ಚಾಮರಾಜನಗರ: ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಅರಣ್ಯ ಪ್ರದೇಶದಲ್ಲಿ ಹುಲಿ ದಾಳಿಗೆ ಹಸುವೊಂದು ಬಲಿಯಾಗಿದೆ.
ಬಂಡೀಪುರದ ಮಂಗಲ ಮುಖ್ಯ ರಸ್ತೆಯಲ್ಲಿ ಇಂದು ಬೆಳ್ಳಂಬೆಳಗ್ಗೆ ಈ ಘಟನೆ ನಡೆದಿದೆ.
ಕಾಡಂಚಿನ ಗ್ರಾಮಗಳ ರೈತರು ತಮ್ಮ ಜಾನುವಾರುಗಳನ್ನು ಮೇವು ಅರಸಿ ಕಂದಾಯ ಜಮೀನುಗಳಿಗೆ ಬಿಡುವುದು ಸಾಮಾನ್ಯವಾಗಿದೆ. ಅದರಂತೆ ಮೇಯಲು ತೆರಳಿದ್ದ ಹಸುವಿನ ಮೇಲೆ ಹುಲಿ ದಾಳಿ ನಡೆಸಿದೆ. ದಾಳಿಯ ತೀವ್ರತೆಗೆ ಹಸು ಮೃತಪಟ್ಟಿದೆ.
ಬಂಡೀಪುರ ಅರಣ್ಯ ಪ್ರದೇಶದ ಸುತ್ತಮುತ್ತ ಹುಲಿ ಸೇರಿದಂತೆ ವನ್ಯಜೀವಿಗಳ ಸಂಚಾರ ಇರುವುದರಿಂದ ಕಾಡಂಚಿನ ಗ್ರಾಮಗಳ ರೈತರು ತಮ್ಮ ಜಾನುವಾರುಗಳನ್ನು ಮೇಯಿಸಲು ಕರೆದೊಯ್ಯುವಾಗ ಎಚ್ಚರಿಕೆ ವಹಿಸುವುದು ಅಗತ್ಯವಾಗಿದೆ.
ಬೆಳಂಬೆಳಗ್ಗೆಯೇ ಹುಲಿ ದಾಳಿಗೆ ಹಸು ಬಲಿಯಾಗಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.










