• About
  • Advertise
  • Privacy & Policy
  • Contact
Advertisement
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
No Result
View All Result
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
No Result
View All Result
No Result
View All Result
  • Home
  • Gadag News
  • Karnataka News
  • Crime News
  • Politics News
  • Bengaluru News
  • Entertainment
  • Life Style
  • Sports News
Home Gadag News

ಕೃಷಿ ಹೊಂಡದಲ್ಲಿ ಮಹಿಳೆಯ ಶವ ಪತ್ತೆ ಪ್ರಕರಣಕ್ಕೆ ಟ್ವಿಸ್ಟ್‌: ಎರಡೂವರೆ ತಿಂಗಳ ಬಳಿಕ ಆರೋಪಿ ಅರೆಸ್ಟ್‌

Vijaya Sakshi by Vijaya Sakshi
October 21, 2026
in Gadag News
0
ಕೃಷಿ ಹೊಂಡದಲ್ಲಿ ಮಹಿಳೆಯ ಶವ ಪತ್ತೆ ಪ್ರಕರಣಕ್ಕೆ ಟ್ವಿಸ್ಟ್‌: ಎರಡೂವರೆ ತಿಂಗಳ ಬಳಿಕ ಆರೋಪಿ ಅರೆಸ್ಟ್‌
0
SHARES
3
VIEWS
Share on FacebookShare on Twitter

ಗದಗ: ಕೃಷಿ ಹೊಂಡದ ನೀರಿನಲ್ಲಿ ಅಪರಿಚಿತ ಮಹಿಳೆಯ ಶವ ಪತ್ತೆಯಾಗಿದ್ದ ಪ್ರಕರಣವನ್ನು ಎರಡೂವರೆ ತಿಂಗಳ ಸತತ ತನಿಖೆಯ ಬಳಿಕ ರೋಣ ಪೊಲೀಸರು ಭೇದಿಸಿದ್ದಾರೆ.

ಮಹಿಳೆಯ ಗುರುತು ಪತ್ತೆಹಚ್ಚುವುದರ ಜೊತೆಗೆ, ಆಕೆಯನ್ನು ಕೊಲೆ ಮಾಡಿ ಏನೂ ನಡೆದೇ ಇಲ್ಲ ಎಂಬಂತೆ ತನ್ನ ಪಾಡಿಗೆ ತಾನು ಕುರಿ ಕಾಯುತ್ತಿದ್ದ ಆರೋಪಿಯನ್ನೂ ಬಂಧಿಸಿದ್ದಾರೆ.

ಮಹಿಳೆ ಇತರ ಪುರುಷರೊಂದಿಗೆ ಸಂಪರ್ಕದಲ್ಲಿದ್ದಾಳೆ ಎಂಬ ಅನುಮಾನವೇ ಕೊಲೆಗೆ ಕಾರಣವಾಗಿದ್ದು, ಕಲ್ಲಿನಿಂದ ತಲೆಗೆ ಹೊಡೆದು ಕೊಲೆ ಮಾಡಿದ ಬಳಿಕ ಶವವನ್ನು ಕೃಷಿ ಹೊಂಡಕ್ಕೆ ಎಸೆದು, ಗುರುತು ಹಾಗೂ ಸಾಕ್ಷ್ಯ ನಾಶಪಡಿಸಲು ಆಕೆಯ ಸೀರೆ, ಚಪ್ಪಲಿ ಮತ್ತು ಮೊಬೈಲ್‌ಗಳನ್ನು ಬೇರೆಡೆ ಎಸೆದಿರುವುದು ಪೊಲೀಸ್ ತನಿಖೆಯಲ್ಲಿ ಬೆಳಕಿಗೆ ಬಂದಿದೆ.

ಮಲ್ಲಾಪೂರ ಸೀಮೆಯ ಕೃಷಿ ಹೊಂಡದಲ್ಲಿ ಶವ ಪತ್ತೆ:

ಗದಗ ಜಿಲ್ಲೆಯ ರೋಣ ಪೊಲೀಸ್ ಠಾಣೆ ವ್ಯಾಪ್ತಿಯ ಮಲ್ಲಾಪೂರ ಸೀಮೆಯ ಕೃಷಿ ಹೊಂಡದ ನೀರಿನಲ್ಲಿ 2026ರ ಆಗಸ್ಟ್ 4ರಂದು ಅಪರಿಚಿತ ಮಹಿಳೆಯ ಶವ ತೇಲುತ್ತಿರುವುದು ಗ್ರಾಮಸ್ಥರ ಗಮನಕ್ಕೆ ಬಂದಿತ್ತು. ತಕ್ಷಣ ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು, ಸ್ಥಳಕ್ಕೆ ಧಾವಿಸಿದ ಪೊಲೀಸರು ಶವವನ್ನು ನೀರಿನಿಂದ ಹೊರತೆಗೆದು ಪರಿಶೀಲನೆ ನಡೆಸಿದ್ದರು.

ಮಹಿಳೆಯ ತಲೆಗೆ ತೀವ್ರ ಗಾಯವಾಗಿರುವುದು ಕಂಡುಬಂದಿತ್ತು. ಸುತ್ತಮುತ್ತಲಿನ ಗ್ರಾಮಸ್ಥರು ಸ್ಥಳಕ್ಕೆ ಬಂದು ಪರಿಶೀಲಿಸಿದರೂ ಮೃತ ಮಹಿಳೆ ಯಾರೆಂಬುದು ಪತ್ತೆಯಾಗಿರಲಿಲ್ಲ. ಹೀಗಾಗಿ ಪ್ರಕರಣ ಪೊಲೀಸರಿಗೆ ದೊಡ್ಡ ಸವಾಲಾಗಿ ಪರಿಣಮಿಸಿತ್ತು.

ಈ ಸಂಬಂಧ ಮಲ್ಲಾಪೂರ ಗ್ರಾಮ ಪಂಚಾಯಿತಿಯ ಸಿಬ್ಬಂದಿ ನೀಡಿದ ದೂರಿನ ಆಧಾರದ ಮೇಲೆ ರೋಣ ಪೊಲೀಸ್ ಠಾಣೆಯಲ್ಲಿ ಗುನ್ನೆ ನಂ. 150/2026ರ ಅಡಿಯಲ್ಲಿ ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್‌)-2023ರ ಕಲಂ 103(1) ಮತ್ತು 238ರ ಪ್ರಕಾರ ಕೊಲೆ ಹಾಗೂ ಸಾಕ್ಷ್ಯಕ್ಕೆ ಸಂಬಂಧಿಸಿದ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿತ್ತು.

ಘಟನಾ ಸ್ಥಳಕ್ಕೆ ಪೊಲೀಸ್ ಅಧೀಕ್ಷಕರು ಹಾಗೂ ಪೊಲೀಸ್ ಉಪಾಧೀಕ್ಷಕರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಪ್ರಕರಣದ ಮುಂದಿನ ತನಿಖೆಯನ್ನು ರೋಣ ವೃತ್ತದ ಸಿಪಿಐ ಅವರಿಗೆ ವಹಿಸಲಾಗಿತ್ತು.

ಸೀರೆ, ತಾಳಿಯಿಂದ ಸುಳಿವು:

ಮೃತ ಮಹಿಳೆಯ ಗುರುತು ಪತ್ತೆಹಚ್ಚುವುದೇ ಪೊಲೀಸರಿಗೆ ಮೊದಲ ಸವಾಲಾಗಿತ್ತು. ಕಳೆದ ಎರಡೂವರೆ ತಿಂಗಳಿಂದ ವಿವಿಧ ಆಯಾಮಗಳಲ್ಲಿ ತನಿಖೆ ನಡೆಸಿದರೂ ಆರಂಭದಲ್ಲಿ ಯಾವುದೇ ಸ್ಪಷ್ಟ ಸುಳಿವು ಸಿಕ್ಕಿರಲಿಲ್ಲ.

ಮೃತ ಮಹಿಳೆ ಧರಿಸಿದ್ದ ಸೀರೆ ಹಾಗೂ ಕೊರಳಿನಲ್ಲಿದ್ದ ತಾಳಿಯನ್ನು ಆಧಾರವಾಗಿಟ್ಟುಕೊಂಡು, ಆಕೆ ಬೆಳಗಾವಿ ಜಿಲ್ಲೆ ಅಥವಾ ಮಹಾರಾಷ್ಟ್ರದ ಕೊಲ್ಹಾಪುರ ಸುತ್ತಮುತ್ತಲಿನ ಪ್ರದೇಶದವಳಾಗಿರಬಹುದು ಎಂದು ಪೊಲೀಸರು ಶಂಕಿಸಿದ್ದರು. ಈ ಹಿನ್ನೆಲೆಯಲ್ಲಿ ಸಿಬ್ಬಂದಿಯನ್ನು ಆ ಭಾಗಕ್ಕೆ ಕಳುಹಿಸಿ ಮಾಹಿತಿ ಸಂಗ್ರಹಿಸಲು ಮುಂದಾಗಿದ್ದರು.

ಈ ವೇಳೆ ಬೆಳಗಾವಿ ಜಿಲ್ಲೆಯ ಖಾನಾಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಗುನ್ನೆ ನಂ. 217/2026ರ ಮಹಿಳೆ ಕಾಣೆಯಾದ ಪ್ರಕರಣದ ವಿವರಗಳೊಂದಿಗೆ ಮಲ್ಲಾಪೂರದ ಕೃಷಿ ಹೊಂಡದಲ್ಲಿ ಪತ್ತೆಯಾಗಿದ್ದ ಮಹಿಳೆಯ ಚಹರೆ ಹೊಂದಾಣಿಕೆಯಾಗಬಹುದೆಂಬ ಸುಳಿವು ಸಿಕ್ಕಿತು.

ಕಾಣೆಯಾಗಿದ್ದ ಮಹಿಳೆಯ ಕುಟುಂಬದವರನ್ನು ಕರೆಸಿ ಮೃತಳ ಭಾವಚಿತ್ರಗಳನ್ನು ತೋರಿಸಿದಾಗ, ಅವರು ಆಕೆಯನ್ನು ಗುರುತಿಸಿದರು. ಮೃತ ಮಹಿಳೆ ಖಾನಾಪುರದ ಗೌರವ್ವ ಕೋಂ. ನಾಗಪ್ಪ ಹುಚನಟ್ಟಿ (46) ಎಂಬುದು ದೃಢಪಟ್ಟಿತು.

ಸಂಪರ್ಕದಲ್ಲಿದ್ದವರ ವಿಚಾರಣೆ, ಆರೋಪಿಯ ಸೆರೆ:

ಮೃತ ಮಹಿಳೆಯ ಗುರುತು ಪತ್ತೆಯಾದ ಬಳಿಕ ಆಕೆ ಯಾರೊಂದಿಗೆ ಸಂಪರ್ಕದಲ್ಲಿದ್ದಳು ಎಂಬುದರ ಕುರಿತು ಪೊಲೀಸರು ಸ್ಥಳೀಯ ಮೂಲಗಳು ಹಾಗೂ ತಾಂತ್ರಿಕ ವಿಧಾನಗಳ ಮೂಲಕ ಮಾಹಿತಿ ಕಲೆಹಾಕಿದರು. ಆಕೆಯ ಸಂಪರ್ಕದಲ್ಲಿದ್ದ ಕೆಲವರನ್ನು ವಿಚಾರಣೆಗೊಳಪಡಿಸಲಾಯಿತು.

ಈ ವೇಳೆ ರೋಣ ತಾಲೂಕಿನ ಹೊನ್ನಾಪುರ ಗ್ರಾಮದ ಪ್ರಕಾಶ ತಂದೆ ಭೀಮಪ್ಪ ತಳವಾರ (21) ಎಂಬಾತನ ಮೇಲೆ ಅನುಮಾನ ಮೂಡಿತು. ವಿಚಾರಣೆ ನಡೆಸಿದಾಗ ಆತ ಮಹಿಳೆಯನ್ನು ಕೊಲೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಬಳಿಕ ಆತನನ್ನು ಬಂಧಿಸಲಾಯಿತು.

ಸಂಶಯ, ಸಿಟ್ಟು ಕೊಲೆಯಲ್ಲಿ ಅಂತ್ಯ:

ಪೊಲೀಸರ ತನಿಖೆಯ ಪ್ರಕಾರ, ಮೃತ ಮಹಿಳೆ ತನ್ನೊಂದಿಗೆ ಮಾತ್ರವಲ್ಲದೆ ತನಗೆ ಪರಿಚಯವಿದ್ದ ಇತರ ಪುರುಷರೊಂದಿಗೂ ಸಂಪರ್ಕದಲ್ಲಿದ್ದಾಳೆ ಎಂಬ ಅನುಮಾನ ಆರೋಪಿಗೆ ಮೂಡಿತ್ತು. ಇದೇ ವಿಚಾರವಾಗಿ ಆತ ಮಹಿಳೆಯ ಮೇಲೆ ಸಿಟ್ಟಾಗಿದ್ದನು.

ನಂತರ ಮಹಿಳೆಯನ್ನು ಕರೆಸಿಕೊಂಡು ತನ್ನ ಬೈಕ್‌ನಲ್ಲಿ ಮಲ್ಲಾಪೂರ ಗ್ರಾಮದ ಸಮೀಪದ ಹೊಲವೊಂದರ ಕೃಷಿ ಹೊಂಡದ ಬಳಿಗೆ ಕರೆದೊಯ್ದಿದ್ದನು. ಅಲ್ಲಿ ಆಕೆ ಇತರರೊಂದಿಗೆ ಫೋನ್‌ನಲ್ಲಿ ಸಂಪರ್ಕದಲ್ಲಿರುವ ವಿಚಾರವಾಗಿ ಇಬ್ಬರ ನಡುವೆ ಜಗಳ ನಡೆದಿತ್ತು ಎನ್ನಲಾಗಿದೆ.

ಜಗಳ ವಿಕೋಪಕ್ಕೆ ತಿರುಗಿದಾಗ ಆರೋಪಿ ಕಲ್ಲಿನಿಂದ ಮಹಿಳೆಯ ತಲೆಗೆ ಬಲವಾಗಿ ಹೊಡೆದಿದ್ದಾನೆ. ತೀವ್ರ ಗಾಯಗೊಂಡ ಮಹಿಳೆಯನ್ನು ಕೃಷಿ ಹೊಂಡದ ನೀರಿಗೆ ಎಸೆದು ಅಲ್ಲಿಂದ ತೆರಳಿದ್ದಾನೆ ಎಂದು ತನಿಖೆಯಲ್ಲಿ ತಿಳಿದುಬಂದಿದೆ.

ಕೊಲೆ ಮಾಡಿದ ಬಳಿಕ ಯಾರಿಗೂ ತನ್ನ ಮೇಲೆ ಅನುಮಾನ ಬರಬಾರದು ಎಂಬ ಉದ್ದೇಶದಿಂದ ಮಹಿಳೆಯ ಮೈಮೇಲಿದ್ದ ಸೀರೆ, ಚಪ್ಪಲಿ ಹಾಗೂ ಮೊಬೈಲ್‌ಗಳನ್ನು ಬೇರೆಡೆಗೆ ಹೋಗಿ ಎಸೆದಿದ್ದನು. ಬಳಿಕ ಎಂದಿನಂತೆ ತನ್ನ ಕುರಿ ಕಾಯುವ ಕೆಲಸದಲ್ಲಿ ತೊಡಗಿಕೊಂಡಿದ್ದನು ಎಂದು ಪೊಲೀಸರು ತಿಳಿಸಿದ್ದಾರೆ.

ಎರಡೂವರೆ ತಿಂಗಳ ತನಿಖೆಗೆ ಫಲ:

ಅಪರಿಚಿತ ಮಹಿಳೆಯ ಕೊಲೆ ಪ್ರಕರಣವನ್ನು ಭೇದಿಸಲು ಗದಗ ಜಿಲ್ಲಾ ಪೊಲೀಸ್ ಅಧೀಕ್ಷಕ ಮಿಥುನ್ ಹೆಚ್.ಎನ್. ಹಾಗೂ ನರಗುಂದ ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ಪ್ರಭುಗೌಡ ಡಿ.ಕೆ. ಅವರು ಮಾರ್ಗದರ್ಶನ ನೀಡಿದ್ದರು.

ರೋಣ ಸಿಪಿಐ ವಿಜಯಕುಮಾರ ಹಾಗೂ ಪಿಎಸ್‌ಐ ಸೋಮನಗೌಡ ಬಿ. ಗೌಡರ ನೇತೃತ್ವದಲ್ಲಿ ತನಿಖೆ ನಡೆಸಲಾಯಿತು.

ತನಿಖಾ ತಂಡದಲ್ಲಿ ಎಎಸ್‌ಐ ಡಿ.ಕೆ. ಹಾಲವರ, ಉಮೇಶ ಲಮಾಣಿ, ಎನ್.ಎಸ್. ಮಂಗಳೂರು, ಎಸ್.ಹೆಚ್. ಶಂಕ್ರಿ, ಎಂ.ಐ. ಬಂಡಿವಡ್ಡರ, ಎಂ.ಕೆ. ಕುರಿ, ಎಸ್.ಎಂ. ಹುಬ್ಬಳ್ಳಿ, ರಾಮು ಮಾಳೋತ್ತರ, ರುದ್ರಯ್ಯ ಹಿರೇಮಠ ಹಾಗೂ ಜಿಲ್ಲಾ ಪೊಲೀಸ್ ಅಧೀಕ್ಷಕರ ಕಚೇರಿಯ ತಾಂತ್ರಿಕ ವಿಭಾಗದ ಎಆರ್‌ಎಸ್‌ಐ ಗುರುರಾಜ ಬೂದಿಹಾಳ ಮತ್ತು ಸಂಜು ಕೊರಡೂರ ಕಾರ್ಯನಿರ್ವಹಿಸಿದ್ದರು.

ಎಲ್ಲ ಅಧಿಕಾರಿ ಹಾಗೂ ಸಿಬ್ಬಂದಿ ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಿ, ಹಲವು ಸವಾಲುಗಳ ನಡುವೆಯೂ ಮಹಿಳೆಯ ಗುರುತು ಪತ್ತೆಹಚ್ಚಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಪ್ರಕರಣದ ಜಾಡು ಹಿಡಿದು, ಅಪರಿಚಿತ ಮಹಿಳೆಯ ಗುರುತು ಪತ್ತೆಹಚ್ಚಿ ಕೊಲೆ ಆರೋಪಿಯನ್ನು ಬಂಧಿಸುವಲ್ಲಿ ಶ್ರಮಿಸಿದ ರೋಣ ಪೊಲೀಸ್ ಠಾಣೆಯ ಅಧಿಕಾರಿ ಹಾಗೂ ಸಿಬ್ಬಂದಿಯ ಕಾರ್ಯವನ್ನು ಗದಗ ಜಿಲ್ಲಾ ಪೊಲೀಸ್ ಅಧೀಕ್ಷಕ ಮಿಥುನ್ ಹೆಚ್.ಎನ್. ಅವರು ಶ್ಲಾಘಿಸಿ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

Previous Post

ಬೀರೂರು ಮೈಲಾರಲಿಂಗೇಶ್ವರ ಸ್ವಾಮಿ ಕಾರ್ಣಿಕೋತ್ಸವ ಸಂಪನ್ನ: ದಶರಥ ಪೂಜಾರ್ ನುಡಿದ ದೈವವಾಣಿ ಏನು?

Next Post

Gadaga Breaking: 2.80 ಲಕ್ಷದ ಹಣಕ್ಕಾಗಿ ಸ್ನೇಹಿತನ ಹತ್ಯೆ? 11 ದಿನಗಳ ಬಳಿಕ ಬಯಲಾಯ್ತು ಕೊಲೆ ರಹಸ್ಯ!

Vijaya Sakshi

Vijaya Sakshi

Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

Next Post
Gadaga Breaking: 2.80 ಲಕ್ಷದ ಹಣಕ್ಕಾಗಿ ಸ್ನೇಹಿತನ ಹತ್ಯೆ? 11 ದಿನಗಳ ಬಳಿಕ ಬಯಲಾಯ್ತು ಕೊಲೆ ರಹಸ್ಯ!

Gadaga Breaking: 2.80 ಲಕ್ಷದ ಹಣಕ್ಕಾಗಿ ಸ್ನೇಹಿತನ ಹತ್ಯೆ? 11 ದಿನಗಳ ಬಳಿಕ ಬಯಲಾಯ್ತು ಕೊಲೆ ರಹಸ್ಯ!

Leave a Reply Cancel reply

Your email address will not be published. Required fields are marked *

Stay Connected test

  • 24k Followers
  • 99 Subscribers
  • Trending
  • Comments
  • Latest
Gadaga Breaking: 2.80 ಲಕ್ಷದ ಹಣಕ್ಕಾಗಿ ಸ್ನೇಹಿತನ ಹತ್ಯೆ? 11 ದಿನಗಳ ಬಳಿಕ ಬಯಲಾಯ್ತು ಕೊಲೆ ರಹಸ್ಯ!

Gadaga Breaking: 2.80 ಲಕ್ಷದ ಹಣಕ್ಕಾಗಿ ಸ್ನೇಹಿತನ ಹತ್ಯೆ? 11 ದಿನಗಳ ಬಳಿಕ ಬಯಲಾಯ್ತು ಕೊಲೆ ರಹಸ್ಯ!

October 21, 2026
ನಕಲಿ ಔಷಧ ಜಾಲದ ತನಿಖೆ ಮತ್ತಷ್ಟು ಚುರುಕು: ಔಷಧ ಸೇವಿಸಿದ ರೋಗಿಗಳ ಮಾಹಿತಿ ಸಂಗ್ರಹಕ್ಕೆ ಮುಂದಾದ FDA ಅಧಿಕಾರಿಗಳು

ನಕಲಿ ಔಷಧ ಜಾಲದ ತನಿಖೆ ಮತ್ತಷ್ಟು ಚುರುಕು: ಔಷಧ ಸೇವಿಸಿದ ರೋಗಿಗಳ ಮಾಹಿತಿ ಸಂಗ್ರಹಕ್ಕೆ ಮುಂದಾದ FDA ಅಧಿಕಾರಿಗಳು

September 21, 2026

ನೈಜೀರಿಯಾದಲ್ಲಿ ಭೀಕರ ವಾಯು ದುರಂತ: ಜೌಗು ಪ್ರದೇಶಕ್ಕೆ ಅಪ್ಪಳಿಸಿದ ಸೇನಾ ವಿಮಾನ, 32 ಮಂದಿ ಸಾವು

October 6, 2026
ಕೃಷಿ ಹೊಂಡದಲ್ಲಿ ಮಹಿಳೆಯ ಶವ ಪತ್ತೆ ಪ್ರಕರಣಕ್ಕೆ ಟ್ವಿಸ್ಟ್‌: ಎರಡೂವರೆ ತಿಂಗಳ ಬಳಿಕ ಆರೋಪಿ ಅರೆಸ್ಟ್‌

ಕೃಷಿ ಹೊಂಡದಲ್ಲಿ ಮಹಿಳೆಯ ಶವ ಪತ್ತೆ ಪ್ರಕರಣಕ್ಕೆ ಟ್ವಿಸ್ಟ್‌: ಎರಡೂವರೆ ತಿಂಗಳ ಬಳಿಕ ಆರೋಪಿ ಅರೆಸ್ಟ್‌

October 21, 2026
Single Post Template – Fast News

ದೇವಸ್ಥಾನದಲ್ಲಿ 3 ಕೊಲೆ: ಹುಂಡಿಗಳ್ಳರ ಅಮಾನುಷ ಕೃತ್ಯ

0
Single Post Template – Fast News

ಕೋಡಿಹಳ್ಳಿಯವರಿಗೆ ಇಷ್ಟೊಂದು ಅಜ್ಞಾನ ಇದೆ ಅಂತ ಗೊತ್ತಿರಲಿಲ್ಲ: ಬಿ.ಸಿ.ಪಾಟೀಲ

0
Single Post Template – Fast News

ಕತ್ತಲಲ್ಲಿ ಕ್ವಾರಂಟೈನ್ ಸೆಂಟರ್; ಪರದಾಡಿದ ಕೊವಿಡ್ ರೋಗಿಗಳು!

0
Single Post Template – Fast News

ನಗರಸಭೆ ಆಯುಕ್ತರ ಕುರ್ಚಿ ಮಾರಾಟವಾಯ್ತೆ?
ಉಸ್ತುವಾರಿ ಸಚಿವರು ತಮ್ಮ ಹಠ ಸಾಧಿಸಿಯೇ ಬಿಟ್ಟರೆ?

0
Gadaga Breaking: 2.80 ಲಕ್ಷದ ಹಣಕ್ಕಾಗಿ ಸ್ನೇಹಿತನ ಹತ್ಯೆ? 11 ದಿನಗಳ ಬಳಿಕ ಬಯಲಾಯ್ತು ಕೊಲೆ ರಹಸ್ಯ!

Gadaga Breaking: 2.80 ಲಕ್ಷದ ಹಣಕ್ಕಾಗಿ ಸ್ನೇಹಿತನ ಹತ್ಯೆ? 11 ದಿನಗಳ ಬಳಿಕ ಬಯಲಾಯ್ತು ಕೊಲೆ ರಹಸ್ಯ!

October 21, 2026
ಕೃಷಿ ಹೊಂಡದಲ್ಲಿ ಮಹಿಳೆಯ ಶವ ಪತ್ತೆ ಪ್ರಕರಣಕ್ಕೆ ಟ್ವಿಸ್ಟ್‌: ಎರಡೂವರೆ ತಿಂಗಳ ಬಳಿಕ ಆರೋಪಿ ಅರೆಸ್ಟ್‌

ಕೃಷಿ ಹೊಂಡದಲ್ಲಿ ಮಹಿಳೆಯ ಶವ ಪತ್ತೆ ಪ್ರಕರಣಕ್ಕೆ ಟ್ವಿಸ್ಟ್‌: ಎರಡೂವರೆ ತಿಂಗಳ ಬಳಿಕ ಆರೋಪಿ ಅರೆಸ್ಟ್‌

October 21, 2026

ಬೀರೂರು ಮೈಲಾರಲಿಂಗೇಶ್ವರ ಸ್ವಾಮಿ ಕಾರ್ಣಿಕೋತ್ಸವ ಸಂಪನ್ನ: ದಶರಥ ಪೂಜಾರ್ ನುಡಿದ ದೈವವಾಣಿ ಏನು?

October 21, 2026

ಬೆಳಗ್ಗೆ ಯಾವ ಸಮಯಕ್ಕೆ ಮನೆ ಗುಡಿಸಿದರೆ ಶುಭ? ತಿಳಿಯಿರಿ ಈ ನಂಬಿಕೆಯ ಹಿಂದಿನ ಕಾರಣ!

October 21, 2026

Recent News

Vijaya Sakshi News

We bring you the best Premium WordPress Themes that perfect for news, magazine, personal blog, etc. Check our landing page for details.

Follow Us

Browse by Category

Recent News

Gadaga Breaking: 2.80 ಲಕ್ಷದ ಹಣಕ್ಕಾಗಿ ಸ್ನೇಹಿತನ ಹತ್ಯೆ? 11 ದಿನಗಳ ಬಳಿಕ ಬಯಲಾಯ್ತು ಕೊಲೆ ರಹಸ್ಯ!

Gadaga Breaking: 2.80 ಲಕ್ಷದ ಹಣಕ್ಕಾಗಿ ಸ್ನೇಹಿತನ ಹತ್ಯೆ? 11 ದಿನಗಳ ಬಳಿಕ ಬಯಲಾಯ್ತು ಕೊಲೆ ರಹಸ್ಯ!

October 21, 2026
ಕೃಷಿ ಹೊಂಡದಲ್ಲಿ ಮಹಿಳೆಯ ಶವ ಪತ್ತೆ ಪ್ರಕರಣಕ್ಕೆ ಟ್ವಿಸ್ಟ್‌: ಎರಡೂವರೆ ತಿಂಗಳ ಬಳಿಕ ಆರೋಪಿ ಅರೆಸ್ಟ್‌

ಕೃಷಿ ಹೊಂಡದಲ್ಲಿ ಮಹಿಳೆಯ ಶವ ಪತ್ತೆ ಪ್ರಕರಣಕ್ಕೆ ಟ್ವಿಸ್ಟ್‌: ಎರಡೂವರೆ ತಿಂಗಳ ಬಳಿಕ ಆರೋಪಿ ಅರೆಸ್ಟ್‌

October 21, 2026
  • About
  • Advertise
  • Privacy & Policy
  • Contact

Vijaya Sakshi 2026 CREATED BY Kalahamsa Infotech. PREMIUM WEBSITE SOLUTIONS.

  • E Paper
  • WhatsApp Group
  • E Paper
  • E Paper
error: Content is protected !!
Join WhatsApp Read E-Paper