• About
  • Advertise
  • Privacy & Policy
  • Contact
Saturday, November 14, 2026
Vijaya Sakshi News
Advertisement
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
Vijaya Sakshi News
  • Home
  • Gadag News
  • Karnataka News
  • Crime News
  • Politics News
  • Bengaluru News
  • Entertainment
  • Life Style
  • Sports News
Home Karnataka News

ತಾಯಿಯ ಅಂತಿಮ ದರ್ಶನಕ್ಕೆ ಉಡುಪಿಗೆ ಬಂದ ಭೂಗತ ಪಾತಕಿ ರವಿ ಪೂಜಾರಿ; ಬಿಗಿ ಪೊಲೀಸ್ ಭದ್ರತೆ

Vijaya Sakshi News Desk by Vijaya Sakshi News Desk
November 14, 2026
in Karnataka News
ತಾಯಿಯ ಅಂತಿಮ ದರ್ಶನಕ್ಕೆ ಉಡುಪಿಗೆ ಬಂದ ಭೂಗತ ಪಾತಕಿ ರವಿ ಪೂಜಾರಿ; ಬಿಗಿ ಪೊಲೀಸ್ ಭದ್ರತೆ
0
SHARES
1
VIEWS
Share on Facebook

ಉಡುಪಿ: ತಾಯಿಯ ಅಂತಿಮ ದರ್ಶನ ಪಡೆದು ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಭೂಗತ ಪಾತಕಿ ರವಿ ಪೂಜಾರಿ ಉಡುಪಿಗೆ ಆಗಮಿಸಿದ್ದಾನೆ. ನ್ಯಾಯಾಲಯದ ವಿಶೇಷ ಅನುಮತಿ ಮೇರೆಗೆ ಬಿಗಿ ಪೊಲೀಸ್ ಭದ್ರತೆಯಲ್ಲಿ ಆತನನ್ನು ಬೆಂಗಳೂರಿನಿಂದ ಉಡುಪಿಗೆ ಕರೆತರಲಾಗಿದೆ.

ಹೃದಯಾಘಾತದಿಂದ ನಿಧನರಾದ ರವಿ ಪೂಜಾರಿಯ ತಾಯಿ ಸುಶೀಲಾ ಪೂಜಾರ್ತಿ (86) ಅವರ ಅಂತ್ಯಸಂಸ್ಕಾರ ಇಂದು ಮಲ್ಪೆಯ ನೆರ್ಗಿಯ ಹಿರಿಯ ಮನೆಯಲ್ಲಿ ನಡೆಯಲಿದೆ. ತಾಯಿಯ ಅಂತಿಮ ವಿಧಿವಿಧಾನಗಳಲ್ಲಿ ಪಾಲ್ಗೊಳ್ಳಲು ನ್ಯಾಯಾಲಯ ರವಿ ಪೂಜಾರಿಗೆ ಅನುಮತಿ ನೀಡಿದೆ.

ಬಿಗಿ ಪೊಲೀಸ್ ಭದ್ರತೆಯಲ್ಲಿ ಉಡುಪಿಗೆ ಆಗಮನ

ನ್ಯಾಯಾಲಯದ ನಿರ್ದೇಶನದಂತೆ ಬೆಂಗಳೂರಿನ ಸಿಟಿ ಆರ್ಮ್ಡ್ ರಿಸರ್ವ್ ಪೊಲೀಸರು ರವಿ ಪೂಜಾರಿಯನ್ನು ಉಡುಪಿಗೆ ಕರೆತಂದಿದ್ದಾರೆ. ಜೈಲು ಇಲಾಖೆಯಿಂದ ಬಿಗಿ ಭದ್ರತೆ ಒದಗಿಸಲಾಗಿದ್ದು, ಹೆಚ್ಚುವರಿಯಾಗಿ ಉಡುಪಿ ಜಿಲ್ಲಾ ಪೊಲೀಸ್ ಇಲಾಖೆಯೂ ಸ್ಥಳೀಯವಾಗಿ ಭದ್ರತಾ ವ್ಯವಸ್ಥೆ ಮಾಡಿದೆ.

ಅಂತ್ಯಕ್ರಿಯೆಯ ವಿಧಿವಿಧಾನಗಳು ಪೂರ್ಣಗೊಂಡ ಬಳಿಕ ರವಿ ಪೂಜಾರಿಯನ್ನು ಮತ್ತೆ ಬೆಂಗಳೂರಿಗೆ ಕರೆದೊಯ್ಯುವಂತೆ ನ್ಯಾಯಾಲಯ ಸೂಚಿಸಿದೆ. ಅಲ್ಲದೆ, ಪೊಲೀಸ್ ಎಸ್ಕಾರ್ಟ್ ಸೇರಿದಂತೆ ಭದ್ರತಾ ವ್ಯವಸ್ಥೆಯ ಸಂಪೂರ್ಣ ವೆಚ್ಚವನ್ನು ರವಿ ಪೂಜಾರಿಯೇ ಭರಿಸಬೇಕು ಎಂದು ನ್ಯಾಯಾಲಯ ಆದೇಶಿಸಿದೆ.

86ನೇ ವಯಸ್ಸಿನಲ್ಲಿ ತಾಯಿ ಸುಶೀಲಾ ಪೂಜಾರ್ತಿ ನಿಧನ

ರವಿ ಪೂಜಾರಿಯ ತಾಯಿ ಸುಶೀಲಾ ಪೂಜಾರ್ತಿ ಅವರು ಮೊನ್ನೆ ರಾತ್ರಿ ಹೃದಯಾಘಾತದಿಂದ ಮೃತಪಟ್ಟಿದ್ದರು. ಅವರಿಗೆ 86 ವರ್ಷ ವಯಸ್ಸಾಗಿತ್ತು. ಐವರು ಮಕ್ಕಳಲ್ಲಿ ಮೂವರು ಗಂಡು ಮಕ್ಕಳು ಮತ್ತು ಇಬ್ಬರು ಹೆಣ್ಣು ಮಕ್ಕಳಿದ್ದು, ರವಿ ಪೂಜಾರಿ ಅವರಲ್ಲಿ ಒಬ್ಬನಾಗಿದ್ದಾನೆ.

ತಾಯಿಯ ಅಂತಿಮ ಸಂಸ್ಕಾರದಲ್ಲಿ ಪಾಲ್ಗೊಳ್ಳುವ ಉದ್ದೇಶದಿಂದ ಸುಮಾರು 26 ವರ್ಷಗಳ ಬಳಿಕ ರವಿ ಪೂಜಾರಿ ಸ್ವಗ್ರಾಮಕ್ಕೆ ಆಗಮಿಸಿದ್ದಾನೆ ಎಂದು ವರದಿಯಾಗಿದೆ.

ರವಿ ಪೂಜಾರಿ ವಿರುದ್ಧ ಹಲವು ಗಂಭೀರ ಪ್ರಕರಣಗಳು

ಕೊಲೆ, ಕೊಲೆ ಯತ್ನ, ಸುಲಿಗೆ, ಹಫ್ತಾ ವಸೂಲಿ ಮತ್ತು ಜೀವ ಬೆದರಿಕೆ ಸೇರಿದಂತೆ ಹಲವು ಗಂಭೀರ ಪ್ರಕರಣಗಳಲ್ಲಿ ರವಿ ಪೂಜಾರಿ ಆರೋಪಿಯಾಗಿದ್ದಾನೆ. ಕರ್ನಾಟಕ, ಮಹಾರಾಷ್ಟ್ರ, ಆಂಧ್ರಪ್ರದೇಶ ಸೇರಿದಂತೆ ದೇಶದ ವಿವಿಧ ರಾಜ್ಯಗಳಲ್ಲಿ ಆತನ ವಿರುದ್ಧ ಪ್ರಕರಣಗಳು ದಾಖಲಾಗಿವೆ. ಕರ್ನಾಟಕವೊಂದರಲ್ಲೇ 90ಕ್ಕೂ ಅಧಿಕ ಪ್ರಕರಣಗಳಿವೆ ಎಂದು ವರದಿಯಾಗಿದೆ.

2019ರ ಜನವರಿ 19ರಂದು ಪಶ್ಚಿಮ ಆಫ್ರಿಕಾದ ಸೆನೆಗಲ್‌ನಲ್ಲಿ ರವಿ ಪೂಜಾರಿಯನ್ನು ಬಂಧಿಸಲಾಗಿತ್ತು. ಇದೀಗ ತಾಯಿಯ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ನ್ಯಾಯಾಲಯದ ಅನುಮತಿಯೊಂದಿಗೆ ಉಡುಪಿಗೆ ಆಗಮಿಸಿದ್ದು, ವಿಧಿವಿಧಾನಗಳ ಬಳಿಕ ಮತ್ತೆ ಬೆಂಗಳೂರಿಗೆ ಕರೆದೊಯ್ಯಲಾಗುತ್ತದೆ.

Tags: BreakingNewsKarnatakaMalpe NewsNewsHeadlinesRavi PujariRavi Pujari MotherUdupi NewsUnderworld Don Ravi PujariVijayasakshivijayasakshinews
ShareSendShare
Previous Post

ಸೋನಿಯಾ ಗಾಂಧಿ ವಿರುದ್ಧ ಆಕ್ಷೇಪಾರ್ಹ ಪೋಸ್ಟ್; ಬಿಜೆಪಿ ಸಂಸದೆ ಕಂಗನಾ ರಣಾವತ್ ವಿರುದ್ಧ FIR!

Vijaya Sakshi News Desk

Vijaya Sakshi News Desk

Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

Stay Connected test

  • 24k Followers
  • 99 Subscribers
  • Trending
  • Comments
  • Latest

ಪೊಲೀಸ್ ವೇಷದಲ್ಲಿ ಅಮಾಯಕರಿಗೆ ಬೆದರಿಕೆ: ಸಂಜಯ ಕೊಪ್ಪದ ಬಂಧನಕ್ಕೆ ಸರ್ಕಾರದ ಮುದ್ರೆ

October 24, 2026
ಲಕ್ಷ್ಮೇಶ್ವರ, ಶಿರಹಟ್ಟಿಯಲ್ಲಿ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಪರಿಶೀಲನೆ

ಲಕ್ಷ್ಮೇಶ್ವರ, ಶಿರಹಟ್ಟಿಯಲ್ಲಿ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಪರಿಶೀಲನೆ

November 4, 2026
ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

October 23, 2026
Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

October 25, 2026
Single Post Template – Fast News

ದೇವಸ್ಥಾನದಲ್ಲಿ 3 ಕೊಲೆ: ಹುಂಡಿಗಳ್ಳರ ಅಮಾನುಷ ಕೃತ್ಯ

0
Single Post Template – Fast News

ಕೋಡಿಹಳ್ಳಿಯವರಿಗೆ ಇಷ್ಟೊಂದು ಅಜ್ಞಾನ ಇದೆ ಅಂತ ಗೊತ್ತಿರಲಿಲ್ಲ: ಬಿ.ಸಿ.ಪಾಟೀಲ

0
Single Post Template – Fast News

ಕತ್ತಲಲ್ಲಿ ಕ್ವಾರಂಟೈನ್ ಸೆಂಟರ್; ಪರದಾಡಿದ ಕೊವಿಡ್ ರೋಗಿಗಳು!

0
Single Post Template – Fast News

ನಗರಸಭೆ ಆಯುಕ್ತರ ಕುರ್ಚಿ ಮಾರಾಟವಾಯ್ತೆ?
ಉಸ್ತುವಾರಿ ಸಚಿವರು ತಮ್ಮ ಹಠ ಸಾಧಿಸಿಯೇ ಬಿಟ್ಟರೆ?

0
ತಾಯಿಯ ಅಂತಿಮ ದರ್ಶನಕ್ಕೆ ಉಡುಪಿಗೆ ಬಂದ ಭೂಗತ ಪಾತಕಿ ರವಿ ಪೂಜಾರಿ; ಬಿಗಿ ಪೊಲೀಸ್ ಭದ್ರತೆ

ತಾಯಿಯ ಅಂತಿಮ ದರ್ಶನಕ್ಕೆ ಉಡುಪಿಗೆ ಬಂದ ಭೂಗತ ಪಾತಕಿ ರವಿ ಪೂಜಾರಿ; ಬಿಗಿ ಪೊಲೀಸ್ ಭದ್ರತೆ

November 14, 2026
26/11 ಮುಂಬೈ ಉಗ್ರರ ದಾಳಿ ನಡೆದಾಗ ಪಾರ್ಟಿ ಮಾಡುತ್ತಿದೆ: ನಟಿ ಕಂಗನಾ ರಣಾವತ್

ಸೋನಿಯಾ ಗಾಂಧಿ ವಿರುದ್ಧ ಆಕ್ಷೇಪಾರ್ಹ ಪೋಸ್ಟ್; ಬಿಜೆಪಿ ಸಂಸದೆ ಕಂಗನಾ ರಣಾವತ್ ವಿರುದ್ಧ FIR!

November 14, 2026
98 ಅನರ್ಹ ಆಸ್ತಿಗಳಿಗೆ ಇ-ಖಾತಾ ಮಂಜೂರು; ಬೆಂಗಳೂರಿನ ಕಂದಾಯ ಇಲಾಖೆಯಲ್ಲಿ ಮತ್ತೊಂದು ಅಕ್ರಮ ಬಯಲು!

98 ಅನರ್ಹ ಆಸ್ತಿಗಳಿಗೆ ಇ-ಖಾತಾ ಮಂಜೂರು; ಬೆಂಗಳೂರಿನ ಕಂದಾಯ ಇಲಾಖೆಯಲ್ಲಿ ಮತ್ತೊಂದು ಅಕ್ರಮ ಬಯಲು!

November 14, 2026
KPSC Veterinary Scam: 329 ಅಭ್ಯರ್ಥಿಗಳಿಗೆ CID ನೋಟಿಸ್; ಇಂದೇ ವಿಚಾರಣೆಗೆ ಹಾಜರಾಗುವಂತೆ ಸೂಚನೆ!

KPSC ಪಶುವೈದ್ಯಕೀಯ ನೇಮಕಾತಿ ಹಗರಣಕ್ಕೆ ಬಿಗ್ ಟ್ವಿಸ್ಟ್; 1,500 ಪುಟಗಳ ಚಾರ್ಜ್‌ಶೀಟ್ ಸಲ್ಲಿಸಿದ ED!

November 14, 2026

Recent News

We bring you the best Premium WordPress Themes that perfect for news, magazine, personal blog, etc. Check our landing page for details.

Browse by Category

Recent News

ತಾಯಿಯ ಅಂತಿಮ ದರ್ಶನಕ್ಕೆ ಉಡುಪಿಗೆ ಬಂದ ಭೂಗತ ಪಾತಕಿ ರವಿ ಪೂಜಾರಿ; ಬಿಗಿ ಪೊಲೀಸ್ ಭದ್ರತೆ

ತಾಯಿಯ ಅಂತಿಮ ದರ್ಶನಕ್ಕೆ ಉಡುಪಿಗೆ ಬಂದ ಭೂಗತ ಪಾತಕಿ ರವಿ ಪೂಜಾರಿ; ಬಿಗಿ ಪೊಲೀಸ್ ಭದ್ರತೆ

November 14, 2026
26/11 ಮುಂಬೈ ಉಗ್ರರ ದಾಳಿ ನಡೆದಾಗ ಪಾರ್ಟಿ ಮಾಡುತ್ತಿದೆ: ನಟಿ ಕಂಗನಾ ರಣಾವತ್

ಸೋನಿಯಾ ಗಾಂಧಿ ವಿರುದ್ಧ ಆಕ್ಷೇಪಾರ್ಹ ಪೋಸ್ಟ್; ಬಿಜೆಪಿ ಸಂಸದೆ ಕಂಗನಾ ರಣಾವತ್ ವಿರುದ್ಧ FIR!

November 14, 2026
  • About
  • Advertise
  • Privacy & Policy
  • Contact

Vijaya Sakshi 2026 CREATED BY Kalahamsa Infotech. PREMIUM WEBSITE SOLUTIONS.

error: Content is protected !!
Join WhatsApp ▤ Read E-Paper