ಚಿತ್ರದುರ್ಗ: ಜಿಲ್ಲೆಯ ಚಳ್ಳಕೆರೆ ತಾಲೂಕಿನಲ್ಲಿ ಸಾರಿಗೆ ಬಸ್ವೊಂದು ನಿಯಂತ್ರಣ ತಪ್ಪಿ ರಸ್ತೆ ಡಿವೈಡರ್ಗೆ ಡಿಕ್ಕಿ ಹೊಡೆದ ಘಟನೆ ನಡೆದಿದೆ. ಅದೃಷ್ಟವಶಾತ್ ಬಸ್ನಲ್ಲಿದ್ದ 42 ಪ್ರಯಾಣಿಕರು ಯಾವುದೇ ಗಂಭೀರ ಗಾಯಗಳಿಲ್ಲದೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಚಳ್ಳಕೆರೆ ತಾಲೂಕಿನ ಹೊಟ್ಟೆಜ್ಜನ ಕಪಿಲೆ ಎಂಬಲ್ಲಿ ಈ ಅಪಘಾತ ಸಂಭವಿಸಿದೆ.
ಸುರಪುರದಿಂದ ಬೆಂಗಳೂರಿಗೆ ತೆರಳುತ್ತಿದ್ದ ಸಾರಿಗೆ ಬಸ್ ಮಾರ್ಗಮಧ್ಯೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಡಿವೈಡರ್ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬಸ್ನ ಮುಂಭಾಗಕ್ಕೆ ಹಾನಿಯಾಗಿದೆ. ಅಪಘಾತ ಸಂಭವಿಸುತ್ತಿದ್ದಂತೆ ಸ್ಥಳೀಯರು ಹಾಗೂ ಪ್ರಯಾಣಿಕರು ನೆರವಿಗೆ ಧಾವಿಸಿ ರಕ್ಷಣಾ ಕಾರ್ಯಕ್ಕೆ ಮುಂದಾಗಿದ್ದಾರೆ.
ಬಸ್ನಲ್ಲಿದ್ದ ಒಟ್ಟು 42 ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ. ಘಟನೆ ಚಳ್ಳಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಅಪಘಾತಕ್ಕೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಚಾಲಕನ ನಿರ್ಲಕ್ಷ್ಯ ಅಥವಾ ಬಸ್ನಲ್ಲಿನ ತಾಂತ್ರಿಕ ದೋಷದಿಂದ ಘಟನೆ ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ. ಈ ಕುರಿತು ಪೊಲೀಸರು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.










