ಹಾಸನ: ಹಾಸನಾಂಬೆ ದರ್ಶನಕ್ಕೆ ತೆರಳಲು ಸಿದ್ಧತೆ ನಡೆಸುತ್ತಿರುವ ಭಕ್ತರಿಗೆ ಸಿಹಿಸುದ್ದಿ ಸಿಕ್ಕಿದೆ.
ಅಕ್ಟೋಬರ್ 29ರಿಂದ ಆರಂಭವಾಗಲಿರುವ ಹಾಸನಾಂಬೆ ಜಾತ್ರಾ ಮಹೋತ್ಸವದ ಹಿನ್ನೆಲೆಯಲ್ಲಿ ಭಕ್ತರ ಪ್ರಯಾಣಕ್ಕೆ ಅನುಕೂಲವಾಗುವಂತೆ ವಿಶೇಷ ರೈಲು ಮತ್ತು ಬಸ್ಗಳ ವ್ಯವಸ್ಥೆ ಮಾಡಲಾಗಿದೆ.
ನವೆಂಬರ್ 11ರವರೆಗೆ ನಡೆಯಲಿರುವ ಜಾತ್ರಾ ಮಹೋತ್ಸವಕ್ಕೆ ಲಕ್ಷಾಂತರ ಭಕ್ತರು ಆಗಮಿಸುವ ನಿರೀಕ್ಷೆಯಿದೆ. ಈ ಹಿನ್ನೆಲೆಯಲ್ಲಿ ಹಾಸನ ಮತ್ತು ಬೆಂಗಳೂರು ನಡುವೆ, ಹಾಸನ ಮತ್ತು ಅರಸೀಕೆರೆ ನಡುವೆ ಎರಡು ವಿಶೇಷ ರೈಲುಗಳನ್ನು ಓಡಿಸಲು ರೈಲ್ವೆ ಇಲಾಖೆ ಮುಂದಾಗಿದೆ. ಅಕ್ಟೋಬರ್ 29ರಿಂದ ನವೆಂಬರ್ 11ರವರೆಗೆ ಈ ರೈಲು ಸೇವೆ ಲಭ್ಯವಿರಲಿದೆ ಎಂದು ತಿಳಿದುಬಂದಿದೆ.
ರೈಲುಗಳ ಜೊತೆಗೆ ಬಸ್ಗಳ ವ್ಯವಸ್ಥೆಯನ್ನೂ ಹೆಚ್ಚಿಸಲಾಗಿದೆ. ಹಾಸನದಿಂದ ಬೆಂಗಳೂರು, ಮೈಸೂರು, ಮಡಿಕೇರಿ ಸೇರಿದಂತೆ ವಿವಿಧ ಜಿಲ್ಲೆಗಳಿಗೆ 200ಕ್ಕೂ ಹೆಚ್ಚು ವಿಶೇಷ ಬಸ್ಗಳನ್ನು ಸಾರಿಗೆ ಇಲಾಖೆ ನಿಯೋಜಿಸಿದೆ.
ಪ್ರತಿ ವರ್ಷ ಹಾಸನಾಂಬೆ ದರ್ಶನಕ್ಕೆ ಭಾರೀ ಸಂಖ್ಯೆಯಲ್ಲಿ ಭಕ್ತರು ಆಗಮಿಸುವುದರಿಂದ ಪ್ರಯಾಣಿಕರ ದಟ್ಟಣೆ ನಿಯಂತ್ರಿಸುವುದು ಮತ್ತು ಸುಗಮ ಸಾರಿಗೆ ವ್ಯವಸ್ಥೆ ಕಲ್ಪಿಸುವುದು ಜಿಲ್ಲಾಡಳಿತದ ಪ್ರಮುಖ ಉದ್ದೇಶವಾಗಿದೆ. ವಿಶೇಷ ರೈಲು ಮತ್ತು ಬಸ್ಗಳ ವ್ಯವಸ್ಥೆಯಿಂದ ಹೊರ ಜಿಲ್ಲೆಗಳಿಂದ ಬರುವ ಭಕ್ತರಿಗೆ ಅನುಕೂಲವಾಗುವ ನಿರೀಕ್ಷೆಯಿದೆ.









