ಉಡುಪಿ: ಮೆಸ್ಕಾಂ ಇಲಾಖೆಯ ವೈಫಲ್ಯವನ್ನು ಖಂಡಿಸಿ ಉಡುಪಿಯಲ್ಲಿ ಬಿಜೆಪಿ ವತಿಯಿಂದ ಬೃಹತ್ ಪಂಜಿನ ಮೆರವಣಿಗೆ ನಡೆಸಲಾಯಿತು.
ಶಾಸಕ ಯಶ್ಪಾಲ್ ಸುವರ್ಣ ಅವರ ನೇತೃತ್ವದಲ್ಲಿ ನಡೆದ ಮೆರವಣಿಗೆಯಲ್ಲಿ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಪಾಲ್ಗೊಂಡರು.
ಮೆಸ್ಕಾಂ ಇಲಾಖೆ ಮತ್ತು ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದ ಪ್ರತಿಭಟನಾಕಾರರು ತಮ್ಮ ಆಕ್ರೋಶ ವ್ಯಕ್ತಪಡಿಸಿದರು.
ಮೆರವಣಿಗೆಯ ಮೂಲಕ ಮೆಸ್ಕಾಂ ಕಚೇರಿ ತಲುಪಿದ ಪ್ರತಿಭಟನಾಕಾರರು ಕಚೇರಿಯ ಎದುರು ಜಮಾಯಿಸಿ ಪ್ರತಿಭಟನೆ ನಡೆಸಿದರು. ಇಲಾಖೆಯ ವೈಫಲ್ಯಗಳನ್ನು ಸರಿಪಡಿಸಿ ಸಾರ್ವಜನಿಕರ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸಬೇಕೆಂದು ಬಿಜೆಪಿ ಕಾರ್ಯಕರ್ತರು ಆಗ್ರಹಿಸಿದರು.








