• About
  • Advertise
  • Privacy & Policy
  • Contact
Monday, November 16, 2026
Vijaya Sakshi News
Advertisement
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
Vijaya Sakshi News
  • Home
  • Gadag News
  • Karnataka News
  • Crime News
  • Politics News
  • Bengaluru News
  • Entertainment
  • Life Style
  • Sports News
Home Gadag News

ಪಿಡಬ್ಲ್ಯುಡಿ ಅಧಿಕಾರಿಗಳ ವಿರುದ್ಧ ರಾಯರಡ್ಡಿ ಗರಂ: ಕಾರ್ಯದರ್ಶಿಗೆ ಕರೆ ಮಾಡಿ ಕ್ರಮಕ್ಕೆ ಸೂಚನೆ

Vijaya Sakshi News Desk by Vijaya Sakshi News Desk
November 16, 2026
in Gadag News
ಪಿಡಬ್ಲ್ಯುಡಿ ಅಧಿಕಾರಿಗಳ ವಿರುದ್ಧ ರಾಯರಡ್ಡಿ ಗರಂ: ಕಾರ್ಯದರ್ಶಿಗೆ ಕರೆ ಮಾಡಿ ಕ್ರಮಕ್ಕೆ ಸೂಚನೆ
0
SHARES
73
VIEWS
Share on Facebook

ಗದಗ: ಜಿಲ್ಲೆಯ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ, ವೆಚ್ಚ ಹಾಗೂ ಅನುದಾನದ ಬಳಕೆಯ ಕುರಿತು ಸಮರ್ಪಕ ಮಾಹಿತಿ ಇಲ್ಲದೆ ಸಭೆಗೆ ಹಾಜರಾದ ಲೋಕೋಪಯೋಗಿ ಇಲಾಖೆ ಅಧಿಕಾರಿಗಳ ವಿರುದ್ಧ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ರಾಯರಡ್ಡಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ನಡೆದ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಎಂಜಿನಿಯರ್ ಉಮೇಶ್ ನಾಯ್ಕ ಅವರನ್ನು ತರಾಟೆಗೆ ತೆಗೆದುಕೊಂಡ ಸಚಿವರು, ಜಿಲ್ಲಾ ಮಟ್ಟದ ಜವಾಬ್ದಾರಿಯುತ ಅಧಿಕಾರಿಯಾಗಿ ಇಲಾಖೆಯ ಕಾಮಗಾರಿಗಳ ಸಂಪೂರ್ಣ ಮಾಹಿತಿ ಹೊಂದಿರದಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದರು. ಕಾಮಗಾರಿಗಳ ಸ್ಥಿತಿಗತಿ, ಪ್ರಗತಿ ಹಾಗೂ ಅನುದಾನದ ವೆಚ್ಚದ ವಿವರಗಳಿಲ್ಲದೆ ಸಭೆಗೆ ಹಾಜರಾಗಿರುವುದೇಕೆ ಎಂದು ಪ್ರಶ್ನಿಸಿದರು.

ಗದಗ ತಾಲೂಕಿನಲ್ಲಿ ಕಾಮಗಾರಿಗಳ ಪರಿಶೀಲನೆಗೆ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ (ಎಇಇ) ಹಾಜರಾಗಬೇಕಿದ್ದರೂ, ಅವರ ಬದಲಿಗೆ ಕಿರಿಯ ಎಂಜಿನಿಯರ್‌ಗಳನ್ನು (ಜೆಇ) ಕಳುಹಿಸಿರುವುದಕ್ಕೂ ಸಚಿವರು ಅಸಮಾಧಾನ ವ್ಯಕ್ತಪಡಿಸಿದರು. ಮಹತ್ವದ ಪ್ರಗತಿ ಪರಿಶೀಲನಾ ಸಭೆಯನ್ನು ಅಧಿಕಾರಿಗಳು ಗಂಭೀರವಾಗಿ ಪರಿಗಣಿಸದಿರುವುದಕ್ಕೆ ಆಕ್ಷೇಪಿಸಿದರು.

ಅಧಿಕಾರಿಗಳಿಂದ ಸಮರ್ಪಕ ಉತ್ತರ ದೊರೆಯದ ಹಿನ್ನೆಲೆಯಲ್ಲಿ ರಾಜ್ಯ ಲೋಕೋಪಯೋಗಿ ಇಲಾಖೆ ಕಾರ್ಯದರ್ಶಿಗೆ ದೂರವಾಣಿ ಕರೆ ಮಾಡಿದ ಸಚಿವರು, ಅಧಿಕಾರಿಗಳ ಕಾರ್ಯವೈಖರಿ ಕುರಿತು ಅಸಮಾಧಾನ ವ್ಯಕ್ತಪಡಿಸಿ, ಕರ್ತವ್ಯ ನಿರ್ಲಕ್ಷ್ಯ ತೋರಿದವರ ವಿರುದ್ಧ ನಿಯಮಾನುಸಾರ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

ಕಾಮಗಾರಿಗಳ ಸಂಪೂರ್ಣ ವರದಿಗೆ ಸೂಚನೆ:

ಕೆಆರ್‌ಐಡಿಎಲ್, ಕರ್ನಾಟಕ ಗೃಹ ಮಂಡಳಿ, ನಿರ್ಮಿತಿ ಕೇಂದ್ರ ಹಾಗೂ ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆ ಸೇರಿದಂತೆ ವಿವಿಧ ಸಂಸ್ಥೆಗಳ ಕಾಮಗಾರಿಗಳ ಪ್ರಗತಿಯನ್ನೂ ಸಚಿವರು ಪರಿಶೀಲಿಸಿದರು. ಪ್ರಗತಿಯಲ್ಲಿರುವ ಹಾಗೂ ಪೂರ್ಣಗೊಂಡಿರುವ ಕಾಮಗಾರಿಗಳ ವಿವರ, ಮಂಜೂರಾದ ಅನುದಾನ, ವೆಚ್ಚ, ಉಳಿಕೆ ಮೊತ್ತ ಮತ್ತು ಹೆಚ್ಚುವರಿ ಅನುದಾನದ ಅಗತ್ಯದ ಕುರಿತು ಸಮಗ್ರ ವರದಿ ಸಿದ್ಧಪಡಿಸಿ ಮರುದಿನದ ಸಭೆಗೆ ಸಲ್ಲಿಸುವಂತೆ ಸೂಚಿಸಿದರು.

ಸಾರ್ವಜನಿಕರ ತೆರಿಗೆ ಹಣದಲ್ಲಿ ಕೈಗೊಳ್ಳುವ ಅಭಿವೃದ್ಧಿ ಕಾಮಗಾರಿಗಳ ಗುಣಮಟ್ಟ, ಕಾಲಮಿತಿ ಹಾಗೂ ಪ್ರಗತಿಯ ಬಗ್ಗೆ ಅಧಿಕಾರಿಗಳು ಹೊಣೆಗಾರಿಕೆ ವಹಿಸಬೇಕು. ಸಭೆಗೆ ಬರುವ ಮುನ್ನವೇ ಇಲಾಖೆಯ ಎಲ್ಲ ಮಾಹಿತಿಯನ್ನು ಸಿದ್ಧಪಡಿಸಿಕೊಂಡು ಬರಬೇಕು ಎಂದು ತಾಕೀತು ಮಾಡಿದರು.

ಮರ ನೆಡುವ ಕಾರ್ಯದ ಪರಿಶೀಲನೆ:

ಅರಣ್ಯ ಇಲಾಖೆಯ ಕಾರ್ಯವೈಖರಿ ಬಗ್ಗೆಯೂ ಸಚಿವರು ಅಸಮಾಧಾನ ವ್ಯಕ್ತಪಡಿಸಿದರು. ಪ್ರತಿ ವರ್ಷ ಅನುದಾನದಲ್ಲಿ ಮರಗಳನ್ನು ನೆಡುತ್ತಿದ್ದರೂ ಜಿಲ್ಲೆಯಲ್ಲಿ ಹಸಿರು ಪ್ರದೇಶ ಹೆಚ್ಚಾಗದಿರುವುದಕ್ಕೆ ಕಾರಣವೇನು ಎಂದು ಪ್ರಶ್ನಿಸಿದರು. ಕಳೆದ ಮೂರು ವರ್ಷಗಳಲ್ಲಿ ಜಿಲ್ಲೆಯಲ್ಲಿ ಎಷ್ಟು ಮರಗಳನ್ನು ನೆಡಲಾಗಿದೆ ಎಂಬ ಸಂಪೂರ್ಣ ಮಾಹಿತಿ ನೀಡುವಂತೆ ಸೂಚಿಸಿದರು. ಸ್ವತಃ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುವುದಾಗಿಯೂ ತಿಳಿಸಿದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ, ಜಿಲ್ಲಾ ಪಂಚಾಯಿತಿ ಸಿಇಒ ಮುಕುಲ್ ಜೈನ್, ಎಸ್‌ಪಿ ಮಿಥುನ್ ಹೆಚ್.ಎನ್., ಅಪರ ಜಿಲ್ಲಾಧಿಕಾರಿ ಡಾ. ದುರ್ಗೇಶ್ ಕೆ.ಆರ್., ಜಿಲ್ಲಾ ಪಂಚಾಯಿತಿ ಮುಖ್ಯ ಲೆಕ್ಕಾಧಿಕಾರಿ ಪ್ರಶಾಂತ ಜೆ.ಸಿ. ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Tags: kannadanewsKarnatakaKarnataka governmentkarnataka politicsPWD DepartmentPWD OfficialsRayareddyVijayasakshivijayasakshinews
ShareSendShare
Previous Post

ಹಾರ್ಟ್ ಅಟ್ಯಾಕ್ ಮತ್ತು ಹಾರ್ಟ್ ಫೇಲ್ಯೂರ್ ಒಂದೇನಾ? ಇವೆರಡರ ನಡುವಿನ ವ್ಯತ್ಯಾಸ ತಿಳಿಯಿರಿ!

Next Post

ಧಾರವಾಡ: ಅನರ್ಹರಿಗೆ ಗೃಹಲಕ್ಷ್ಮಿ ಹಣ ಕಟ್? ಫಲಾನುಭವಿಗಳ ಮರುಪರಿಶೀಲನೆಗೆ ಡಿಸಿ ಸೂಚನೆ

Vijaya Sakshi News Desk

Vijaya Sakshi News Desk

Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

Next Post
ಧಾರವಾಡ: ಅನರ್ಹರಿಗೆ ಗೃಹಲಕ್ಷ್ಮಿ ಹಣ ಕಟ್? ಫಲಾನುಭವಿಗಳ ಮರುಪರಿಶೀಲನೆಗೆ ಡಿಸಿ ಸೂಚನೆ

ಧಾರವಾಡ: ಅನರ್ಹರಿಗೆ ಗೃಹಲಕ್ಷ್ಮಿ ಹಣ ಕಟ್? ಫಲಾನುಭವಿಗಳ ಮರುಪರಿಶೀಲನೆಗೆ ಡಿಸಿ ಸೂಚನೆ

Stay Connected test

  • 24k Followers
  • 99 Subscribers
  • Trending
  • Comments
  • Latest

ಪೊಲೀಸ್ ವೇಷದಲ್ಲಿ ಅಮಾಯಕರಿಗೆ ಬೆದರಿಕೆ: ಸಂಜಯ ಕೊಪ್ಪದ ಬಂಧನಕ್ಕೆ ಸರ್ಕಾರದ ಮುದ್ರೆ

October 24, 2026
ಲಕ್ಷ್ಮೇಶ್ವರ, ಶಿರಹಟ್ಟಿಯಲ್ಲಿ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಪರಿಶೀಲನೆ

ಲಕ್ಷ್ಮೇಶ್ವರ, ಶಿರಹಟ್ಟಿಯಲ್ಲಿ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಪರಿಶೀಲನೆ

November 4, 2026
ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

October 23, 2026
Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

October 25, 2026
Single Post Template – Fast News

ದೇವಸ್ಥಾನದಲ್ಲಿ 3 ಕೊಲೆ: ಹುಂಡಿಗಳ್ಳರ ಅಮಾನುಷ ಕೃತ್ಯ

0
Single Post Template – Fast News

ಕೋಡಿಹಳ್ಳಿಯವರಿಗೆ ಇಷ್ಟೊಂದು ಅಜ್ಞಾನ ಇದೆ ಅಂತ ಗೊತ್ತಿರಲಿಲ್ಲ: ಬಿ.ಸಿ.ಪಾಟೀಲ

0
Single Post Template – Fast News

ಕತ್ತಲಲ್ಲಿ ಕ್ವಾರಂಟೈನ್ ಸೆಂಟರ್; ಪರದಾಡಿದ ಕೊವಿಡ್ ರೋಗಿಗಳು!

0
Single Post Template – Fast News

ನಗರಸಭೆ ಆಯುಕ್ತರ ಕುರ್ಚಿ ಮಾರಾಟವಾಯ್ತೆ?
ಉಸ್ತುವಾರಿ ಸಚಿವರು ತಮ್ಮ ಹಠ ಸಾಧಿಸಿಯೇ ಬಿಟ್ಟರೆ?

0
ಧಾರವಾಡ: ಅನರ್ಹರಿಗೆ ಗೃಹಲಕ್ಷ್ಮಿ ಹಣ ಕಟ್? ಫಲಾನುಭವಿಗಳ ಮರುಪರಿಶೀಲನೆಗೆ ಡಿಸಿ ಸೂಚನೆ

ಧಾರವಾಡ: ಅನರ್ಹರಿಗೆ ಗೃಹಲಕ್ಷ್ಮಿ ಹಣ ಕಟ್? ಫಲಾನುಭವಿಗಳ ಮರುಪರಿಶೀಲನೆಗೆ ಡಿಸಿ ಸೂಚನೆ

November 16, 2026
ಪಿಡಬ್ಲ್ಯುಡಿ ಅಧಿಕಾರಿಗಳ ವಿರುದ್ಧ ರಾಯರಡ್ಡಿ ಗರಂ: ಕಾರ್ಯದರ್ಶಿಗೆ ಕರೆ ಮಾಡಿ ಕ್ರಮಕ್ಕೆ ಸೂಚನೆ

ಪಿಡಬ್ಲ್ಯುಡಿ ಅಧಿಕಾರಿಗಳ ವಿರುದ್ಧ ರಾಯರಡ್ಡಿ ಗರಂ: ಕಾರ್ಯದರ್ಶಿಗೆ ಕರೆ ಮಾಡಿ ಕ್ರಮಕ್ಕೆ ಸೂಚನೆ

November 16, 2026
ಹಾರ್ಟ್ ಅಟ್ಯಾಕ್ ಮತ್ತು ಹಾರ್ಟ್ ಫೇಲ್ಯೂರ್ ಒಂದೇನಾ? ಇವೆರಡರ ನಡುವಿನ ವ್ಯತ್ಯಾಸ ತಿಳಿಯಿರಿ!

ಹಾರ್ಟ್ ಅಟ್ಯಾಕ್ ಮತ್ತು ಹಾರ್ಟ್ ಫೇಲ್ಯೂರ್ ಒಂದೇನಾ? ಇವೆರಡರ ನಡುವಿನ ವ್ಯತ್ಯಾಸ ತಿಳಿಯಿರಿ!

November 16, 2026
ಸ್ಟಿಂಗ್ ಆಪರೇಷನ್ ಪ್ರಕರಣ: ಮೂರನೇ ಬಾರಿ ಸಿಸಿಬಿ ವಿಚಾರಣೆಗೆ ಹಾಜರಾದ ಕೃಪಾ ಆಳ್ವಾ

ಸ್ಟಿಂಗ್ ಆಪರೇಷನ್ ಪ್ರಕರಣ: ಮೂರನೇ ಬಾರಿ ಸಿಸಿಬಿ ವಿಚಾರಣೆಗೆ ಹಾಜರಾದ ಕೃಪಾ ಆಳ್ವಾ

November 16, 2026

Recent News

We bring you the best Premium WordPress Themes that perfect for news, magazine, personal blog, etc. Check our landing page for details.

Browse by Category

Recent News

ಧಾರವಾಡ: ಅನರ್ಹರಿಗೆ ಗೃಹಲಕ್ಷ್ಮಿ ಹಣ ಕಟ್? ಫಲಾನುಭವಿಗಳ ಮರುಪರಿಶೀಲನೆಗೆ ಡಿಸಿ ಸೂಚನೆ

ಧಾರವಾಡ: ಅನರ್ಹರಿಗೆ ಗೃಹಲಕ್ಷ್ಮಿ ಹಣ ಕಟ್? ಫಲಾನುಭವಿಗಳ ಮರುಪರಿಶೀಲನೆಗೆ ಡಿಸಿ ಸೂಚನೆ

November 16, 2026
ಪಿಡಬ್ಲ್ಯುಡಿ ಅಧಿಕಾರಿಗಳ ವಿರುದ್ಧ ರಾಯರಡ್ಡಿ ಗರಂ: ಕಾರ್ಯದರ್ಶಿಗೆ ಕರೆ ಮಾಡಿ ಕ್ರಮಕ್ಕೆ ಸೂಚನೆ

ಪಿಡಬ್ಲ್ಯುಡಿ ಅಧಿಕಾರಿಗಳ ವಿರುದ್ಧ ರಾಯರಡ್ಡಿ ಗರಂ: ಕಾರ್ಯದರ್ಶಿಗೆ ಕರೆ ಮಾಡಿ ಕ್ರಮಕ್ಕೆ ಸೂಚನೆ

November 16, 2026
  • About
  • Advertise
  • Privacy & Policy
  • Contact

Vijaya Sakshi 2026 CREATED BY Kalahamsa Infotech. PREMIUM WEBSITE SOLUTIONS.

error: Content is protected !!
Join WhatsApp ▤ Read E-Paper