ಅಗಡಿ ಸನ್ರೈಸ್ ಆಸ್ಪತ್ರೆಯಲ್ಲಿ ಯಶಸ್ವಿ ಶಸ್ತ್ರಚಿಕಿತ್ಸೆ
ಲಕ್ಷ್ಮೇಶ್ವರ: ಪಟ್ಟಣದ ಅಗಡಿ ಸನ್ರೈಸ್ ಆಸ್ಪತ್ರೆಯ ತಜ್ಞ ವೈದ್ಯರ ತಂಡ 45 ವರ್ಷದ ಮಹಿಳೆಯ ದೇಹದಲ್ಲಿದ್ದ 4.5 ಕೆ.ಜಿ. ತೂಕದ ಬೃಹತ್ ಗಡ್ಡೆಯನ್ನು ಯಶಸ್ವಿ ಶಸ್ತ್ರಚಿಕಿತ್ಸೆ ಮೂಲಕ ಹೊರತೆಗೆದಿದೆ.
ನವೆಂಬರ್ 3ರಂದು ಶಸ್ತ್ರಚಿಕಿತ್ಸಾ ತಜ್ಞ ಡಾ. ಎಸ್.ವೈ. ಹಿರೇಗೌಡ್ರ ಅವರ ನೇತೃತ್ವದಲ್ಲಿ ಶಸ್ತ್ರಚಿಕಿತ್ಸೆ ನಡೆಸಲಾಗಿದ್ದು, ಗಡ್ಡೆಯನ್ನು ಯಶಸ್ವಿಯಾಗಿ ಹೊರತೆಗೆಯಲಾಗಿದೆ. ಸದ್ಯ ಮಹಿಳೆಯ ಆರೋಗ್ಯ ಸ್ಥಿರವಾಗಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ.
ಶಸ್ತ್ರಚಿಕಿತ್ಸಾ ತಂಡದಲ್ಲಿ ಮಧುಮೇಹ ಮತ್ತು ಹೃದ್ರೋಗ ತಜ್ಞ ಡಾ. ರಾಜಶೇಖರ ಮೂಲಿಮನಿ, ಸ್ತ್ರೀರೋಗ ತಜ್ಞರಾದ ಡಾ. ಸುಜಾತಾ ಸಂಗೂರ ಹಾಗೂ ಡಾ. ರೇಷ್ಮಾ ರಾಠೋಡ, ಅರವಳಿಕೆ ತಜ್ಞ ಡಾ. ವೀರೇಶ ಮಠಪತಿ ಸೇರಿದಂತೆ ಶಸ್ತ್ರಚಿಕಿತ್ಸಾ ಕೊಠಡಿ ಹಾಗೂ ನರ್ಸಿಂಗ್ ಸಿಬ್ಬಂದಿ ಕಾರ್ಯನಿರ್ವಹಿಸಿದರು.
ಅಗಡಿ ಸನ್ರೈಸ್ ಆಸ್ಪತ್ರೆಯು ಕಳೆದ ಹತ್ತಾರು ವರ್ಷಗಳಿಂದ ಇಂತಹ ಹಲವು ಸಂಕೀರ್ಣ ಶಸ್ತ್ರಚಿಕಿತ್ಸೆಗಳನ್ನು ಯಶಸ್ವಿಯಾಗಿ ನಡೆಸಿಕೊಂಡು ಬರುತ್ತಿದೆ ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.










