• About
  • Advertise
  • Privacy & Policy
  • Contact
Saturday, October 24, 2026
Vijaya Sakshi News
Advertisement
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
No Result
View All Result
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
No Result
View All Result
Vijaya Sakshi News
  • Home
  • Gadag News
  • Karnataka News
  • Crime News
  • Politics News
  • Bengaluru News
  • Entertainment
  • Life Style
  • Sports News
Home Karnataka News

ಅಕ್ಟೋಬರ್ 25ರಂದು ರಾಜ್ಯದ ಹಲವು ಜಿಲ್ಲೆಗಳಲ್ಲಿ RSS ಕಾರ್ಯಕ್ರಮ! ಎಲ್ಲೆಲ್ಲಿ ಅನುಮತಿ ಸಿಕ್ಕಿದೆ?

Vijaya Sakshi by Vijaya Sakshi
October 24, 2026
in Karnataka News
0
ಅಕ್ಟೋಬರ್ 25ರಂದು ರಾಜ್ಯದ ಹಲವು ಜಿಲ್ಲೆಗಳಲ್ಲಿ RSS ಕಾರ್ಯಕ್ರಮ! ಎಲ್ಲೆಲ್ಲಿ ಅನುಮತಿ ಸಿಕ್ಕಿದೆ?
0
SHARES
1
VIEWS
Share on FacebookShare on Twitter

ಬೆಂಗಳೂರು: ವಿಜಯದಶಮಿ ಹಿನ್ನೆಲೆಯಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ವತಿಯಿಂದ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಪಥಸಂಚಲನ ಹಾಗೂ ಸಾರ್ವಜನಿಕ ಕಾರ್ಯಕ್ರಮಗಳನ್ನು ಆಯೋಜಿಸಲು ಸಿದ್ಧತೆಗಳು ನಡೆಯುತ್ತಿವೆ. ಕಲಬುರಗಿ, ರಾಮನಗರ ಹಾಗೂ ಹುಬ್ಬಳ್ಳಿಯಲ್ಲಿ ಪಥಸಂಚಲನಕ್ಕೆ ಪೊಲೀಸ್ ಇಲಾಖೆಯಿಂದ ಅನುಮತಿ ದೊರೆತಿರುವುದಾಗಿ ತಿಳಿದುಬಂದಿದೆ. ಆದರೆ ತುಮಕೂರು ಜಿಲ್ಲೆಯ ಕೆಲವು ಭಾಗಗಳಲ್ಲಿ ಅನುಮತಿಗಾಗಿ ಕಾಯಲಾಗುತ್ತಿದೆ.

ಕಲಬುರಗಿಯಲ್ಲಿ ಅಕ್ಟೋಬರ್ 25ರಂದು ಮಧ್ಯಾಹ್ನ 3:30ಕ್ಕೆ ಆರ್‌ಎಸ್‌ಎಸ್ ಪಥಸಂಚಲನ ಆಯೋಜಿಸಲಾಗಿದೆ. ಕಾರ್ಯಕ್ರಮಕ್ಕೆ ನಗರ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿ ಶಾಲೂ ಅವರು ಷರತ್ತುಬದ್ಧ ಅನುಮತಿ ನೀಡಿದ್ದಾರೆ ಎಂದು ವರದಿಯಾಗಿದೆ. ಗೃಹ ಇಲಾಖೆಯ ನಿಗದಿತ ಅರ್ಜಿ ನಮೂನೆಗಳಾದ ಫಾರ್ಮ್ 1 ಮತ್ತು 2 ಅನ್ನು ಭರ್ತಿ ಮಾಡಿ ಸಲ್ಲಿಸಿದ ಹಿನ್ನೆಲೆಯಲ್ಲಿ ಅನುಮತಿ ನೀಡಲಾಗಿದೆ ಎನ್ನಲಾಗಿದೆ.

ಪಥಸಂಚಲನವು ಪೊಲೀಸರು ನಿಗದಿಪಡಿಸಿದ ಮಾರ್ಗದಲ್ಲಿಯೇ ಸಾಗಬೇಕು. ಕಾರ್ಯಕ್ರಮದ ವೇಳೆ ಪ್ರಚೋದನಕಾರಿ ಭಾಷಣ ಮಾಡಬಾರದು ಹಾಗೂ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗದಂತೆ ನೋಡಿಕೊಳ್ಳಬೇಕು ಎಂಬ ಷರತ್ತುಗಳನ್ನು ವಿಧಿಸಲಾಗಿದೆ. ಕಲಬುರಗಿಯ ನಗರೆಶ್ವರ ಶಾಲೆಯಿಂದ ಆರಂಭವಾಗಲಿರುವ ಪಥಸಂಚಲನವು ಶರಣಬಸವೇಶ್ವರ ಜಾತ್ರಾ ಮೈದಾನದಲ್ಲಿ ಸಮಾರೋಪಗೊಳ್ಳಲಿದೆ.

ಇದೇ ರೀತಿ ರಾಮನಗರದಲ್ಲಿಯೂ ಅಕ್ಟೋಬರ್ 25ರಂದು ಬೆಳಿಗ್ಗೆ 9:30ಕ್ಕೆ ಪಥಸಂಚಲನ ನಡೆಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಆರ್‌ಎಸ್‌ಎಸ್ ಕಚೇರಿಯಿಂದ ಅಗ್ರಹಾರದವರೆಗೆ ಸುಮಾರು ಎರಡು ಕಿಲೋಮೀಟರ್ ದೂರ ಪಥಸಂಚಲನ ನಡೆಯಲಿದ್ದು, ಪೊಲೀಸ್ ಇಲಾಖೆ ಅನುಮತಿ ನೀಡಿದೆ ಎಂದು ತಿಳಿದುಬಂದಿದೆ.

ಹುಬ್ಬಳ್ಳಿಯ ನೆಹರು ಮೈದಾನದಲ್ಲಿ ಅಕ್ಟೋಬರ್ 25ರಂದು ಪಥಸಂಚಲನ ಹಾಗೂ ಸಾರ್ವಜನಿಕ ಸಭೆಯನ್ನು ಆಯೋಜಿಸಲಾಗಿದೆ. ಈ ಕಾರ್ಯಕ್ರಮಕ್ಕೂ ಅನುಮತಿ ದೊರೆತಿರುವುದಾಗಿ ವರದಿಯಾಗಿದೆ. ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಸೇರಿದಂತೆ ಹಲವು ಬಿಜೆಪಿ ಶಾಸಕರು ಕಾರ್ಯಕ್ರಮದಲ್ಲಿ ಭಾಗವಹಿಸುವ ನಿರೀಕ್ಷೆಯಿದೆ.

ಇನ್ನು ಕೋಲಾರ ಹಾಗೂ ಮೈಸೂರಿನಲ್ಲಿಯೂ ಆರ್‌ಎಸ್‌ಎಸ್ ಪಥಸಂಚಲನ ಮತ್ತು ಬೌದ್ಧಿಕ್ ಕಾರ್ಯಕ್ರಮಗಳಿಗೆ ಸಿದ್ಧತೆಗಳು ನಡೆಯುತ್ತಿವೆ. ಕಾರ್ಯಕ್ರಮಗಳ ಆಯೋಜನೆ, ಪಥಸಂಚಲನದ ಮಾರ್ಗ ಹಾಗೂ ಸ್ವಯಂಸೇವಕರ ಭಾಗವಹಿಸುವಿಕೆ ಕುರಿತು ಸ್ಥಳೀಯ ಮಟ್ಟದಲ್ಲಿ ವ್ಯವಸ್ಥೆಗಳನ್ನು ಮಾಡಿಕೊಳ್ಳಲಾಗುತ್ತಿದೆ.

ಆದರೆ ತುಮಕೂರು ಜಿಲ್ಲೆಯಲ್ಲಿ ಪಥಸಂಚಲನಕ್ಕೆ ಪೊಲೀಸ್ ಇಲಾಖೆಯಿಂದ ಇನ್ನೂ ಅನುಮತಿ ದೊರೆತಿಲ್ಲ ಎಂದು ತಿಳಿದುಬಂದಿದೆ. ತುಮಕೂರು ನಗರ, ಗ್ರಾಮಾಂತರ, ಕುಣಿಗಲ್ ಹಾಗೂ ಗುಬ್ಬಿ ಭಾಗಗಳಲ್ಲಿ ಪಥಸಂಚಲನ ಆಯೋಜಿಸಲು ಸಿದ್ಧತೆ ನಡೆಸಲಾಗಿದೆ. ಪದವೀಧರರ ಕ್ಷೇತ್ರದ ಚುನಾವಣಾ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಅನುಮತಿ ನೀಡುವ ಪ್ರಕ್ರಿಯೆಯಲ್ಲಿ ವಿಳಂಬವಾಗಿರಬಹುದು ಎನ್ನಲಾಗುತ್ತಿದೆ. ಈ ಕುರಿತು ಅಧಿಕಾರಿಗಳ ಅಂತಿಮ ನಿರ್ಧಾರ ಇನ್ನಷ್ಟೇ ಹೊರಬರಬೇಕಿದೆ.

Tags: BreakingNewsHubballi RSSKalaburagi RSSKarnatakaKarnataka RSS MarchNewsHeadlinesRamanagara RSSRSS Path SanchalanRSS Vijayadashami 2026Vijayasakshivijayasakshinews
Previous Post

ಚಾಣಾಕ್ಷ ಆಟದಿಂದ ಬಿಗ್ ಬಾಸ್ ಮನೆಯಲ್ಲಿ ಸೌಂದರ್ಯ ಶೆಟ್ಟಿ ಹವಾ! ಆಸಿಯಾಗೆ ಪೈಪೋಟಿ ನೀಡಿ ಕ್ಯಾಪ್ಟನ್ ಪಟ್ಟ ಗೆದ್ದ ಸ್ಪರ್ಧಿ

Next Post

ಜಟ್ಟಿ ಕಾಳಗದ ಬಗ್ಗೆ ದೇವಾಲಯದಲ್ಲಿ ಮಾತನಾಡಲ್ಲ ಎಂದ ರಾಜಮಾತೆ: ಶೀಘ್ರದಲ್ಲೇ ಸ್ಪಷ್ಟನೆ ನೀಡುವ ಭರವಸೆ!

Vijaya Sakshi

Vijaya Sakshi

Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

Next Post
ಜಟ್ಟಿ ಕಾಳಗದ ಬಗ್ಗೆ ದೇವಾಲಯದಲ್ಲಿ ಮಾತನಾಡಲ್ಲ ಎಂದ ರಾಜಮಾತೆ: ಶೀಘ್ರದಲ್ಲೇ ಸ್ಪಷ್ಟನೆ ನೀಡುವ ಭರವಸೆ!

ಜಟ್ಟಿ ಕಾಳಗದ ಬಗ್ಗೆ ದೇವಾಲಯದಲ್ಲಿ ಮಾತನಾಡಲ್ಲ ಎಂದ ರಾಜಮಾತೆ: ಶೀಘ್ರದಲ್ಲೇ ಸ್ಪಷ್ಟನೆ ನೀಡುವ ಭರವಸೆ!

Leave a Reply Cancel reply

Your email address will not be published. Required fields are marked *

Stay Connected test

  • 24k Followers
  • 99 Subscribers
  • Trending
  • Comments
  • Latest
ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

October 23, 2026
ಗದಗದಲ್ಲಿ ಜೆಸಿಬಿ ಘರ್ಜನೆ: ಹೆದ್ದಾರಿ ಪಕ್ಕದಲ್ಲಿ ನಿರ್ಮಿಸಿದ್ದ ಬಡವರ ಅಂಗಡಿಗಳು ನೆಲಸಮ, ಅಪಘಾತಗಳ ಆತಂಕಕ್ಕೆ ಬ್ರೇಕ್‌!

ಗದಗದಲ್ಲಿ ಜೆಸಿಬಿ ಘರ್ಜನೆ: ಹೆದ್ದಾರಿ ಪಕ್ಕದಲ್ಲಿ ನಿರ್ಮಿಸಿದ್ದ ಬಡವರ ಅಂಗಡಿಗಳು ನೆಲಸಮ, ಅಪಘಾತಗಳ ಆತಂಕಕ್ಕೆ ಬ್ರೇಕ್‌!

October 23, 2026
ಕೃಷಿ ಹೊಂಡದಲ್ಲಿ ಮಹಿಳೆಯ ಶವ ಪತ್ತೆ ಪ್ರಕರಣಕ್ಕೆ ಟ್ವಿಸ್ಟ್‌: ಎರಡೂವರೆ ತಿಂಗಳ ಬಳಿಕ ಆರೋಪಿ ಅರೆಸ್ಟ್‌

ಕೃಷಿ ಹೊಂಡದಲ್ಲಿ ಮಹಿಳೆಯ ಶವ ಪತ್ತೆ ಪ್ರಕರಣಕ್ಕೆ ಟ್ವಿಸ್ಟ್‌: ಎರಡೂವರೆ ತಿಂಗಳ ಬಳಿಕ ಆರೋಪಿ ಅರೆಸ್ಟ್‌

October 21, 2026
ಮತಗಟ್ಟೆ ಬಳಿ ಕಾಂಗ್ರೆಸ್ ಕಾರ್ಯಕರ್ತರು–ಪೊಲೀಸರ ನಡುವೆ ವಾಗ್ವಾದ

ಮತಗಟ್ಟೆ ಬಳಿ ಕಾಂಗ್ರೆಸ್ ಕಾರ್ಯಕರ್ತರು–ಪೊಲೀಸರ ನಡುವೆ ವಾಗ್ವಾದ

October 23, 2026
Single Post Template – Fast News

ದೇವಸ್ಥಾನದಲ್ಲಿ 3 ಕೊಲೆ: ಹುಂಡಿಗಳ್ಳರ ಅಮಾನುಷ ಕೃತ್ಯ

0
Single Post Template – Fast News

ಕೋಡಿಹಳ್ಳಿಯವರಿಗೆ ಇಷ್ಟೊಂದು ಅಜ್ಞಾನ ಇದೆ ಅಂತ ಗೊತ್ತಿರಲಿಲ್ಲ: ಬಿ.ಸಿ.ಪಾಟೀಲ

0
Single Post Template – Fast News

ಕತ್ತಲಲ್ಲಿ ಕ್ವಾರಂಟೈನ್ ಸೆಂಟರ್; ಪರದಾಡಿದ ಕೊವಿಡ್ ರೋಗಿಗಳು!

0
Single Post Template – Fast News

ನಗರಸಭೆ ಆಯುಕ್ತರ ಕುರ್ಚಿ ಮಾರಾಟವಾಯ್ತೆ?
ಉಸ್ತುವಾರಿ ಸಚಿವರು ತಮ್ಮ ಹಠ ಸಾಧಿಸಿಯೇ ಬಿಟ್ಟರೆ?

0
ಬೆಂಗಳೂರಿನ ಚಾಟ್ಸ್ ಅಂಗಡಿಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟ: 9 ವರ್ಷದ ಬಾಲಕ ಸೇರಿ ಮೂವರಿಗೆ ಗಂಭೀರ ಗಾಯ!

ಬೆಂಗಳೂರಿನ ಚಾಟ್ಸ್ ಅಂಗಡಿಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟ: 9 ವರ್ಷದ ಬಾಲಕ ಸೇರಿ ಮೂವರಿಗೆ ಗಂಭೀರ ಗಾಯ!

October 24, 2026
ಅಧಿಕಾರ ಸ್ವೀಕರಿಸಿದ ಮೊದಲ ದಿನವೇ ಆಹಾರ ವಿವಾದ: ಕೇರಳದ ಹೊಸ ರಾಜ್ಯಪಾಲರ ನಿರ್ಧಾರಕ್ಕೆ ಭಾರಿ ಟೀಕೆ

ಅಧಿಕಾರ ಸ್ವೀಕರಿಸಿದ ಮೊದಲ ದಿನವೇ ಆಹಾರ ವಿವಾದ: ಕೇರಳದ ಹೊಸ ರಾಜ್ಯಪಾಲರ ನಿರ್ಧಾರಕ್ಕೆ ಭಾರಿ ಟೀಕೆ

October 24, 2026
ರಾಯರ ಮಠಕ್ಕೆ ಹರಿದುಬಂತು ಭಕ್ತರ ಕಾಣಿಕೆಯ ಮಹಾಪೂರ! 22 ದಿನಗಳ ಹುಂಡಿ ಸಂಗ್ರಹ ಎಷ್ಟು ಗೊತ್ತಾ?

ರಾಯರ ಮಠಕ್ಕೆ ಹರಿದುಬಂತು ಭಕ್ತರ ಕಾಣಿಕೆಯ ಮಹಾಪೂರ! 22 ದಿನಗಳ ಹುಂಡಿ ಸಂಗ್ರಹ ಎಷ್ಟು ಗೊತ್ತಾ?

October 24, 2026
ಜಟ್ಟಿ ಕಾಳಗದ ಬಗ್ಗೆ ದೇವಾಲಯದಲ್ಲಿ ಮಾತನಾಡಲ್ಲ ಎಂದ ರಾಜಮಾತೆ: ಶೀಘ್ರದಲ್ಲೇ ಸ್ಪಷ್ಟನೆ ನೀಡುವ ಭರವಸೆ!

ಜಟ್ಟಿ ಕಾಳಗದ ಬಗ್ಗೆ ದೇವಾಲಯದಲ್ಲಿ ಮಾತನಾಡಲ್ಲ ಎಂದ ರಾಜಮಾತೆ: ಶೀಘ್ರದಲ್ಲೇ ಸ್ಪಷ್ಟನೆ ನೀಡುವ ಭರವಸೆ!

October 24, 2026

Recent News

We bring you the best Premium WordPress Themes that perfect for news, magazine, personal blog, etc. Check our landing page for details.

Browse by Category

Recent News

ಬೆಂಗಳೂರಿನ ಚಾಟ್ಸ್ ಅಂಗಡಿಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟ: 9 ವರ್ಷದ ಬಾಲಕ ಸೇರಿ ಮೂವರಿಗೆ ಗಂಭೀರ ಗಾಯ!

ಬೆಂಗಳೂರಿನ ಚಾಟ್ಸ್ ಅಂಗಡಿಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟ: 9 ವರ್ಷದ ಬಾಲಕ ಸೇರಿ ಮೂವರಿಗೆ ಗಂಭೀರ ಗಾಯ!

October 24, 2026
ಅಧಿಕಾರ ಸ್ವೀಕರಿಸಿದ ಮೊದಲ ದಿನವೇ ಆಹಾರ ವಿವಾದ: ಕೇರಳದ ಹೊಸ ರಾಜ್ಯಪಾಲರ ನಿರ್ಧಾರಕ್ಕೆ ಭಾರಿ ಟೀಕೆ

ಅಧಿಕಾರ ಸ್ವೀಕರಿಸಿದ ಮೊದಲ ದಿನವೇ ಆಹಾರ ವಿವಾದ: ಕೇರಳದ ಹೊಸ ರಾಜ್ಯಪಾಲರ ನಿರ್ಧಾರಕ್ಕೆ ಭಾರಿ ಟೀಕೆ

October 24, 2026
  • About
  • Advertise
  • Privacy & Policy
  • Contact

Vijaya Sakshi 2026 CREATED BY Kalahamsa Infotech. PREMIUM WEBSITE SOLUTIONS.

  • E Paper
  • WhatsApp Group
  • E Paper
  • E Paper
error: Content is protected !!
Join WhatsApp Read E-Paper
f 𝕏 WhatsApp Copy Link