ಬೆಂಗಳೂರು: ನಗರದ ರೇಸ್ಕೋರ್ಸ್ ರಸ್ತೆಯಲ್ಲಿರುವ ಇಂಧನ ಭವನದ ಆರನೇ ಮಹಡಿಯಿಂದ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಜರುಗಿದೆ.
48 ವರ್ಷದ ವಜ್ರಕುಮಾರ್ ಮೃತ ವ್ಯಕ್ತಿ. ಇಂದು ಸಂಜೆ 6:30ರ ಸುಮಾರಿಗೆ ಈ ಘಟನೆ ನಡೆದಿದೆ ಎಂದು ತಿಳಿದುಬಂದಿದೆ.
ವಜ್ರಕುಮಾರ್ ಅವರು ಇಂಧನ ಇಲಾಖೆಯಲ್ಲಿ ಕಿರಿಯ ಸಹಾಯಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಸುಮಾರು 10ರಿಂದ 11 ವರ್ಷಗಳಿಂದ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು ಎನ್ನಲಾಗಿದೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಹೈಗ್ರೌಂಡ್ಸ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ವಜ್ರಕುಮಾರ್ ಅವರ ಸಾವಿಗೆ ನಿಖರ ಕಾರಣವೇನು ಎಂಬುದು ಸದ್ಯಕ್ಕೆ ತಿಳಿದುಬಂದಿಲ್ಲ. ಪೊಲೀಸರು ಹೆಚ್ಚಿನ ಮಾಹಿತಿ ಕಲೆಹಾಕುತ್ತಿದ್ದಾರೆ.



