HomePolitics Newsಸಿದ್ದರಾಮಯ್ಯ ಸ್ಟಿಂಗ್ ನಡೆದಿದ್ದು 2011ರಲ್ಲಿ ಅಲ್ಲ, 2023ರಲ್ಲಿ: HDK ಹೊಸ ಬಾಂಬ್

ಸಿದ್ದರಾಮಯ್ಯ ಸ್ಟಿಂಗ್ ನಡೆದಿದ್ದು 2011ರಲ್ಲಿ ಅಲ್ಲ, 2023ರಲ್ಲಿ: HDK ಹೊಸ ಬಾಂಬ್

For Dai;y Updates Join Our whatsapp Group

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿರುವ ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಮತ್ತೊಂದು ಗಂಭೀರ ಆರೋಪ ಮಾಡಿದ್ದಾರೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ 2011ರಲ್ಲಿ ಅಲ್ಲ, 2023ರಲ್ಲೇ ಸ್ಟಿಂಗ್ ಆಪರೇಷನ್ ನಡೆದಿದೆ ಎಂದು ಹೇಳುವ ಮೂಲಕ ಹೊಸ ಸಂಚಲನ ಮೂಡಿಸಿದ್ದಾರೆ.

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾದ ವಿಚಾರವಾಗಿ ಪ್ರತಿಕ್ರಿಯಿಸಿದ ಕುಮಾರಸ್ವಾಮಿ, ಇಬ್ಬರು ನಾಯಕರು ಭೇಟಿಯಾಗಿರುವುದರಲ್ಲಿ ಯಾವುದೇ ತಪ್ಪಿಲ್ಲ. ಹಾಲಿ ಮತ್ತು ಮಾಜಿ ಮುಖ್ಯಮಂತ್ರಿಗಳು ಮಾತುಕತೆ ನಡೆಸಿದ್ದಾರೆ ಅಷ್ಟೇ. ಆದರೆ, ಸಿದ್ದರಾಮಯ್ಯ ವಿರುದ್ಧ ನಡೆದಿರುವುದಾಗಿ ಹೇಳಲಾಗುತ್ತಿರುವ ಸ್ಟಿಂಗ್ ಆಪರೇಷನ್ ಬಗ್ಗೆ ಹಲವು ಅನುಮಾನಗಳಿವೆ ಎಂದು ತಿಳಿಸಿದ್ದಾರೆ.

ಸಿದ್ದರಾಮಯ್ಯ ವಿರುದ್ಧ ನಡೆದ ಸ್ಟಿಂಗ್ ಆಪರೇಷನ್ 2011ರದ್ದು ಎಂದು ನಾನು ಭಾವಿಸಿದ್ದೆ. ಆದರೆ, ಕೆಲವು ಸ್ನೇಹಿತರು ಅದು 2023ರಲ್ಲಿ ನಡೆದಿರುವುದಾಗಿ ತಿಳಿಸಿದ್ದಾರೆ. ಮಾಜಿ ಮುಖ್ಯಮಂತ್ರಿಯನ್ನೇ ಗುರಿಯಾಗಿಸಿಕೊಂಡು ಸ್ಟಿಂಗ್ ನಡೆಸಲಾಗಿದೆ. ಆ ವಿಡಿಯೋವನ್ನು ಇಟ್ಟುಕೊಂಡು ಎಲ್ಲರನ್ನೂ ಕೈಗೊಂಬೆಯಂತೆ ಬಳಸಿಕೊಳ್ಳುವ ಪ್ರಯತ್ನ ನಡೆದಿರಬಹುದು ಎಂದು ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ಕೂಡ ದೂರು ನೀಡಿದ್ದಾರೆ. ಮುಂದಿನ ದಿನಗಳಲ್ಲಿ ಕಾನೂನಾತ್ಮಕವಾಗಿ ಯಾವ ರೀತಿಯ ಬೆಳವಣಿಗೆಗಳು ನಡೆಯಲಿವೆ ಎಂಬುದನ್ನು ಕಾದು ನೋಡಬೇಕಿದೆ ಎಂದು ಹೇಳಿದ್ದಾರೆ.

ಇದಕ್ಕೂ ಮೊದಲು ನೂತನ ರಾಜ್ಯಪಾಲರನ್ನು ಭೇಟಿಯಾದ ಕುಮಾರಸ್ವಾಮಿ, ರಾಜ್ಯಪಾಲರಾಗಿ ಅಧಿಕಾರ ಸ್ವೀಕರಿಸಿರುವ ಹಿನ್ನೆಲೆಯಲ್ಲಿ ಶುಭಾಶಯ ಕೋರಿದ್ದೇವೆ. ನಮ್ಮ ಪಕ್ಷದ ಶಾಸಕರು ಹಾಗೂ ಮುಖಂಡರೊಂದಿಗೆ ರಾಜ್ಯಪಾಲರನ್ನು ಭೇಟಿಯಾಗಿದ್ದು, ಯಾವುದೇ ರಾಜಕೀಯ ಚರ್ಚೆ ನಡೆಸಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಒಂದು ಕಾಲದಲ್ಲಿ ಉತ್ತಮ ಆಡಳಿತಕ್ಕೆ ಕರ್ನಾಟಕ ದೇಶದಲ್ಲೇ ಮಾದರಿಯಾಗಿತ್ತು. ಆದರೆ, ಈಗ ರಾಜ್ಯದ ಆಡಳಿತ ವ್ಯವಸ್ಥೆ ದಾರಿ ತಪ್ಪಿದೆ. ಈ ಪರಿಸ್ಥಿತಿಯನ್ನು ಸರಿಪಡಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ರಾಜ್ಯಪಾಲರಿಗೆ ಮನವಿ ಮಾಡಿದ್ದೇವೆ ಎಂದು ತಿಳಿಸಿದ್ದಾರೆ.

ಇದೇ ವೇಳೆ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಕುಮಾರಸ್ವಾಮಿ, ಸರ್ಕಾರದಲ್ಲಿ ಕಾನೂನುಬಾಹಿರ ಚಟುವಟಿಕೆಗಳು ಹಾಗೂ ಹಣ ದುರುಪಯೋಗ ನಡೆಯುತ್ತಿದೆ ಎಂದು ಆರೋಪಿಸಿದ್ದಾರೆ. ಸ್ಟಿಂಗ್ ಆಪರೇಷನ್ ವಿಚಾರವಾಗಿ ನಡೆಯುತ್ತಿರುವ ಚರ್ಚೆಯಿಂದ ಯಾರಿಗೂ ಗೌರವ ಬರುವುದಿಲ್ಲ. ರಾಜ್ಯದಲ್ಲಿ ಉತ್ತಮ ರಾಜಕೀಯ ವಾತಾವರಣ ನಿರ್ಮಾಣವಾಗಬೇಕು. ಅದಕ್ಕಾಗಿ ನಮ್ಮ ಪಕ್ಷಕ್ಕೂ ಜವಾಬ್ದಾರಿಯಿದೆ ಎಂದು ಹೇಳಿದ್ದಾರೆ.

ಸ್ಟಿಂಗ್ ಪ್ರಕರಣ ಸೇರಿದಂತೆ ರಾಜ್ಯದ ಪ್ರಸ್ತುತ ರಾಜಕೀಯ ಬೆಳವಣಿಗೆಗಳ ಕುರಿತು ಚರ್ಚಿಸಲು ಪಕ್ಷದ ಮುಖಂಡರ ಸಭೆ ಕರೆಯಲಾಗಿದೆ. ಮುಂದಿನ ಹೋರಾಟದ ಬಗ್ಗೆ ಸಭೆಯಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು. ನಮಗೆ ಯಾರೊಂದಿಗೂ ವೈಯಕ್ತಿಕ ದ್ವೇಷವಿಲ್ಲ ಎಂದು ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ.

 

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img