ಗದಗ: ಅ.23ರಂದು ಸಿಡಿಲು ಬಡಿದು ಮೃತಪಟ್ಟ ಕುರಿಗಾಯಿ ಕುಟುಂಬಕ್ಕೆ ಸರ್ಕಾರದಿಂದ ಮಂಜೂರಾದ ₹5.20 ಲಕ್ಷ ಪರಿಹಾರದ ಚೆಕ್ನ್ನು ಸೋಮವಾರ ಹಸ್ತಾಂತರಿಸಲಾಯಿತು.
ಮೃತರ ಕುಟುಂಬಕ್ಕೆ ಶೀಘ್ರ ಪರಿಹಾರ ದೊರಕಿಸಿಕೊಡುವ ನಿಟ್ಟಿನಲ್ಲಿ ಮಾಜಿ ಸಚಿವ ಎಚ್.ಕೆ. ಪಾಟೀಲ ಸೇರಿದಂತೆ ಮಾಜಿ ಶಾಸಕರಾದ ಡಿ.ಆರ್. ಪಾಟೀಲ, ನರಗುಂದ ಶಾಸಕ ಸಿ.ಸಿ. ಪಾಟೀಲ ಹಾಗೂ ಬಿ.ಆರ್. ಯಾವಗಲ್ ಅವರು ಪಕ್ಷಾತೀತವಾಗಿ ಅಧಿಕಾರಿಗಳನ್ನು ದೂರವಾಣಿ ಮೂಲಕ ಸಂಪರ್ಕಿಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದರು.
ಜನಪ್ರತಿನಿಧಿಗಳ ಪ್ರಯತ್ನದ ಫಲವಾಗಿ ಸರ್ಕಾರದಿಂದ ಪರಿಹಾರ ಮಂಜೂರಾಗಿದ್ದು, ತಹಸೀಲ್ದಾರ್ ಶ್ರೀನಿವಾಸ ಕುಲಕರ್ಣಿ ಅವರು ಮೃತರ ಕುಟುಂಬಕ್ಕೆ ₹5.20 ಲಕ್ಷದ ಚೆಕ್ ವಿತರಿಸಿದರು.
ಈ ಸಂದರ್ಭದಲ್ಲಿ ಗ್ರಾಮದ ಎಸ್.ಆರ್. ಗೌಡ, ಜಗದೀಶ್ ಹುನುಕುಂಟಿ, ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ದಾದಾಪೀರ ಅಣ್ಣಿಗೇರಿ ಸೇರಿದಂತೆ ಚಿಕ್ಕಹಂದಿಗೋಳ ಗ್ರಾಮದ ಹಿರಿಯರು ಉಪಸ್ಥಿತರಿದ್ದರು.










