ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕೃಪಾ ಆಳ್ವಾ ಬೆಂಗಳೂರಿನ ಸಿಸಿಬಿ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗಿದ್ದಾರೆ. ಸಿಸಿಬಿ ಪೊಲೀಸರು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ ಬೆನ್ನಲ್ಲೇ ಕೃಪಾ ಆಳ್ವಾ ತನಿಖಾಧಿಕಾರಿಗಳ ಮುಂದೆ ಹಾಜರಾಗಿದ್ದು, ಪ್ರಕರಣದ ಕುರಿತು ಮಾಧ್ಯಮಗಳಿಗೆ ಸದ್ಯಕ್ಕೆ ಯಾವುದೇ ವಿವರ ನೀಡಲು ನಿರಾಕರಿಸಿದ್ದಾರೆ.

ಸಿಸಿಬಿ ಕಚೇರಿಗೆ ಆಗಮಿಸಿದ ಸಂದರ್ಭದಲ್ಲಿ ಮಾಧ್ಯಮದವರು ಕೇಳಿದ ಪ್ರಶ್ನೆಗಳಿಗೆ ಕೃಪಾ ಆಳ್ವಾ ಸಂಕ್ಷಿಪ್ತವಾಗಿ ಪ್ರತಿಕ್ರಿಯಿಸಿದ್ದಾರೆ. ‘ಮೊದಲು ಕಾರ್ಯವಿಧಾನ ಮುಗಿಯಲಿ. ಆನಂತರ ಮಾತನಾಡುತ್ತೇನೆ’ ಎಂದು ಹೇಳುವ ಮೂಲಕ ವಿಚಾರಣೆ ಪೂರ್ಣಗೊಂಡ ಬಳಿಕ ಪ್ರತಿಕ್ರಿಯಿಸುವುದಾಗಿ ತಿಳಿಸಿದ್ದಾರೆ.
ಇದೇ ವೇಳೆ ಕೃಪಾ ಆಳ್ವಾ ಪರ ವಕೀಲೆ ನಿಖಿತಾ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ, ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕೃಪಾ ಆಳ್ವಾ ಈಗಾಗಲೇ ತನಿಖಾಧಿಕಾರಿಗಳ ಮುಂದೆ ಹೇಳಿಕೆ ದಾಖಲಿಸಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.
ಪ್ರಕರಣದ ಕುರಿತು ಕೃಪಾ ಆಳ್ವಾ ಈ ಹಿಂದೆಯೇ ಎರಡು ಬಾರಿ ಡಿಸಿಪಿ ಎದುರು ಹಾಜರಾಗಿ ಹೇಳಿಕೆ ನೀಡಿದ್ದರು. ಇದೀಗ ಸಿಸಿಬಿ ಪೊಲೀಸರು ಮತ್ತೊಮ್ಮೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿರುವ ಹಿನ್ನೆಲೆಯಲ್ಲಿ ಅಧಿಕೃತವಾಗಿ ಹೇಳಿಕೆ ನೀಡಲು ಬಂದಿದ್ದಾರೆ ಎಂದು ವಕೀಲೆ ನಿಖಿತಾ ಸ್ಪಷ್ಟಪಡಿಸಿದ್ದಾರೆ.
ಕೃಪಾ ಆಳ್ವಾ ಅವರು ತನಿಖೆಗೆ ಸಂಬಂಧಿಸಿದ ಕಾರ್ಯವಿಧಾನಗಳು ಪೂರ್ಣಗೊಂಡ ಬಳಿಕ ಮಾತನಾಡುವುದಾಗಿ ತಿಳಿಸಿದ್ದು, ಅವರ ಪರ ವಕೀಲೆ ಈಗಾಗಲೇ ಎರಡು ಬಾರಿ ಹೇಳಿಕೆ ದಾಖಲಿಸಿರುವ ವಿಚಾರವನ್ನು ಬಹಿರಂಗಪಡಿಸಿದ್ದಾರೆ.









