಕರಿ ಉತ್ಪನ್ನಗಳ ತಯಾರಿಕೆಗೆ ಬಳಕೆ:

ಬಂಧಿತರಾದ ವಿಜೇಶ್ ಮತ್ತು ಅನಸ್ ಬೇಕರಿ ಉತ್ಪನ್ನಗಳ ತಯಾರಿಕೆಯಲ್ಲಿ ತೊಡಗಿಸಿಕೊಂಡಿದ್ದು, ನಂದಿನಿ ಹಾಲಿನ ಪುಡಿಯನ್ನು ಬೇಕರಿ ಪದಾರ್ಥಗಳ ತಯಾರಿಕೆಗೆ ಬಳಸುತ್ತಿದ್ದರು ಎನ್ನಲಾಗಿದೆ. ಇದರ ಜೊತೆಗೆ ಹಾಲಿನ ಪುಡಿಯನ್ನು ಕೇರಳಕ್ಕೂ ಸಾಗಿಸಲಾಗುತ್ತಿತ್ತು ಎಂಬ ಮಾಹಿತಿ ತನಿಖೆಯಲ್ಲಿ ತಿಳಿದುಬಂದಿದೆ.

ಈ ಜಾಲದಲ್ಲಿ ಇನ್ನೂ ಯಾರಾದರೂ ಭಾಗಿಯಾಗಿದ್ದಾರೆಯೇ ಎಂಬುದರ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಪ್ರಕರಣದ ಸಂಪೂರ್ಣ ಜಾಲವನ್ನು ಪತ್ತೆಹಚ್ಚಲು ತನಿಖಾ ತಂಡ ಮುಂದಾಗಿದೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img