• About
  • Advertise
  • Privacy & Policy
  • Contact
Thursday, November 12, 2026
Vijaya Sakshi News
Advertisement
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
Vijaya Sakshi News
  • Home
  • Gadag News
  • Karnataka News
  • Crime News
  • Politics News
  • Bengaluru News
  • Entertainment
  • Life Style
  • Sports News
Home Sports News

ಟೀಂ ಇಂಡಿಯಾದಲ್ಲಿ ಮಹತ್ವದ ಬದಲಾವಣೆ; ಕೊನೆಯ ಎರಡು ಪಂದ್ಯಗಳಿಗೆ ಶ್ರೇಯಸ್ ಅಯ್ಯರ್ʼಗೆ ನಾಯಕತ್ವದ ಹೊಣೆ!

Vijaya Sakshi News Desk by Vijaya Sakshi News Desk
November 11, 2026
in Sports News
ಟೀಂ ಇಂಡಿಯಾದಲ್ಲಿ ಮಹತ್ವದ ಬದಲಾವಣೆ; ಕೊನೆಯ ಎರಡು ಪಂದ್ಯಗಳಿಗೆ ಶ್ರೇಯಸ್ ಅಯ್ಯರ್ʼಗೆ ನಾಯಕತ್ವದ ಹೊಣೆ!
0
SHARES
2
VIEWS
Share on Facebook

ನವದೆಹಲಿ: ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಯ ಅಂತಿಮ ಎರಡು ಪಂದ್ಯಗಳಿಗೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಪರಿಷ್ಕೃತ ತಂಡವನ್ನು ಪ್ರಕಟಿಸಿದೆ. ಮುಂಬರುವ ಟೆಸ್ಟ್ ಸರಣಿಯ ಸಿದ್ಧತೆಯ ಹಿನ್ನೆಲೆಯಲ್ಲಿ ಮೊದಲ ಮೂರು ಪಂದ್ಯಗಳ ತಂಡದಲ್ಲಿದ್ದ ನಾಲ್ವರು ಆಟಗಾರರನ್ನು ಕೊನೆಯ ಎರಡು ಪಂದ್ಯಗಳಿಂದ ಕೈಬಿಡಲಾಗಿದೆ. ಅವರ ಬದಲಿಗೆ ನಾಲ್ವರು ಹೊಸ ಆಟಗಾರರಿಗೆ ಅವಕಾಶ ನೀಡಲಾಗಿದೆ.

ನವೆಂಬರ್ 19ರಿಂದ ಆರಂಭವಾಗಲಿರುವ ಟೆಸ್ಟ್ ಸರಣಿಯನ್ನು ಗಮನದಲ್ಲಿಟ್ಟುಕೊಂಡು ಪ್ರಮುಖ ಆಟಗಾರರಿಗೆ ವಿಶ್ರಾಂತಿ ನೀಡಲಾಗಿದೆ ಎನ್ನಲಾಗಿದೆ. ಅದರಂತೆ ಮೊದಲ ಮೂರು ಏಕದಿನ ಪಂದ್ಯಗಳಿಗೆ ಪ್ರಕಟಿಸಿದ್ದ ತಂಡದಲ್ಲಿದ್ದ ನಾಯಕ ಶುಭ್ಮನ್ ಗಿಲ್, ವಿಕೆಟ್ ಕೀಪರ್ ಕೆ.ಎಲ್. ರಾಹುಲ್, ವೇಗದ ಬೌಲರ್‌ಗಳಾದ ಅನ್ಶುಲ್ ಕಂಬೋಜ್ ಮತ್ತು ಪ್ರಸಿದ್ಧ್ ಕೃಷ್ಣ ಕೊನೆಯ ಎರಡು ಪಂದ್ಯಗಳಿಗೆ ಅಲಭ್ಯರಾಗಿದ್ದಾರೆ.

ನಾಲ್ವರು ಹೊಸ ಆಟಗಾರರಿಗೆ ಅವಕಾಶ

ತಂಡದಿಂದ ಹೊರಗುಳಿದಿರುವ ಆಟಗಾರರ ಸ್ಥಾನಕ್ಕೆ ತಿಲಕ್ ವರ್ಮಾ, ವಿಕೆಟ್ ಕೀಪರ್ ಕುಮಾರ್ ಕುಶಾಗ್ರ, ವೇಗಿ ಯಶ್ ಠಾಕೂರ್ ಹಾಗೂ ಆಖಿಬ್ ನಬಿ ಅವರನ್ನು ಆಯ್ಕೆ ಮಾಡಲಾಗಿದೆ. ಈ ಮೂಲಕ ಯುವ ಆಟಗಾರರಿಗೆ ತಮ್ಮ ಸಾಮರ್ಥ್ಯ ಪ್ರದರ್ಶಿಸಲು ಅವಕಾಶ ಕಲ್ಪಿಸಲಾಗಿದೆ.

ಶ್ರೇಯಸ್ ಅಯ್ಯರ್‌ಗೆ ನಾಯಕತ್ವದ ಹೊಣೆ

ಶುಭ್ಮನ್ ಗಿಲ್ ಅನುಪಸ್ಥಿತಿಯಲ್ಲಿ ಅನುಭವಿ ಬ್ಯಾಟರ್ ಶ್ರೇಯಸ್ ಅಯ್ಯರ್ ತಂಡವನ್ನು ಮುನ್ನಡೆಸಲಿದ್ದಾರೆ. ವಿಕೆಟ್ ಕೀಪರ್ ಬ್ಯಾಟರ್ ಇಶಾನ್ ಕಿಶನ್ ಅವರಿಗೆ ಉಪನಾಯಕನ ಜವಾಬ್ದಾರಿ ನೀಡಲಾಗಿದೆ.

ಕೊನೆಯ ಎರಡು ಪಂದ್ಯಗಳಿಗೆ ಭಾರತ ತಂಡ

ಶ್ರೇಯಸ್ ಅಯ್ಯರ್ (ನಾಯಕ), ಇಶಾನ್ ಕಿಶನ್ (ಉಪನಾಯಕ), ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ತಿಲಕ್ ವರ್ಮಾ, ರುತುರಾಜ್ ಗಾಯಕ್ವಾಡ್, ನಿತೀಶ್ ಕುಮಾರ್ ರೆಡ್ಡಿ, ಅಕ್ಷರ್ ಪಟೇಲ್, ನಮನ್ ಧೀರ್, ಕುಮಾರ್ ಕುಶಾಗ್ರ (ವಿಕೆಟ್ ಕೀಪರ್), ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಅರ್ಷದೀಪ್ ಸಿಂಗ್, ಯಶ್ ಠಾಕೂರ್, ಗುರ್ನೂರ್ ಬ್ರಾರ್ ಮತ್ತು ಆಖಿಬ್ ನಬಿ.

ಕೊನೆಯ ಎರಡು ಪಂದ್ಯಗಳು ಯಾವಾಗ?

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಏಕದಿನ ಸರಣಿಯ ನಾಲ್ಕನೇ ಪಂದ್ಯ ನವೆಂಬರ್ 13ರಂದು ಹಾಗೂ ಐದನೇ ಪಂದ್ಯ ನವೆಂಬರ್ 15ರಂದು ನಡೆಯಲಿದೆ. ಮೌಂಟ್ ಮೌಂಗನುಯಿಯ ಬೇ ಓವಲ್ ಮೈದಾನ ಈ ಎರಡೂ ಪಂದ್ಯಗಳಿಗೆ ಆತಿಥ್ಯ ವಹಿಸಲಿದೆ.

ಮೊದಲ ಮೂರು ಪಂದ್ಯಗಳಲ್ಲಿ ಎರಡು ಗೆಲುವು ದಾಖಲಿಸಿರುವ ಭಾರತ, ನಾಲ್ಕನೇ ಪಂದ್ಯ ಗೆದ್ದರೆ ಸರಣಿಯನ್ನು ತನ್ನದಾಗಿಸಿಕೊಳ್ಳಲಿದೆ. ಸರಣಿಯನ್ನು ಡ್ರಾದಲ್ಲಿ ಅಂತ್ಯಗೊಳಿಸಲು ನ್ಯೂಜಿಲೆಂಡ್ ತಂಡ ಉಳಿದ ಎರಡೂ ಪಂದ್ಯಗಳನ್ನು ಗೆಲ್ಲಬೇಕಿದೆ. ಹೀಗಾಗಿ ಅಂತಿಮ ಎರಡು ಪಂದ್ಯಗಳು ಉಭಯ ತಂಡಗಳಿಗೂ ಮಹತ್ವದ್ದಾಗಿವೆ.

Tags: BCCI Squad UpdateBreakingNewsIndia vs New ZealandKarnatakaKL RahulNewsHeadlinesShreyas Iyer CaptainShubman GillTeam India ODI SquadVijayasakshivijayasakshinews
ShareSendShare
Previous Post

ರಾಯಚೂರು ಕೃಷಿ ವಿವಿ ನೇಮಕಾತಿಯಲ್ಲಿ ಮತ್ತೊಂದು ಮಹಾ ಯಡವಟ್ಟು ಬಯಲು!

Next Post

ಊರಿಗೆ ಬೆಳಕು ತಂದ ದೀಪಾವಳಿ ರೈತನ ಬಾಳಿಗೆ ಕತ್ತಲು! ಆಕಾಶಬುಟ್ಟಿಯ ಕಿಡಿಗೆ ನಾಲ್ಕೈದು ಎಕರೆ ಕಬ್ಬಿನ ಬೆಳೆ ಸುಟ್ಟು ಕರಕಲು

Vijaya Sakshi News Desk

Vijaya Sakshi News Desk

Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

Next Post
ಊರಿಗೆ ಬೆಳಕು ತಂದ ದೀಪಾವಳಿ ರೈತನ ಬಾಳಿಗೆ ಕತ್ತಲು! ಆಕಾಶಬುಟ್ಟಿಯ ಕಿಡಿಗೆ ನಾಲ್ಕೈದು ಎಕರೆ ಕಬ್ಬಿನ ಬೆಳೆ ಸುಟ್ಟು ಕರಕಲು

ಊರಿಗೆ ಬೆಳಕು ತಂದ ದೀಪಾವಳಿ ರೈತನ ಬಾಳಿಗೆ ಕತ್ತಲು! ಆಕಾಶಬುಟ್ಟಿಯ ಕಿಡಿಗೆ ನಾಲ್ಕೈದು ಎಕರೆ ಕಬ್ಬಿನ ಬೆಳೆ ಸುಟ್ಟು ಕರಕಲು

Stay Connected test

  • 24k Followers
  • 99 Subscribers
  • Trending
  • Comments
  • Latest

ಪೊಲೀಸ್ ವೇಷದಲ್ಲಿ ಅಮಾಯಕರಿಗೆ ಬೆದರಿಕೆ: ಸಂಜಯ ಕೊಪ್ಪದ ಬಂಧನಕ್ಕೆ ಸರ್ಕಾರದ ಮುದ್ರೆ

October 24, 2026
ಲಕ್ಷ್ಮೇಶ್ವರ, ಶಿರಹಟ್ಟಿಯಲ್ಲಿ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಪರಿಶೀಲನೆ

ಲಕ್ಷ್ಮೇಶ್ವರ, ಶಿರಹಟ್ಟಿಯಲ್ಲಿ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಪರಿಶೀಲನೆ

November 4, 2026
ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

October 23, 2026
Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

October 25, 2026
Single Post Template – Fast News

ದೇವಸ್ಥಾನದಲ್ಲಿ 3 ಕೊಲೆ: ಹುಂಡಿಗಳ್ಳರ ಅಮಾನುಷ ಕೃತ್ಯ

0
Single Post Template – Fast News

ಕೋಡಿಹಳ್ಳಿಯವರಿಗೆ ಇಷ್ಟೊಂದು ಅಜ್ಞಾನ ಇದೆ ಅಂತ ಗೊತ್ತಿರಲಿಲ್ಲ: ಬಿ.ಸಿ.ಪಾಟೀಲ

0
Single Post Template – Fast News

ಕತ್ತಲಲ್ಲಿ ಕ್ವಾರಂಟೈನ್ ಸೆಂಟರ್; ಪರದಾಡಿದ ಕೊವಿಡ್ ರೋಗಿಗಳು!

0
Single Post Template – Fast News

ನಗರಸಭೆ ಆಯುಕ್ತರ ಕುರ್ಚಿ ಮಾರಾಟವಾಯ್ತೆ?
ಉಸ್ತುವಾರಿ ಸಚಿವರು ತಮ್ಮ ಹಠ ಸಾಧಿಸಿಯೇ ಬಿಟ್ಟರೆ?

0
ನಾಗೇಂದ್ರ ರಾಜೀನಾಮೆ ಬಿಜೆಪಿ-ಜೆಡಿಎಸ್ ಹೋರಾಟದ ಫಲ: ಆರ್‌. ಅಶೋಕ್

ಎಥೆನಾಲ್ ಪೆಟ್ರೋಲ್ ವಿವಾದ: ಮೈಲೇಜ್ ಕಡಿಮೆಯಾಗಲು ರಸ್ತೆ ಗುಂಡಿಗಳೇ ಕಾರಣ – ಕಾಂಗ್ರೆಸ್ ಆರೋಪಕ್ಕೆ ಅಶೋಕ್ ತಿರುಗೇಟು

November 12, 2026
ಪ್ರಶ್ನೆಪತ್ರಿಕೆ ಸೋರಿಕೆ ವಿರುದ್ಧ ಕೇಂದ್ರದ ಬಿಗ್ ಸ್ಟೆಪ್: 10 ವರ್ಷ ಜೈಲು, ₹1 ಕೋಟಿ ದಂಡಕ್ಕೆ ಕಠಿಣ ಕಾನೂನು!

12 ವರ್ಷಗಳಲ್ಲಿ 50 ಕೋಟಿ ಜನರು ಬಡತನದಿಂದ ಹೊರಬಂದಿದ್ದಾರೆ; ವಿಶ್ವಬ್ಯಾಂಕ್ ವರದಿ ಉಲ್ಲೇಖಿಸಿ ಪ್ರಧಾನಿ ಮೋದಿ ಹೇಳಿಕೆ

November 12, 2026
ಬಾಕ್ಸ್ ಆಫೀಸ್‌ನಲ್ಲಿ ‘ರಾಮಾಯಣ’ ಅಬ್ಬರ: 7 ದಿನಕ್ಕೆ 934 ಕೋಟಿ ರೂ. ಗಳಿಕೆ, 1000 ಕೋಟಿಯತ್ತ ಯಶ್ ಸಿನಿಮಾ!

ಬಾಕ್ಸ್ ಆಫೀಸ್‌ನಲ್ಲಿ ‘ರಾಮಾಯಣ’ ಅಬ್ಬರ: 7 ದಿನಕ್ಕೆ 934 ಕೋಟಿ ರೂ. ಗಳಿಕೆ, 1000 ಕೋಟಿಯತ್ತ ಯಶ್ ಸಿನಿಮಾ!

November 12, 2026
ಲಕ್ಷ್ಮೀ ಪೂಜೆ ಮಾಡಿದ್ರೆ ಹಣದ ಮಳೆ ಸುರಿಯುತ್ತೆಂದು ಯುವತಿಯರಿಗೆ ಬಲೆ: ಹೈಟೆಕ್ ವೇಶ್ಯಾವಾಟಿಕೆ ಜಾಲ ಬಯಲು; 11 ಮಂದಿ ಬಂಧನ!

ಲಕ್ಷ್ಮೀ ಪೂಜೆ ಮಾಡಿದ್ರೆ ಹಣದ ಮಳೆ ಸುರಿಯುತ್ತೆಂದು ಯುವತಿಯರಿಗೆ ಬಲೆ: ಹೈಟೆಕ್ ವೇಶ್ಯಾವಾಟಿಕೆ ಜಾಲ ಬಯಲು; 11 ಮಂದಿ ಬಂಧನ!

November 12, 2026

Recent News

We bring you the best Premium WordPress Themes that perfect for news, magazine, personal blog, etc. Check our landing page for details.

Browse by Category

Recent News

ನಾಗೇಂದ್ರ ರಾಜೀನಾಮೆ ಬಿಜೆಪಿ-ಜೆಡಿಎಸ್ ಹೋರಾಟದ ಫಲ: ಆರ್‌. ಅಶೋಕ್

ಎಥೆನಾಲ್ ಪೆಟ್ರೋಲ್ ವಿವಾದ: ಮೈಲೇಜ್ ಕಡಿಮೆಯಾಗಲು ರಸ್ತೆ ಗುಂಡಿಗಳೇ ಕಾರಣ – ಕಾಂಗ್ರೆಸ್ ಆರೋಪಕ್ಕೆ ಅಶೋಕ್ ತಿರುಗೇಟು

November 12, 2026
ಪ್ರಶ್ನೆಪತ್ರಿಕೆ ಸೋರಿಕೆ ವಿರುದ್ಧ ಕೇಂದ್ರದ ಬಿಗ್ ಸ್ಟೆಪ್: 10 ವರ್ಷ ಜೈಲು, ₹1 ಕೋಟಿ ದಂಡಕ್ಕೆ ಕಠಿಣ ಕಾನೂನು!

12 ವರ್ಷಗಳಲ್ಲಿ 50 ಕೋಟಿ ಜನರು ಬಡತನದಿಂದ ಹೊರಬಂದಿದ್ದಾರೆ; ವಿಶ್ವಬ್ಯಾಂಕ್ ವರದಿ ಉಲ್ಲೇಖಿಸಿ ಪ್ರಧಾನಿ ಮೋದಿ ಹೇಳಿಕೆ

November 12, 2026
  • About
  • Advertise
  • Privacy & Policy
  • Contact

Vijaya Sakshi 2026 CREATED BY Kalahamsa Infotech. PREMIUM WEBSITE SOLUTIONS.

error: Content is protected !!
Join WhatsApp ▤ Read E-Paper