• About
  • Advertise
  • Privacy & Policy
  • Contact
Thursday, October 22, 2026
Vijaya Sakshi News
Advertisement
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
No Result
View All Result
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
No Result
View All Result
Vijaya Sakshi News
  • Home
  • Gadag News
  • Karnataka News
  • Crime News
  • Politics News
  • Bengaluru News
  • Entertainment
  • Life Style
  • Sports News
Home Crime News

ದಸರಾ ಸಂಭ್ರಮದ ನಡುವೆ ರಕ್ತಪಾತ: ಅಂಬಾರಿ ನೋಡಲು ಬಂದಿದ್ದ ಯಲ್ಲಪ್ಪನ ಭೀಕರ ಕೊಲೆ!

Vijaya Sakshi by Vijaya Sakshi
October 22, 2026
in Crime News
0
ದಸರಾ ಸಂಭ್ರಮದ ನಡುವೆ ರಕ್ತಪಾತ: ಅಂಬಾರಿ ನೋಡಲು ಬಂದಿದ್ದ ಯಲ್ಲಪ್ಪನ ಭೀಕರ ಕೊಲೆ!
0
SHARES
1
VIEWS
Share on FacebookShare on Twitter

ಆನೇಕಲ್: ನಾಡಿನೆಲ್ಲೆಡೆ ದಸರಾ ಸಂಭ್ರಮ ಮನೆಮಾಡಿತ್ತು. ಮೈಸೂರು ಜಂಬೂಸವಾರಿ ನೋಡಲು ಜನರು ಕಾತರದಿಂದ ಕಾಯುತ್ತಿದ್ದರೆ, ಬೆಂಗಳೂರು ಹೊರವಲಯದ ಆನೇಕಲ್‌ನಲ್ಲಿ ಮಾತ್ರ ಭೀಕರ ಕೊಲೆಯೊಂದು ನಡೆದಿದೆ.

ದಸರಾ ಅಂಬಾರಿ ನೋಡಲು ಬಂದಿದ್ದ 56 ವರ್ಷದ ಯಲ್ಲಪ್ಪ ಎಂಬುವವರನ್ನು ದೊಣ್ಣೆಯಿಂದ ಹೊಡೆದು ಹತ್ಯೆ ಮಾಡಲಾಗಿದೆ. ಅಷ್ಟೇ ಅಲ್ಲ, ಕೊಲೆಯಾದ ವ್ಯಕ್ತಿಯ ಮೊಬೈಲ್‌ನಿಂದಲೇ ಪೊಲೀಸರ ತುರ್ತು ಸಹಾಯವಾಣಿ 112ಕ್ಕೆ ಕರೆ ಮಾಡಿರುವುದು ಪ್ರಕರಣಕ್ಕೆ ಮತ್ತಷ್ಟು ಕುತೂಹಲ ಮೂಡಿಸಿದೆ.

ಮದ್ಯಪಾನದ ವೇಳೆ ಗಲಾಟೆ ನಡೆದಿತ್ತಾ?

ಆನೇಕಲ್ ಪಟ್ಟಣದ ಚಿಕ್ಕಕೆರೆ ಸ್ಟೇಡಿಯಂ ಬಳಿ ಈ ಘಟನೆ ನಡೆದಿದೆ. ತಮಿಳುನಾಡಿನ ಸಾರಕ್ಕನಪಲ್ಲಿ ಗ್ರಾಮದ ಯಲ್ಲಪ್ಪ ಕಳೆದ 18 ವರ್ಷಗಳಿಂದ ಪತ್ನಿ ಕಾಂತಮ್ಮ ಅವರೊಂದಿಗೆ ತಟ್ನಹಳ್ಳಿಯಲ್ಲಿ ವಾಸವಾಗಿದ್ದರು. ಈ ಹಿಂದೆ ಬ್ಯಾಗಡದೇನಹಳ್ಳಿ ಪಂಚಾಯಿತಿಯಲ್ಲಿ ಕೆಲಸ ಮಾಡಿದ್ದ ಅವರು, ಇತ್ತೀಚೆಗೆ ಕೂಲಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು.

ಅಕ್ಟೋಬರ್ 21ರಂದು ದಸರಾ ಅಂಬಾರಿ ನೋಡಲು ಆನೇಕಲ್‌ಗೆ ಬಂದಿದ್ದ ಯಲ್ಲಪ್ಪ, ಸಂಜೆ ಸುಮಾರು 6.30ರ ವೇಳೆಗೆ ಪತ್ನಿಗೆ ಕರೆ ಮಾಡಿ ತಾನು ಜಂಬೂಸವಾರಿ ನೋಡಲು ಬಂದಿರುವುದಾಗಿ ತಿಳಿಸಿದ್ದರು. ಆದರೆ, ಮನೆಗೆ ವಾಪಸಾಗಬೇಕಿದ್ದ ಯಲ್ಲಪ್ಪ ಕೊನೆಗೆ ಹೆಣವಾಗಿ ಪತ್ತೆಯಾಗಿದ್ದಾರೆ.

ರಾತ್ರಿ ಚಿಕ್ಕಕೆರೆ ಸ್ಟೇಡಿಯಂ ಬಳಿ ಮದ್ಯಪಾನ ಮಾಡುವ ವೇಳೆ ಗಲಾಟೆ ನಡೆದಿರುವ ಶಂಕೆ ವ್ಯಕ್ತವಾಗಿದೆ. ಈ ಸಂದರ್ಭದಲ್ಲಿ ಯಲ್ಲಪ್ಪನ ತಲೆಗೆ ರಿಪೀಸ್‌ನಿಂದ ಬಲವಾಗಿ ಹಲ್ಲೆ ನಡೆಸಲಾಗಿದೆ ಎನ್ನಲಾಗಿದೆ. ತೀವ್ರ ರಕ್ತಸ್ರಾವದಿಂದ ಅವರು ಮೃತಪಟ್ಟಿದ್ದಾರೆ.

ಮೃತನ ಮೊಬೈಲ್‌ನಿಂದಲೇ 112ಕ್ಕೆ ಕರೆ!

ಹಲ್ಲೆಯ ಬಳಿಕ ಯಲ್ಲಪ್ಪನ ಮೊಬೈಲ್‌ನಿಂದಲೇ 112ಕ್ಕೆ ಕರೆ ಮಾಡಲಾಗಿದೆ. ಮಾಹಿತಿ ಪಡೆದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ, ಯಲ್ಲಪ್ಪನನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ, ಅಷ್ಟರಲ್ಲಾಗಲೇ ಅವರು ಮೃತಪಟ್ಟಿದ್ದರು. ಮತ್ತೊಂದೆಡೆ, ಆರೋಪಿಗಳು ಯಲ್ಲಪ್ಪನ ಮೊಬೈಲ್ ತೆಗೆದುಕೊಂಡು ಪರಾರಿಯಾಗಿದ್ದಾರೆ ಎನ್ನಲಾಗಿದೆ. ಮೃತನ ಎಟಿಎಂ ಕಾರ್ಡ್ ಬಳಸಿ ಹಣವನ್ನೂ ಡ್ರಾ ಮಾಡಲಾಗಿದೆ ಎಂದು ತಿಳಿದುಬಂದಿದೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಚಂದ್ರಕಾಂತ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇನ್ಸ್‌ಪೆಕ್ಟರ್ ಪ್ರಕಾಶ್ ಅವರಿಂದ ಮಾಹಿತಿ ಪಡೆದುಕೊಂಡಿದ್ದಾರೆ. ಮೊಬೈಲ್ ಕರೆಗಳ ವಿವರ, ಸ್ಥಳದ ಮಾಹಿತಿ ಹಾಗೂ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದೆ. ಹಾರಗದ್ದೆ ಬಳಿ ಮೊಬೈಲ್ ಸ್ವಿಚ್ ಆಫ್ ಆಗಿರುವ ಮಾಹಿತಿ ಪೊಲೀಸರಿಗೆ ಲಭ್ಯವಾಗಿದೆ.

ಆರೋಪಿಗಳನ್ನು ಶೀಘ್ರದಲ್ಲೇ ಬಂಧಿಸುವುದಾಗಿ ಎಸ್ಪಿ ಚಂದ್ರಕಾಂತ್ ತಿಳಿಸಿದ್ದಾರೆ.

ಒಟ್ಟಿನಲ್ಲಿ, ದಸರಾ ಸಂಭ್ರಮದಲ್ಲಿ ಭಾಗಿಯಾಗಲು ಬಂದಿದ್ದ ಯಲ್ಲಪ್ಪನ ಸಾವು ಹಲವು ಅನುಮಾನಗಳಿಗೆ ಕಾರಣವಾಗಿದೆ. ಮದ್ಯಪಾನದ ವೇಳೆ ನಡೆದ ಗಲಾಟೆಯೇ ಕೊಲೆಗೆ ಕಾರಣವಾಯಿತೇ ಅಥವಾ ಬೇರೆ ಯಾವುದಾದರೂ ಉದ್ದೇಶವಿತ್ತೇ ಎಂಬುದು ತನಿಖೆಯಿಂದ ತಿಳಿದುಬರಬೇಕಿದೆ. ಆನೇಕಲ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಳಿಗಾಗಿ ಶೋಧ ಮುಂದುವರಿಸಿದ್ದಾರೆ.

Tags: Anekal Murder CaseBengaluru Rural NewsKannada Crime NewskannadanewsKarnatakaKarnataka Crime NewsVijayasakshivijayasakshinews
Previous Post

ಬೆಂಗಳೂರಿನಲ್ಲಿ ಬೆಚ್ಚಿಬೀಳಿಸುವ ಘಟನೆ: ಅಣ್ಣ-ತಂಗಿ ಮಲಗಿದ್ದ ಹಾಸಿಗೆಯಲ್ಲೇ ನಾಗರಹಾವು ಪತ್ತೆ!

Next Post

ಇನ್‌ಸ್ಟಾಗ್ರಾಮ್‌ಗೆ ಸೋನಿಯಾ ಗಾಂಧಿ ಎಂಟ್ರಿ: ಮೊದಲ ಪೋಸ್ಟ್‌ನಲ್ಲೇ ಆತ್ಮಚರಿತ್ರೆಯ ಕವರ್ ರಿವೀಲ್!

Vijaya Sakshi

Vijaya Sakshi

Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

Next Post
ಇನ್‌ಸ್ಟಾಗ್ರಾಮ್‌ಗೆ ಸೋನಿಯಾ ಗಾಂಧಿ ಎಂಟ್ರಿ: ಮೊದಲ ಪೋಸ್ಟ್‌ನಲ್ಲೇ ಆತ್ಮಚರಿತ್ರೆಯ ಕವರ್ ರಿವೀಲ್!

ಇನ್‌ಸ್ಟಾಗ್ರಾಮ್‌ಗೆ ಸೋನಿಯಾ ಗಾಂಧಿ ಎಂಟ್ರಿ: ಮೊದಲ ಪೋಸ್ಟ್‌ನಲ್ಲೇ ಆತ್ಮಚರಿತ್ರೆಯ ಕವರ್ ರಿವೀಲ್!

Leave a Reply Cancel reply

Your email address will not be published. Required fields are marked *

Stay Connected test

  • 24k Followers
  • 99 Subscribers
  • Trending
  • Comments
  • Latest
ಕೃಷಿ ಹೊಂಡದಲ್ಲಿ ಮಹಿಳೆಯ ಶವ ಪತ್ತೆ ಪ್ರಕರಣಕ್ಕೆ ಟ್ವಿಸ್ಟ್‌: ಎರಡೂವರೆ ತಿಂಗಳ ಬಳಿಕ ಆರೋಪಿ ಅರೆಸ್ಟ್‌

ಕೃಷಿ ಹೊಂಡದಲ್ಲಿ ಮಹಿಳೆಯ ಶವ ಪತ್ತೆ ಪ್ರಕರಣಕ್ಕೆ ಟ್ವಿಸ್ಟ್‌: ಎರಡೂವರೆ ತಿಂಗಳ ಬಳಿಕ ಆರೋಪಿ ಅರೆಸ್ಟ್‌

October 21, 2026
Gadaga Breaking: 2.80 ಲಕ್ಷದ ಹಣಕ್ಕಾಗಿ ಸ್ನೇಹಿತನ ಹತ್ಯೆ? 11 ದಿನಗಳ ಬಳಿಕ ಬಯಲಾಯ್ತು ಕೊಲೆ ರಹಸ್ಯ!

Gadaga Breaking: 2.80 ಲಕ್ಷದ ಹಣಕ್ಕಾಗಿ ಸ್ನೇಹಿತನ ಹತ್ಯೆ? 11 ದಿನಗಳ ಬಳಿಕ ಬಯಲಾಯ್ತು ಕೊಲೆ ರಹಸ್ಯ!

October 21, 2026

ಸೊಲ್ಲಾಪುರದಿಂದ ಗಾಂಜಾ ಪೂರೈಕೆ, ಗದಗದಲ್ಲಿ ಮಾರಾಟ: ಗಂಗಿಮಡಿಯ ಇಬ್ಬರು ಸೇರಿ ನಾಲ್ವರ ಬಂಧನ

October 18, 2026
ಹೆತ್ತ ಮಕ್ಕಳಿಗಿಂತ ಪ್ರಿಯಕರನೇ ಮುಖ್ಯವಾಯ್ತಾ? ಅಕ್ರಮ ಸಂಬಂಧ ವಿರೋಧಿಸಿದ್ದ ಅವಳಿ ಮಕ್ಕಳ ಭೀಕರ ಹತ್ಯೆ!

ಹೆತ್ತ ಮಕ್ಕಳಿಗಿಂತ ಪ್ರಿಯಕರನೇ ಮುಖ್ಯವಾಯ್ತಾ? ಅಕ್ರಮ ಸಂಬಂಧ ವಿರೋಧಿಸಿದ್ದ ಅವಳಿ ಮಕ್ಕಳ ಭೀಕರ ಹತ್ಯೆ!

October 21, 2026
Single Post Template – Fast News

ದೇವಸ್ಥಾನದಲ್ಲಿ 3 ಕೊಲೆ: ಹುಂಡಿಗಳ್ಳರ ಅಮಾನುಷ ಕೃತ್ಯ

0
Single Post Template – Fast News

ಕೋಡಿಹಳ್ಳಿಯವರಿಗೆ ಇಷ್ಟೊಂದು ಅಜ್ಞಾನ ಇದೆ ಅಂತ ಗೊತ್ತಿರಲಿಲ್ಲ: ಬಿ.ಸಿ.ಪಾಟೀಲ

0
Single Post Template – Fast News

ಕತ್ತಲಲ್ಲಿ ಕ್ವಾರಂಟೈನ್ ಸೆಂಟರ್; ಪರದಾಡಿದ ಕೊವಿಡ್ ರೋಗಿಗಳು!

0
Single Post Template – Fast News

ನಗರಸಭೆ ಆಯುಕ್ತರ ಕುರ್ಚಿ ಮಾರಾಟವಾಯ್ತೆ?
ಉಸ್ತುವಾರಿ ಸಚಿವರು ತಮ್ಮ ಹಠ ಸಾಧಿಸಿಯೇ ಬಿಟ್ಟರೆ?

0
ಪ್ಯಾರಾ ಏಷ್ಯನ್ ಗೇಮ್ಸ್‌ನಲ್ಲಿ ಬೆಳಗಾವಿ ಯುವಕನಿಗೆ ಕಂಚಿನ ಪದಕ!

ಪ್ಯಾರಾ ಏಷ್ಯನ್ ಗೇಮ್ಸ್‌ನಲ್ಲಿ ಬೆಳಗಾವಿ ಯುವಕನಿಗೆ ಕಂಚಿನ ಪದಕ!

October 22, 2026
ಇನ್‌ಸ್ಟಾಗ್ರಾಮ್‌ಗೆ ಸೋನಿಯಾ ಗಾಂಧಿ ಎಂಟ್ರಿ: ಮೊದಲ ಪೋಸ್ಟ್‌ನಲ್ಲೇ ಆತ್ಮಚರಿತ್ರೆಯ ಕವರ್ ರಿವೀಲ್!

ಇನ್‌ಸ್ಟಾಗ್ರಾಮ್‌ಗೆ ಸೋನಿಯಾ ಗಾಂಧಿ ಎಂಟ್ರಿ: ಮೊದಲ ಪೋಸ್ಟ್‌ನಲ್ಲೇ ಆತ್ಮಚರಿತ್ರೆಯ ಕವರ್ ರಿವೀಲ್!

October 22, 2026
ದಸರಾ ಸಂಭ್ರಮದ ನಡುವೆ ರಕ್ತಪಾತ: ಅಂಬಾರಿ ನೋಡಲು ಬಂದಿದ್ದ ಯಲ್ಲಪ್ಪನ ಭೀಕರ ಕೊಲೆ!

ದಸರಾ ಸಂಭ್ರಮದ ನಡುವೆ ರಕ್ತಪಾತ: ಅಂಬಾರಿ ನೋಡಲು ಬಂದಿದ್ದ ಯಲ್ಲಪ್ಪನ ಭೀಕರ ಕೊಲೆ!

October 22, 2026
ಬೆಂಗಳೂರಿನಲ್ಲಿ ಬೆಚ್ಚಿಬೀಳಿಸುವ ಘಟನೆ: ಅಣ್ಣ-ತಂಗಿ ಮಲಗಿದ್ದ ಹಾಸಿಗೆಯಲ್ಲೇ ನಾಗರಹಾವು ಪತ್ತೆ!

ಬೆಂಗಳೂರಿನಲ್ಲಿ ಬೆಚ್ಚಿಬೀಳಿಸುವ ಘಟನೆ: ಅಣ್ಣ-ತಂಗಿ ಮಲಗಿದ್ದ ಹಾಸಿಗೆಯಲ್ಲೇ ನಾಗರಹಾವು ಪತ್ತೆ!

October 22, 2026

Recent News

We bring you the best Premium WordPress Themes that perfect for news, magazine, personal blog, etc. Check our landing page for details.

Browse by Category

Recent News

ಪ್ಯಾರಾ ಏಷ್ಯನ್ ಗೇಮ್ಸ್‌ನಲ್ಲಿ ಬೆಳಗಾವಿ ಯುವಕನಿಗೆ ಕಂಚಿನ ಪದಕ!

ಪ್ಯಾರಾ ಏಷ್ಯನ್ ಗೇಮ್ಸ್‌ನಲ್ಲಿ ಬೆಳಗಾವಿ ಯುವಕನಿಗೆ ಕಂಚಿನ ಪದಕ!

October 22, 2026
ಇನ್‌ಸ್ಟಾಗ್ರಾಮ್‌ಗೆ ಸೋನಿಯಾ ಗಾಂಧಿ ಎಂಟ್ರಿ: ಮೊದಲ ಪೋಸ್ಟ್‌ನಲ್ಲೇ ಆತ್ಮಚರಿತ್ರೆಯ ಕವರ್ ರಿವೀಲ್!

ಇನ್‌ಸ್ಟಾಗ್ರಾಮ್‌ಗೆ ಸೋನಿಯಾ ಗಾಂಧಿ ಎಂಟ್ರಿ: ಮೊದಲ ಪೋಸ್ಟ್‌ನಲ್ಲೇ ಆತ್ಮಚರಿತ್ರೆಯ ಕವರ್ ರಿವೀಲ್!

October 22, 2026
  • About
  • Advertise
  • Privacy & Policy
  • Contact

Vijaya Sakshi 2026 CREATED BY Kalahamsa Infotech. PREMIUM WEBSITE SOLUTIONS.

  • E Paper
  • WhatsApp Group
  • E Paper
  • E Paper
error: Content is protected !!
Join WhatsApp Read E-Paper
f 𝕏 WhatsApp Copy Link