• About
  • Advertise
  • Privacy & Policy
  • Contact
Monday, November 9, 2026
Vijaya Sakshi News
Advertisement
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
Vijaya Sakshi News
  • Home
  • Gadag News
  • Karnataka News
  • Crime News
  • Politics News
  • Bengaluru News
  • Entertainment
  • Life Style
  • Sports News
Home Karnataka News

ಉಚಿತ ಯೋಜನೆ ಕೊಟ್ಟು ಬೆಲೆ ಏರಿಕೆ ಬರೆ ಎಳೆಯುತ್ತಿದ್ದೀರಾ? ಅಗತ್ಯ ವಸ್ತುಗಳ ದರ ಏರಿಕೆಗೆ ಹೈಕೋರ್ಟ್ ಅಸಮಾಧಾನ!

Vijaya Sakshi News Desk by Vijaya Sakshi News Desk
November 9, 2026
in Karnataka News
ಮದುವೆ ನಿರಾಕರಣೆಗೇ ಜೀವಭಯ: ತಂದೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಯುವತಿ
0
SHARES
2
VIEWS
Share on Facebook

ಬೆಂಗಳೂರು: ರಾಜ್ಯ ಸರ್ಕಾರ ಒಂದು ಕಡೆ ಉಚಿತ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸುತ್ತಿದ್ದರೆ, ಮತ್ತೊಂದೆಡೆ ಅಗತ್ಯ ವಸ್ತುಗಳ ಬೆಲೆ ನಿರಂತರವಾಗಿ ಏರಿಕೆಯಾಗುತ್ತಿದೆ. ಇದರಿಂದ ಸಾಮಾನ್ಯ ಜನರು ಜೀವನ ನಡೆಸುವುದೇ ಕಷ್ಟವಾಗುತ್ತಿದೆ ಎಂದು ಕರ್ನಾಟಕ ಹೈಕೋರ್ಟ್ ಕಳವಳ ವ್ಯಕ್ತಪಡಿಸಿದೆ. ತುಪ್ಪ, ಅಕ್ಕಿ, ಹಾಲು ಹಾಗೂ ಬಸ್ ಟಿಕೆಟ್ ದರ ಏರಿಕೆಯನ್ನು ಪ್ರಸ್ತಾಪಿಸಿರುವ ನ್ಯಾಯಪೀಠ, ಯೋಜನೆಗಳು ಉಚಿತವಾಗಿದ್ದರೂ ಬೆಲೆ ಏರಿಕೆ ಮಾತ್ರ ಖಚಿತವಾಗಿದೆ ಎಂದು ವ್ಯಂಗ್ಯವಾಡಿದೆ.

ಅರ್ಜಿಯೊಂದರ ವಿಚಾರಣೆ ವೇಳೆ ನ್ಯಾಯಮೂರ್ತಿ ಶ್ರೀಶಾನಂದ ಅವರಿದ್ದ ಪೀಠ ದಿನಬಳಕೆ ವಸ್ತುಗಳ ಬೆಲೆ ಏರಿಕೆ ಕುರಿತು ಅಸಮಾಧಾನ ವ್ಯಕ್ತಪಡಿಸಿದೆ. ಸರ್ಕಾರ ಜನರಿಗೆ ಉಚಿತ ಯೋಜನೆಗಳನ್ನು ನೀಡುತ್ತಿದೆ. ಆದರೆ ಮತ್ತೊಂದೆಡೆ ಅಗತ್ಯ ವಸ್ತುಗಳ ಬೆಲೆ ಹೆಚ್ಚಾಗುತ್ತಲೇ ಇದೆ. ಸರ್ಕಾರದ ಎಲ್ಲ ಯೋಜನೆಗಳೂ ಹೀಗೆಯೇ ಇವೆಯೇ ಎಂದು ನ್ಯಾಯಪೀಠ ಪ್ರಶ್ನಿಸಿದೆ.

ತುಪ್ಪದ ಬೆಲೆ ಏರಿಕೆಯ ಉದಾಹರಣೆ ನೀಡಿದ ನ್ಯಾಯಪೀಠ, ಕಳೆದ ತಿಂಗಳು ಒಂದು ಕೆ.ಜಿ. ತುಪ್ಪದ ಬೆಲೆ 650 ರೂಪಾಯಿ ಇತ್ತು. ಆದರೆ ಈಗ ಅದೇ ತುಪ್ಪದ ಬೆಲೆ 850 ರೂಪಾಯಿಗೆ ಏರಿಕೆಯಾಗಿದೆ. ದೀಪಾವಳಿ ಸಂದರ್ಭದಲ್ಲಿ ತುಪ್ಪದಿಂದ ಯಮದೀಪ ಹಚ್ಚುವ ಸಂಪ್ರದಾಯವಿದೆ. ಆದರೆ ತುಪ್ಪದ ಬೆಲೆಯೇ ಇಷ್ಟೊಂದು ಹೆಚ್ಚಾದರೆ ಜನರು ಯಮದೀಪ ಹಚ್ಚುವುದಾದರೂ ಹೇಗೆ ಎಂದು ಪ್ರಶ್ನಿಸಿದೆ.

ಇದೇ ವೇಳೆ ಬೆಲೆ ಏರಿಕೆ ಕುರಿತು ಹಾಸ್ಯಮಿಶ್ರಿತವಾಗಿ ಪ್ರತಿಕ್ರಿಯಿಸಿದ ನ್ಯಾಯಪೀಠ, ಯಮದೀಪ ಹಚ್ಚುವ ಬದಲು ನನ್ನನ್ನೇ ಕರೆದುಕೊಂಡು ಹೋಗು ಎಂದು ಯಮನಿಗೆ ಹೇಳಬೇಕಾದ ಪರಿಸ್ಥಿತಿ ಬಂದಿದೆ. ಅಗತ್ಯ ವಸ್ತುಗಳ ಬೆಲೆ ಇದೇ ರೀತಿ ಏರಿಕೆಯಾಗುತ್ತಾ ಹೋದರೆ ಮನುಷ್ಯ ಎಲ್ಲಿಗೆ ಹೋಗಬೇಕು? ಸಾಮಾನ್ಯ ಜನರು ಜೀವನ ಸಾಗಿಸುವುದಾದರೂ ಹೇಗೆ ಎಂದು ಕಳವಳ ವ್ಯಕ್ತಪಡಿಸಿದೆ.

ಅಕ್ಕಿಯ ಬೆಲೆ ಏರಿಕೆಯನ್ನೂ ಪ್ರಸ್ತಾಪಿಸಿರುವ ನ್ಯಾಯಪೀಠ, ಒಂದು ಕೆ.ಜಿ. ಅಕ್ಕಿಯ ಬೆಲೆ 103 ರೂಪಾಯಿಗೆ ತಲುಪಿದೆ ಎಂಬ ವಿಚಾರವನ್ನು ಗಮನಕ್ಕೆ ತಂದಿದೆ. ದಿನನಿತ್ಯದ ಆಹಾರ ಪದಾರ್ಥಗಳ ಬೆಲೆ ಹೆಚ್ಚಾಗುತ್ತಿರುವುದರಿಂದ ಜನಸಾಮಾನ್ಯರ ಮೇಲೆ ಆರ್ಥಿಕ ಹೊರೆ ಹೆಚ್ಚುತ್ತಿದೆ ಎಂಬ ಆತಂಕ ವ್ಯಕ್ತಪಡಿಸಿದೆ.

ಇದರ ಜೊತೆಗೆ ಹಾಲಿನ ದರ ಹಾಗೂ ಬಸ್ ಟಿಕೆಟ್ ದರ ಹೆಚ್ಚಳದ ಬಗ್ಗೆಯೂ ನ್ಯಾಯಪೀಠ ಅಸಮಾಧಾನ ವ್ಯಕ್ತಪಡಿಸಿದೆ. ಒಂದು ಕಡೆ ಸರ್ಕಾರ ಉಚಿತ ಯೋಜನೆಗಳನ್ನು ನೀಡುತ್ತಿದ್ದರೆ, ಮತ್ತೊಂದೆಡೆ ಹಾಲು, ಅಕ್ಕಿ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಹೆಚ್ಚಾಗುತ್ತಿದೆ. ದಿನಸಿ ಖರೀದಿಸಲು ಹೊರಗೆ ಹೋಗುವ ಜನರು ಬಸ್ ಪ್ರಯಾಣಕ್ಕೂ ಹೆಚ್ಚುವರಿ ಹಣ ಪಾವತಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ.

ಇನ್ನು ಕಬ್ಬಿನ ಬೆಲೆ ಹಾಗೂ ಸಕ್ಕರೆ ದರದ ವಿಚಾರವನ್ನೂ ನ್ಯಾಯಪೀಠ ಪ್ರಸ್ತಾಪಿಸಿದೆ. ಸರ್ಕಾರ ಪ್ರತಿ ಟನ್ ಕಬ್ಬಿಗೆ 3,600 ರೂಪಾಯಿ ಬೆಲೆ ಘೋಷಿಸಿದೆ. ಆದರೆ ದೀಪಾವಳಿ ಹಬ್ಬ ಮುಗಿದ ನಂತರ ಒಂದು ಕೆ.ಜಿ. ಸಕ್ಕರೆಯ ಬೆಲೆ 90 ರೂಪಾಯಿಗೆ ಏರಿಕೆಯಾಗಬಹುದು ಎಂಬ ಆತಂಕವನ್ನೂ ವ್ಯಕ್ತಪಡಿಸಿದೆ.

Tags: BreakingNewsJustice SreeshanandaKarnatakaKarnataka Guarantee SchemesKarnataka High Court Price Hike RemarksNewsHeadlinesVijayasakshivijayasakshinews
ShareSendShare
Previous Post

ಪೆಟ್ರೋಲ್ ನಲ್ಲಿ ಶೇ.20ಕ್ಕಿಂತ ಹೆಚ್ಚು ಎಥೆನಾಲ್ ಮಿಶ್ರಣ? ಲ್ಯಾಬ್ ವರದಿ ಬಿಡುಗಡೆ ಮಾಡಿ ಕೇಂದ್ರದ ವಿರುದ್ಧ ರಿಜ್ವಾನ್ ಅರ್ಷದ್ ಆಕ್ರೋಶ

Next Post

ಅಡಿಕೆ ಸುಲಿಯಲು ಹೋದ ಇಬ್ಬರು ಕಾರ್ಮಿಕರು ಶವವಾಗಿ ಪತ್ತೆ! ನೀರಿನ ತೊಟ್ಟಿಯಲ್ಲಿ ಮೃತದೇಹ

Vijaya Sakshi News Desk

Vijaya Sakshi News Desk

Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

Next Post
ಹಣಕ್ಕಾಗಿ ‘ಅಪಘಾತ’ದ ಸ್ಕೆಚ್: ಬೆಂಗಳೂರಿನಲ್ಲಿ ಒಂಟಿ ಮಹಿಳೆ ಮೇಲೆ ಬೈಕ್ ಹರಿಸಿ ಕೊಲೆ, ರಕ್ಷಕರಂತೆ ನಟಿಸಿದ ಗ್ಯಾಂಗ್ ಅರೆಸ್ಟ್

ಅಡಿಕೆ ಸುಲಿಯಲು ಹೋದ ಇಬ್ಬರು ಕಾರ್ಮಿಕರು ಶವವಾಗಿ ಪತ್ತೆ! ನೀರಿನ ತೊಟ್ಟಿಯಲ್ಲಿ ಮೃತದೇಹ

Stay Connected test

  • 24k Followers
  • 99 Subscribers
  • Trending
  • Comments
  • Latest

ಪೊಲೀಸ್ ವೇಷದಲ್ಲಿ ಅಮಾಯಕರಿಗೆ ಬೆದರಿಕೆ: ಸಂಜಯ ಕೊಪ್ಪದ ಬಂಧನಕ್ಕೆ ಸರ್ಕಾರದ ಮುದ್ರೆ

October 24, 2026
ಲಕ್ಷ್ಮೇಶ್ವರ, ಶಿರಹಟ್ಟಿಯಲ್ಲಿ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಪರಿಶೀಲನೆ

ಲಕ್ಷ್ಮೇಶ್ವರ, ಶಿರಹಟ್ಟಿಯಲ್ಲಿ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಪರಿಶೀಲನೆ

November 4, 2026
ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

October 23, 2026
Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

October 25, 2026
Single Post Template – Fast News

ದೇವಸ್ಥಾನದಲ್ಲಿ 3 ಕೊಲೆ: ಹುಂಡಿಗಳ್ಳರ ಅಮಾನುಷ ಕೃತ್ಯ

0
Single Post Template – Fast News

ಕೋಡಿಹಳ್ಳಿಯವರಿಗೆ ಇಷ್ಟೊಂದು ಅಜ್ಞಾನ ಇದೆ ಅಂತ ಗೊತ್ತಿರಲಿಲ್ಲ: ಬಿ.ಸಿ.ಪಾಟೀಲ

0
Single Post Template – Fast News

ಕತ್ತಲಲ್ಲಿ ಕ್ವಾರಂಟೈನ್ ಸೆಂಟರ್; ಪರದಾಡಿದ ಕೊವಿಡ್ ರೋಗಿಗಳು!

0
Single Post Template – Fast News

ನಗರಸಭೆ ಆಯುಕ್ತರ ಕುರ್ಚಿ ಮಾರಾಟವಾಯ್ತೆ?
ಉಸ್ತುವಾರಿ ಸಚಿವರು ತಮ್ಮ ಹಠ ಸಾಧಿಸಿಯೇ ಬಿಟ್ಟರೆ?

0
ಮೆಡಿಕಲ್ ಕಾಲೇಜು & ಆಸ್ಪತ್ರೆಗೆ ಬಾಂಬ್ ಬೆದರಿಕೆ ಕರೆ ಪ್ರಕರಣಕ್ಕೆ ಟ್ವಿಸ್ಟ್: ವಿದ್ಯಾರ್ಥಿನಿಯಿಂದಲೇ ಕೃತ್ಯ!

ಹುಬ್ಬಳ್ಳಿ, ಬೆಳಗಾವಿ ಪಾಲಿಕೆಗಳಿಗೆ ಬಾಂಬ್ ಬೆದರಿಕೆ! ಬೆಂಗಳೂರು ಮೆಟ್ರೋ, ದಿಲ್ಜಿತ್ ದೋಸಾಂಜ್ ಸಂಗೀತ ಕಾರ್ಯಕ್ರಮಕ್ಕೂ ಸ್ಫೋಟದ ಬೆದರಿಕೆ

November 9, 2026

ಹಾಸನಾಂಬೆ ತಾಯಿ ಮೇಲೆ ಆಣೆ, ಒಂದು ಪೈಸೆ ಮುಟ್ಟಿದ್ದರೆ ನನ್ನನ್ನೇ ನೋಡಿಕೊಳ್ಳಲಿ: ಹೆಚ್ ಡಿಕೆ ಆರೋಪಕ್ಕೆ ಶಿವಲಿಂಗೇಗೌಡ ತಿರುಗೇಟು

November 9, 2026
ಭೀಕರ ಹಿಟ್ ಆ್ಯಂಡ್ ರನ್: ಇಬ್ಬರು ಸಾವು, ಕಿಲೋಮೀಟರ್‌ಗಟ್ಟಲೆ ಬೆನ್ನಟ್ಟಿ ಚಾಲಕನನ್ನು ಬಂಧಿಸಿದ ಪೊಲೀಸರು!

ಭೀಕರ ಹಿಟ್ ಆ್ಯಂಡ್ ರನ್: ಇಬ್ಬರು ಸಾವು, ಕಿಲೋಮೀಟರ್‌ಗಟ್ಟಲೆ ಬೆನ್ನಟ್ಟಿ ಚಾಲಕನನ್ನು ಬಂಧಿಸಿದ ಪೊಲೀಸರು!

November 9, 2026
ಸಿದ್ದರಾಮಯ್ಯ ಸ್ಟಿಂಗ್ ಆಪರೇಷನ್ ಪ್ರಕರಣ: ಸಿಸಿಬಿ ವಿಚಾರಣೆಗೆ ಹಾಜರಾದ ಕೃಪಾ ಆಳ್ವಾ

ಸಿದ್ದರಾಮಯ್ಯ ಸ್ಟಿಂಗ್ ಆಪರೇಷನ್ ಪ್ರಕರಣ: ಸಿಸಿಬಿ ವಿಚಾರಣೆಗೆ ಹಾಜರಾದ ಕೃಪಾ ಆಳ್ವಾ

November 9, 2026

Recent News

We bring you the best Premium WordPress Themes that perfect for news, magazine, personal blog, etc. Check our landing page for details.

Browse by Category

Recent News

ಮೆಡಿಕಲ್ ಕಾಲೇಜು & ಆಸ್ಪತ್ರೆಗೆ ಬಾಂಬ್ ಬೆದರಿಕೆ ಕರೆ ಪ್ರಕರಣಕ್ಕೆ ಟ್ವಿಸ್ಟ್: ವಿದ್ಯಾರ್ಥಿನಿಯಿಂದಲೇ ಕೃತ್ಯ!

ಹುಬ್ಬಳ್ಳಿ, ಬೆಳಗಾವಿ ಪಾಲಿಕೆಗಳಿಗೆ ಬಾಂಬ್ ಬೆದರಿಕೆ! ಬೆಂಗಳೂರು ಮೆಟ್ರೋ, ದಿಲ್ಜಿತ್ ದೋಸಾಂಜ್ ಸಂಗೀತ ಕಾರ್ಯಕ್ರಮಕ್ಕೂ ಸ್ಫೋಟದ ಬೆದರಿಕೆ

November 9, 2026

ಹಾಸನಾಂಬೆ ತಾಯಿ ಮೇಲೆ ಆಣೆ, ಒಂದು ಪೈಸೆ ಮುಟ್ಟಿದ್ದರೆ ನನ್ನನ್ನೇ ನೋಡಿಕೊಳ್ಳಲಿ: ಹೆಚ್ ಡಿಕೆ ಆರೋಪಕ್ಕೆ ಶಿವಲಿಂಗೇಗೌಡ ತಿರುಗೇಟು

November 9, 2026
  • About
  • Advertise
  • Privacy & Policy
  • Contact

Vijaya Sakshi 2026 CREATED BY Kalahamsa Infotech. PREMIUM WEBSITE SOLUTIONS.

error: Content is protected !!
Join WhatsApp ▤ Read E-Paper