ಬಳ್ಳಾರಿ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ವಿಷ ಸೇವಿಸಿದ್ದ ಕಿರಿಯ ಮಹಿಳಾ ಆರೋಗ್ಯ ಸುರಕ್ಷಾಧಿಕಾರಿಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ಘಟನೆ ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನಲ್ಲಿ ನಡೆದಿದೆ.

ಮೃತರನ್ನು 28 ವರ್ಷದ ಶೀಲಾ ಎಂದು ಗುರುತಿಸಲಾಗಿದೆ. ಅವರು ತಾಲೂಕಿನ ಬಲ್ಲಾಹುಣ್ಣಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕಿರಿಯ ಮಹಿಳಾ ಆರೋಗ್ಯ ಸುರಕ್ಷಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು.
ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಶೀಲಾ ವಿಷ ಸೇವಿಸಿದ್ದರು ಎನ್ನಲಾಗಿದೆ. ತಕ್ಷಣ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಎಸ್ಡಿಎಂ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಇಂದು ಅವರು ಮೃತಪಟ್ಟಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಹಗರಿಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.









