ಕಲಬುರಗಿ: ನಗರದ ದರಿಯಾಪುರ–ಕೋಟನೂರ ಬಡಾವಣೆಯಲ್ಲಿ ಆಟವಾಡುತ್ತಿದ್ದ ನಾಲ್ಕು ವರ್ಷದ ಬಾಲಕನ ಮೇಲೆ ಬೀದಿ ನಾಯಿ ದಾಳಿ ನಡೆಸಿದ್ದು, ಗಂಭೀರವಾಗಿ ಗಾಯಗೊಂಡ ಬಾಲಕ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ.
ಕಲಬುರಗಿ ತಾಲೂಕಿನ ಜಂಬಗಾ ಗ್ರಾಮದ ಶರಣಬಸಪ್ಪ ಪೂಜಾರಿ ಅವರ ಪುತ್ರ ಮನೋಜ್ ಪೂಜಾರಿ ಜಂಬಗಾ (4) ಮೃತಪಟ್ಟ ಬಾಲಕ.
ಶರಣಬಸಪ್ಪ ಪೂಜಾರಿ ಅವರು ಕಲಬುರಗಿಯಲ್ಲಿ ವಾಚ್ಮನ್ ಆಗಿ ಕೆಲಸ ಮಾಡುತ್ತಿದ್ದರು. ಕೋಟನೂರ ಬಡಾವಣೆಯ ಗಾಣದೇವತೆ ದೇವಸ್ಥಾನದ ರಸ್ತೆಯಲ್ಲಿ ಮನೋಜ್ ಆಟವಾಡುತ್ತಿದ್ದ ವೇಳೆ ಬೀದಿ ನಾಯಿ ದಾಳಿ ನಡೆಸಿದೆ. ದಾಳಿಯಿಂದ ಬಾಲಕ ಗಂಭೀರವಾಗಿ ಗಾಯಗೊಂಡಿದ್ದ.
ತಕ್ಷಣ ಬಾಲಕನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಮನೋಜ್ ಮೃತಪಟ್ಟಿದ್ದಾನೆ.








