• About
  • Advertise
  • Privacy & Policy
  • Contact
Friday, November 6, 2026
Vijaya Sakshi News
Advertisement
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
Vijaya Sakshi News
  • Home
  • Gadag News
  • Karnataka News
  • Crime News
  • Politics News
  • Bengaluru News
  • Entertainment
  • Life Style
  • Sports News
Home Crime News

ಗಂಡ, ಇಬ್ಬರು ಮಕ್ಕಳಿದ್ರೂ ಮತ್ತೊಬ್ಬನ ಜೊತೆ ಪ್ರೀತಿ: ರೈಲ್ವೆ ಹಳಿಯಲ್ಲಿ ಇಬ್ಬರ ಬದುಕು ಅಂತ್ಯ!

Vijaya Sakshi News Desk by Vijaya Sakshi News Desk
November 6, 2026
in Crime News
ಗಂಡ, ಇಬ್ಬರು ಮಕ್ಕಳಿದ್ರೂ ಮತ್ತೊಬ್ಬನ ಜೊತೆ ಪ್ರೀತಿ: ರೈಲ್ವೆ ಹಳಿಯಲ್ಲಿ ಇಬ್ಬರ ಬದುಕು ಅಂತ್ಯ!
0
SHARES
0
VIEWS
Share on Facebook

ಮಂಡ್ಯ: ಮಂಡ್ಯ ನಗರದ ಹೊರವಲಯದ ವಿಸಿ ಫಾರಂ ರೈಲ್ವೆ ಗೇಟ್ ಬಳಿ ವಿವಾಹಿತ ಮಹಿಳೆ ಹಾಗೂ ಯುವಕ ರೈಲಿಗೆ ಸಿಲುಕಿ ಮೃತಪಟ್ಟಿರುವ ಘಟನೆ ನಡೆದಿದೆ. ಮೃತರನ್ನು ಬೆಂಗಳೂರು ಮೂಲದ ಸಹನಾ (25) ಹಾಗೂ ರಾಹುಲ್ (23) ಎಂದು ಗುರುತಿಸಲಾಗಿದೆ. ಇಬ್ಬರೂ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ಕೌಟುಂಬಿಕ ಕಲಹವೇ ಈ ದುರಂತಕ್ಕೆ ಕಾರಣವಾಗಿರಬಹುದು ಎನ್ನಲಾಗಿದೆ.

ಸಹನಾ ಸುಮಾರು ಎಂಟು ವರ್ಷಗಳ ಹಿಂದೆ ವೀರೇಶ್ ಎಂಬುವವರನ್ನು ಪ್ರೀತಿಸಿ ಮದುವೆಯಾಗಿದ್ದರು. ದಂಪತಿಗೆ ಆರು ವರ್ಷದ ಹೆಣ್ಣು ಮಗು ಹಾಗೂ ಎರಡು ವರ್ಷದ ಗಂಡು ಮಗು ಇದೆ. ವೀರೇಶ್ ವೃತ್ತಿಯಲ್ಲಿ ಆಟೋ ಚಾಲಕರಾಗಿದ್ದು, ಕಳೆದ ಎರಡು ಮೂರು ವರ್ಷಗಳಿಂದ ದಂಪತಿ ಬೆಂಗಳೂರಿನ ಮಾದನಾಯಕನಹಳ್ಳಿಯಲ್ಲಿ ವಾಸವಾಗಿದ್ದರು.

ವೀರೇಶ್ ಮತ್ತು ಸಹನಾ ವಾಸವಿದ್ದ ಕಟ್ಟಡದಲ್ಲಿಯೇ ರಾಹುಲ್ ಕೂಡ ನೆಲೆಸಿದ್ದ. ಈ ವೇಳೆ ಸಹನಾ ಮತ್ತು ರಾಹುಲ್ ನಡುವೆ ಪರಿಚಯ ಬೆಳೆದಿದ್ದು, ನಂತರ ಇಬ್ಬರೂ ಪ್ರೀತಿಸುತ್ತಿದ್ದರು ಎನ್ನಲಾಗಿದೆ. ಈ ವಿಚಾರ ಪತಿ ವೀರೇಶ್‌ಗೆ ತಿಳಿದ ಬಳಿಕ ದಂಪತಿ ನಡುವೆ ಪದೇ ಪದೆ ಜಗಳ ನಡೆಯುತ್ತಿತ್ತು ಎಂದು ಹೇಳಲಾಗಿದೆ.

ಇಬ್ಬರ ಸಂಬಂಧದ ವಿಚಾರವಾಗಿ ಕುಟುಂಬದ ಹಿರಿಯರ ಸಮ್ಮುಖದಲ್ಲಿ ಹಲವು ಬಾರಿ ಮಾತುಕತೆ ನಡೆದಿತ್ತು. ರಾಹುಲ್ ಜೊತೆಗಿನ ಸಂಬಂಧವನ್ನು ಮುಂದುವರಿಸದಂತೆ ಸಹನಾಗೆ ಬುದ್ಧಿವಾದ ಹೇಳಲಾಗಿತ್ತು ಎನ್ನಲಾಗಿದೆ. ಆದರೂ ಇಬ್ಬರ ನಡುವಿನ ಸಂಬಂಧ ಮುಂದುವರಿದಿದ್ದರಿಂದ ಕುಟುಂಬದಲ್ಲಿ ಕಲಹ ಹೆಚ್ಚಾಗಿತ್ತು. ಈ ಹಿನ್ನೆಲೆಯಲ್ಲಿ ವೀರೇಶ್ ಮಾದನಾಯಕನಹಳ್ಳಿಯಲ್ಲಿದ್ದ ಮನೆಯನ್ನು ಬಿಟ್ಟು ಬೇರೆಡೆ ವಾಸಿಸಲು ಆರಂಭಿಸಿದ್ದರು ಎಂದು ತಿಳಿದುಬಂದಿದೆ.

ಕಳೆದ ಸೋಮವಾರವೂ ಇದೇ ವಿಚಾರವಾಗಿ ಸಹನಾ ಮತ್ತು ವೀರೇಶ್ ನಡುವೆ ಜಗಳ ನಡೆದಿತ್ತು ಎನ್ನಲಾಗಿದೆ. ಈ ವೇಳೆ ರಾಹುಲ್ ಜೊತೆಯೇ ಜೀವನ ನಡೆಸುವುದಾಗಿ ಸಹನಾ ಹೇಳಿದ್ದರೆಂದು ತಿಳಿದುಬಂದಿದೆ. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದ ವೀರೇಶ್, ಇಬ್ಬರನ್ನೂ ಒಟ್ಟಿಗೆ ಬದುಕಲು ಬಿಡುವುದಿಲ್ಲ ಎಂದು ಬೆದರಿಕೆ ಹಾಕಿದ್ದಾಗಿ ಆರೋಪಿಸಲಾಗಿದೆ.

ಈ ಘಟನೆಯ ಬಳಿಕ ಮಂಗಳವಾರ ಸಹನಾ ಪತಿಯ ಮನೆಯಿಂದ ಹೊರಟು ಮಂಡ್ಯ ಜಿಲ್ಲೆಯ ಗುನ್ನಾಯಕನಹಳ್ಳಿಯಲ್ಲಿರುವ ತನ್ನ ಅಜ್ಜಿಯ ಮನೆಗೆ ಬಂದಿದ್ದರು. ಗುರುವಾರ ರಾಹುಲ್ ಕೂಡ ಗುನ್ನಾಯಕನಹಳ್ಳಿಗೆ ಆಗಮಿಸಿ ಸಹನಾಳನ್ನು ಭೇಟಿಯಾಗಿದ್ದ ಎನ್ನಲಾಗಿದೆ. ಈ ವೇಳೆ ಇಬ್ಬರೂ ವೀರೇಶ್ ವಿರುದ್ಧ ಪೊಲೀಸ್ ದೂರು ನೀಡುವ ಕುರಿತು ಚರ್ಚಿಸಿದ್ದರು ಎಂದು ತಿಳಿದುಬಂದಿದೆ.

ಆದರೆ ತಮ್ಮ ಸಂಬಂಧಕ್ಕೆ ಎದುರಾಗಿದ್ದ ವಿರೋಧ ಹಾಗೂ ಬೆದರಿಕೆಯ ಆರೋಪಗಳಿಂದ ಮನನೊಂದಿದ್ದ ಇಬ್ಬರೂ ಶುಕ್ರವಾರ ಬೆಳಿಗ್ಗೆ ಮಂಡ್ಯದ ವಿಸಿ ಫಾರಂ ರೈಲ್ವೆ ಗೇಟ್ ಬಳಿ ರೈಲಿಗೆ ಸಿಲುಕಿ ಮೃತಪಟ್ಟಿದ್ದಾರೆ. ಇಬ್ಬರೂ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ರೈಲ್ವೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಳಿಕ ಮೃತದೇಹಗಳನ್ನು ಮಂಡ್ಯದ ಮಿಮ್ಸ್ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಿ, ಕುಟುಂಬಸ್ಥರಿಗೆ ಮಾಹಿತಿ ನೀಡಿದ್ದಾರೆ. ಇಬ್ಬರ ಸಾವಿಗೆ ನಿಖರ ಕಾರಣವೇನು ಎಂಬುದರ ಕುರಿತು ತನಿಖೆ ಮುಂದುವರಿದಿದೆ.

Tags: BreakingNewsKarnatakaMandya Railway DeathMandya Sahana Rahul CaseMarried Woman Youth Death MandyaNewsHeadlinesVijayasakshivijayasakshinews
ShareSendShare
Previous Post

ಪೆಟ್ರೋಲ್ ನಲ್ಲಿ ಶೇ.31.02ರಷ್ಟು ಎಥೆನಾಲ್ ಪತ್ತೆಯಾಗಿದೆ: ರಿಜ್ವಾನ್ ಅರ್ಷದ್ ಗಂಭೀರ ಆರೋಪ

Next Post

ಅಂಡರ್-19 ಏಷ್ಯಾಕಪ್ ನಲ್ಲಿ ಆರ್ಯವೀರ್ ಸೆಹ್ವಾಗ್ ಅಬ್ಬರ: ನೇಪಾಳ ವಿರುದ್ಧ ಭಾರತಕ್ಕೆ 10 ವಿಕೆಟ್ ಗಳ ಭರ್ಜರಿ ಜಯ!

Vijaya Sakshi News Desk

Vijaya Sakshi News Desk

Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

Next Post
ಅಂಡರ್-19 ಏಷ್ಯಾಕಪ್ ನಲ್ಲಿ ಆರ್ಯವೀರ್ ಸೆಹ್ವಾಗ್ ಅಬ್ಬರ: ನೇಪಾಳ ವಿರುದ್ಧ ಭಾರತಕ್ಕೆ 10 ವಿಕೆಟ್ ಗಳ ಭರ್ಜರಿ ಜಯ!

ಅಂಡರ್-19 ಏಷ್ಯಾಕಪ್ ನಲ್ಲಿ ಆರ್ಯವೀರ್ ಸೆಹ್ವಾಗ್ ಅಬ್ಬರ: ನೇಪಾಳ ವಿರುದ್ಧ ಭಾರತಕ್ಕೆ 10 ವಿಕೆಟ್ ಗಳ ಭರ್ಜರಿ ಜಯ!

Stay Connected test

  • 24k Followers
  • 99 Subscribers
  • Trending
  • Comments
  • Latest

ಪೊಲೀಸ್ ವೇಷದಲ್ಲಿ ಅಮಾಯಕರಿಗೆ ಬೆದರಿಕೆ: ಸಂಜಯ ಕೊಪ್ಪದ ಬಂಧನಕ್ಕೆ ಸರ್ಕಾರದ ಮುದ್ರೆ

October 24, 2026
ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

October 23, 2026
ಲಕ್ಷ್ಮೇಶ್ವರ, ಶಿರಹಟ್ಟಿಯಲ್ಲಿ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಪರಿಶೀಲನೆ

ಲಕ್ಷ್ಮೇಶ್ವರ, ಶಿರಹಟ್ಟಿಯಲ್ಲಿ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಪರಿಶೀಲನೆ

November 4, 2026
Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

October 25, 2026
Single Post Template – Fast News

ದೇವಸ್ಥಾನದಲ್ಲಿ 3 ಕೊಲೆ: ಹುಂಡಿಗಳ್ಳರ ಅಮಾನುಷ ಕೃತ್ಯ

0
Single Post Template – Fast News

ಕೋಡಿಹಳ್ಳಿಯವರಿಗೆ ಇಷ್ಟೊಂದು ಅಜ್ಞಾನ ಇದೆ ಅಂತ ಗೊತ್ತಿರಲಿಲ್ಲ: ಬಿ.ಸಿ.ಪಾಟೀಲ

0
Single Post Template – Fast News

ಕತ್ತಲಲ್ಲಿ ಕ್ವಾರಂಟೈನ್ ಸೆಂಟರ್; ಪರದಾಡಿದ ಕೊವಿಡ್ ರೋಗಿಗಳು!

0
Single Post Template – Fast News

ನಗರಸಭೆ ಆಯುಕ್ತರ ಕುರ್ಚಿ ಮಾರಾಟವಾಯ್ತೆ?
ಉಸ್ತುವಾರಿ ಸಚಿವರು ತಮ್ಮ ಹಠ ಸಾಧಿಸಿಯೇ ಬಿಟ್ಟರೆ?

0
ಅಂಡರ್-19 ಏಷ್ಯಾಕಪ್ ನಲ್ಲಿ ಆರ್ಯವೀರ್ ಸೆಹ್ವಾಗ್ ಅಬ್ಬರ: ನೇಪಾಳ ವಿರುದ್ಧ ಭಾರತಕ್ಕೆ 10 ವಿಕೆಟ್ ಗಳ ಭರ್ಜರಿ ಜಯ!

ಅಂಡರ್-19 ಏಷ್ಯಾಕಪ್ ನಲ್ಲಿ ಆರ್ಯವೀರ್ ಸೆಹ್ವಾಗ್ ಅಬ್ಬರ: ನೇಪಾಳ ವಿರುದ್ಧ ಭಾರತಕ್ಕೆ 10 ವಿಕೆಟ್ ಗಳ ಭರ್ಜರಿ ಜಯ!

November 6, 2026
ಗಂಡ, ಇಬ್ಬರು ಮಕ್ಕಳಿದ್ರೂ ಮತ್ತೊಬ್ಬನ ಜೊತೆ ಪ್ರೀತಿ: ರೈಲ್ವೆ ಹಳಿಯಲ್ಲಿ ಇಬ್ಬರ ಬದುಕು ಅಂತ್ಯ!

ಗಂಡ, ಇಬ್ಬರು ಮಕ್ಕಳಿದ್ರೂ ಮತ್ತೊಬ್ಬನ ಜೊತೆ ಪ್ರೀತಿ: ರೈಲ್ವೆ ಹಳಿಯಲ್ಲಿ ಇಬ್ಬರ ಬದುಕು ಅಂತ್ಯ!

November 6, 2026
ಪೆಟ್ರೋಲ್ ನಲ್ಲಿ ಶೇ.31.02ರಷ್ಟು ಎಥೆನಾಲ್ ಪತ್ತೆಯಾಗಿದೆ: ರಿಜ್ವಾನ್ ಅರ್ಷದ್ ಗಂಭೀರ ಆರೋಪ

ಪೆಟ್ರೋಲ್ ನಲ್ಲಿ ಶೇ.31.02ರಷ್ಟು ಎಥೆನಾಲ್ ಪತ್ತೆಯಾಗಿದೆ: ರಿಜ್ವಾನ್ ಅರ್ಷದ್ ಗಂಭೀರ ಆರೋಪ

November 6, 2026
ರೈಲ್ವೆ ಅಂಡರ್ ಬ್ರಿಡ್ಜ್ ಕಾಮಗಾರಿ ವೇಳೆ ಮಣ್ಣು ಕುಸಿತ; ತಾಂತ್ರಿಕ ಸಿಬ್ಬಂದಿ ಸಾವು, ಮತ್ತೊಬ್ಬರಿಗೆ ಗಂಭೀರ ಗಾಯ

ರೈಲ್ವೆ ಅಂಡರ್ ಬ್ರಿಡ್ಜ್ ಕಾಮಗಾರಿ ವೇಳೆ ಮಣ್ಣು ಕುಸಿತ; ತಾಂತ್ರಿಕ ಸಿಬ್ಬಂದಿ ಸಾವು, ಮತ್ತೊಬ್ಬರಿಗೆ ಗಂಭೀರ ಗಾಯ

November 6, 2026

Recent News

We bring you the best Premium WordPress Themes that perfect for news, magazine, personal blog, etc. Check our landing page for details.

Browse by Category

Recent News

ಅಂಡರ್-19 ಏಷ್ಯಾಕಪ್ ನಲ್ಲಿ ಆರ್ಯವೀರ್ ಸೆಹ್ವಾಗ್ ಅಬ್ಬರ: ನೇಪಾಳ ವಿರುದ್ಧ ಭಾರತಕ್ಕೆ 10 ವಿಕೆಟ್ ಗಳ ಭರ್ಜರಿ ಜಯ!

ಅಂಡರ್-19 ಏಷ್ಯಾಕಪ್ ನಲ್ಲಿ ಆರ್ಯವೀರ್ ಸೆಹ್ವಾಗ್ ಅಬ್ಬರ: ನೇಪಾಳ ವಿರುದ್ಧ ಭಾರತಕ್ಕೆ 10 ವಿಕೆಟ್ ಗಳ ಭರ್ಜರಿ ಜಯ!

November 6, 2026
ಗಂಡ, ಇಬ್ಬರು ಮಕ್ಕಳಿದ್ರೂ ಮತ್ತೊಬ್ಬನ ಜೊತೆ ಪ್ರೀತಿ: ರೈಲ್ವೆ ಹಳಿಯಲ್ಲಿ ಇಬ್ಬರ ಬದುಕು ಅಂತ್ಯ!

ಗಂಡ, ಇಬ್ಬರು ಮಕ್ಕಳಿದ್ರೂ ಮತ್ತೊಬ್ಬನ ಜೊತೆ ಪ್ರೀತಿ: ರೈಲ್ವೆ ಹಳಿಯಲ್ಲಿ ಇಬ್ಬರ ಬದುಕು ಅಂತ್ಯ!

November 6, 2026
  • About
  • Advertise
  • Privacy & Policy
  • Contact

Vijaya Sakshi 2026 CREATED BY Kalahamsa Infotech. PREMIUM WEBSITE SOLUTIONS.

error: Content is protected !!
Join WhatsApp ▤ Read E-Paper