ಶಿವಮೊಗ್ಗ: ಶಿವಮೊಗ್ಗ ನಗರದ ಅಶೋಕ ರಸ್ತೆಯ ಬೇಡರ ಬೀದಿಯಲ್ಲಿರುವ ಯಲ್ಲಮ್ಮನ ದೇವಸ್ಥಾನದ ಗೋಡೆಯ ಮೇಲೆ ಕಿಡಿಗೇಡಿಗಳು ಅಸಭ್ಯ ಚಿಹ್ನೆ ಬಿಡಿಸಿರುವ ಘಟನೆ ಬೆಳಕಿಗೆ ಬಂದಿದೆ.
ದೇವಸ್ಥಾನದ ಗೋಡೆಯ ಮೇಲೆ ಮಧ್ಯದ ಬೆರಳು ತೋರಿಸುವ ಚಿಹ್ನೆಯನ್ನು ಬಿಡಿಸಲಾಗಿದ್ದು, ಈ ಕೃತ್ಯ ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ. ಧಾರ್ಮಿಕ ಕೇಂದ್ರದ ಗೋಡೆಯ ಮೇಲೆ ಇಂತಹ ಅಸಭ್ಯ ಚಿಹ್ನೆ ಬಿಡಿಸಿರುವುದಕ್ಕೆ ದೇವಸ್ಥಾನ ಸಮಿತಿ ತೀವ್ರ ಖಂಡನೆ ವ್ಯಕ್ತಪಡಿಸಿದೆ.
ದೇವಸ್ಥಾನದ ಗೌರವಕ್ಕೆ ಧಕ್ಕೆ ತರುವ ಕೃತ್ಯ ಎಸಗಿರುವವರನ್ನು ಪೊಲೀಸರು ಕೂಡಲೇ ಪತ್ತೆಹಚ್ಚಿ ಬಂಧಿಸಬೇಕು ಎಂದು ಸಮಿತಿ ಒತ್ತಾಯಿಸಿದೆ. ಈ ಕೃತ್ಯದ ಹಿಂದೆ ಯಾರಿದ್ದಾರೆ ಎಂಬುದನ್ನು ಸಮಗ್ರವಾಗಿ ತನಿಖೆ ನಡೆಸಬೇಕು ಎಂದು ಆಗ್ರಹಿಸಿದೆ.
ಇಂತಹ ಘಟನೆಗಳು ಮರುಕಳಿಸದಂತೆ ನಗರದ ಧಾರ್ಮಿಕ ಕೇಂದ್ರಗಳಿಗೆ ಸೂಕ್ತ ರಕ್ಷಣೆ ಒದಗಿಸಬೇಕು. ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ದೇವಸ್ಥಾನ ಸಮಿತಿ ಪೊಲೀಸರನ್ನು ಒತ್ತಾಯಿಸಿದೆ.









