ಬೆಂಗಳೂರು: ರಾಜ್ಯದಲ್ಲಿ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR) ಬಳಿಕ ಮುಸ್ಲಿಂ ಮತದಾರರ ಸಂಖ್ಯೆಯಲ್ಲಿ ಗಣನೀಯ ಇಳಿಕೆ ದಾಖಲಾಗಿದೆ.

ಪರಿಷ್ಕರಣೆಗೂ ಮುನ್ನ ರಾಜ್ಯದಲ್ಲಿ 71.56 ಲಕ್ಷ ಮುಸ್ಲಿಂ ಮತದಾರರಿದ್ದರು. ಆದರೆ ಎಸ್ಐಆರ್ ಪ್ರಕ್ರಿಯೆ ಬಳಿಕ ಈ ಸಂಖ್ಯೆ 58.08 ಲಕ್ಷಕ್ಕೆ ಇಳಿಕೆಯಾಗಿದೆ. ಈ ಮೂಲಕ ಒಟ್ಟು 13.48 ಲಕ್ಷ ಮುಸ್ಲಿಂ ಮತದಾರರ ಸಂಖ್ಯೆ ಕಡಿಮೆಯಾಗಿದೆ.
ಅಂಕಿಅಂಶಗಳ ಪ್ರಕಾರ, ರಾಜ್ಯದಲ್ಲಿ ಮುಸ್ಲಿಂ ಮತದಾರರ ಸಂಖ್ಯೆಯಲ್ಲಿ ಶೇಕಡಾ 18.84ರಷ್ಟು ಇಳಿಕೆಯಾಗಿದೆ. ಇದೇ ವೇಳೆ ಮುಸ್ಲಿಮೇತರ ಮತದಾರರ ಸಂಖ್ಯೆಯಲ್ಲಿಯೂ ಸುಮಾರು 86 ಲಕ್ಷದಷ್ಟು ಇಳಿಕೆಯಾಗಿದೆ ಎಂದು ತಿಳಿದುಬಂದಿದೆ.
ಇನ್ನು ರಾಜಧಾನಿ ಬೆಂಗಳೂರಿನಲ್ಲಿ ಮುಸ್ಲಿಂ ಮತದಾರರ ಇಳಿಕೆ ಪ್ರಮಾಣ ರಾಜ್ಯದ ಸರಾಸರಿಗಿಂತ ಹೆಚ್ಚಾಗಿದೆ. ಎಸ್ಐಆರ್ಗೂ ಮುನ್ನ ಬೆಂಗಳೂರಿನಲ್ಲಿ 13.67 ಲಕ್ಷ ಮುಸ್ಲಿಂ ಮತದಾರರಿದ್ದರು. ಇದೀಗ ಈ ಸಂಖ್ಯೆ 9.06 ಲಕ್ಷಕ್ಕೆ ಇಳಿಕೆಯಾಗಿದ್ದು, ಶೇಕಡಾ 33.72ರಷ್ಟು ಕುಸಿತ ಕಂಡಿದೆ.
ಮತ್ತೊಂದೆಡೆ, ಕಾಂಗ್ರೆಸ್ನ 10 ಶಾಸಕರ ಕ್ಷೇತ್ರಗಳಲ್ಲಿಯೂ ಮುಸ್ಲಿಂ ಮತದಾರರ ಸಂಖ್ಯೆಯಲ್ಲಿ ಭಾರಿ ಇಳಿಕೆ ದಾಖಲಾಗಿದೆ. ಈ ಅಂಕಿಅಂಶಗಳು ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿವೆ.








