ನವದೆಹಲಿ: ಕೋಲ್ಕತ್ತಾದಿಂದ ಮುಂಬೈಗೆ ತೆರಳಬೇಕಿದ್ದ ಏರ್ ಇಂಡಿಯಾ (ವಿಸ್ತಾರಾ) ವಿಮಾನಕ್ಕೆ ಹೈಜಾಕ್ ಬೆದರಿಕೆ ಹಾಕಿರುವ ಪತ್ರ ಪತ್ತೆಯಾಗಿದ್ದು, ವಿಮಾನ ನಿಲ್ದಾಣದಲ್ಲಿ ಭದ್ರತಾ ಎಚ್ಚರಿಕೆ ಘೋಷಿಸಲಾಗಿದೆ.

ವಿಮಾನ ಹಾರಾಟ ಆರಂಭಿಸುವುದಕ್ಕೂ ಮುನ್ನವೇ ಹೈಜಾಕ್ ಬೆದರಿಕೆಯ ಪತ್ರ ಪತ್ತೆಯಾಗಿದೆ. ಈ ಬಗ್ಗೆ ಪೈಲಟ್ ಏರ್ ಟ್ರಾಫಿಕ್ ಕಂಟ್ರೋಲ್ಗೆ (ATC) ಮಾಹಿತಿ ನೀಡಿದ್ದಾರೆ. ಬಳಿಕ ಮುನ್ನೆಚ್ಚರಿಕೆ ಕ್ರಮವಾಗಿ ವಿಮಾನದಲ್ಲಿ ಭದ್ರತಾ ಎಚ್ಚರಿಕೆ ಘೋಷಿಸಲಾಯಿತು.
ಇದರ ಬೆನ್ನಲ್ಲೇ ವಿಮಾನದಲ್ಲಿದ್ದ ಎಲ್ಲಾ ಪ್ರಯಾಣಿಕರನ್ನು ಸುರಕ್ಷಿತವಾಗಿ ಕೆಳಗಿಳಿಸಲಾಯಿತು. ನಂತರ ಭದ್ರತಾ ತಪಾಸಣೆ ನಡೆಸುವ ಉದ್ದೇಶದಿಂದ ವಿಮಾನವನ್ನು ಪ್ರತ್ಯೇಕ ಸ್ಥಳದಲ್ಲಿರುವ ಐಸೋಲೇಷನ್ ಬೇಗೆ ಸ್ಥಳಾಂತರಿಸಲಾಯಿತು.
ಘಟನೆಗೆ ಸಂಬಂಧಿಸಿದಂತೆ ಅಧಿಕಾರಿಗಳಿಂದ ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ. ಬೆದರಿಕೆ ಪತ್ರದ ಮೂಲ ಹಾಗೂ ಅದರ ವಿಶ್ವಾಸಾರ್ಹತೆ ಕುರಿತು ಇನ್ನಷ್ಟೇ ಸ್ಪಷ್ಟತೆ ಸಿಗಬೇಕಿದೆ.










